Bengaluru: ಎರಡು ದಿನಗಳಿಂದ ಭಾರೀ ಸಂಚಾರ ದಟ್ಟಣೆ
Team Udayavani, Sep 28, 2023, 10:57 PM IST
ಬೆಂಗಳೂರು: ಸಿಲಿಕಾನ್ ಸಿಟಿಯ ಬಹುತೇಕ ರಸ್ತೆಗಳಲ್ಲಿ ಎರಡು ದಿನಗಳಿಂದ ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ವಿಭಾಗದ ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಸೆ.28ರಿಂದ ಅ.2ರ ವರೆಗೆ 5 ದಿನಗಳ ಕಾಲ ಸಾಲು ಸಾಲು ರಜೆಯಿರುವ ಹಿನ್ನೆಲೆಯಲ್ಲಿ ಬಹುತೇಕರು ಬೆಂಗಳೂರಿನಿಂದ ಊರಿನತ್ತ ಮುಖ ಮಾಡುತ್ತಿದ್ದಾರೆ. ಗಣೇಶ ವಿಸರ್ಜನೆ ಮತ್ತು ಜನ ಸಂಚಾರ ಹೆಚ್ಚಾಗುತ್ತಿದೆ. ಪರಿಣಾಮ ಬುಧವಾರ ಹಾಗೂ ಗುರುವಾರ ಸಂಜೆ, ಬೆಂಗಳೂರು ಟೆಕ್ ಕಾರಿಡಾರ್ನ ಹೊರ ವರ್ತುಲ ರಸ್ತೆಯು ಭಾರಿ ಸಂಚಾರ ದಟ್ಟಣೆಗೆ ಸಾಕ್ಷಿಯಾಯಿತು. ಬುಧವಾರ ಸಾಯಂಕಾಲ 4ರಿಂದ ರಾತ್ರಿ 8 ಗಂಟೆಯವರೆಗೆ ತೀವ್ರ ಟ್ರಾಫಿಕ್ ದಟ್ಟಣೆ ಉಂಟಾಗಿದೆ.
ಗುರುವಾರ ಕೊಂಚ ಸಂಚಾರ ದಟ್ಟಣೆ ತಗ್ಗಿದ್ದರೂ ಸಹಜ ಸ್ಥಿತಿಗೆ ಬಂದಿರಲಿಲ್ಲ. ಮೆಜೆಸ್ಟಿಕ್, ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಎಂಜಿ ರಸ್ತೆ, ರೆಸಿಡೆನ್ಸಿ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಸಹಿತ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಓಡಾಟ ಹೆಚ್ಚಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.