Bengaluru; ವಿಧಾನಸೌಧದ ಎದುರು ಧರಣಿ ಕೂತ ಸಂಸದ ಕೋಟ ಶ್ರೀನಿವಾಸ ಪೂಜಾರಿ
Team Udayavani, Jul 29, 2024, 11:09 AM IST
ಬೆಂಗಳೂರು: ತಮ್ಮ ವಿರುದ್ದ ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಆರೋಪವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಆರಂಭಿಸಿದ್ದಾರೆ.
ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿದ್ದಾಗ ಅವರು ನಿಭಾಯಿಸಿದ ಸಮಾಜ ಕಲ್ಯಾಣ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿತ್ತು ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿಯವರು ಆಗ್ರಹಿಸಿ ಒಂದು ವಾರದ ಗಡುವು ನೀಡಿದ್ದರು. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಜು.29ರ ಬೆಳಗ್ಗೆಯಿಂದ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಇಟ್ಟುಕೊಂಡು ಸಂಸದ ಕೋಟ ಶ್ರೀನಿವಾಸ ಪೂಜಾರಿ ಧರಣಿ ಕೂತಿದ್ದಾರೆ.
ಅವರಿಗೆ ಶಾಸಕ ಸುರೇಶ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಎನ್. ರವಿಕುಮಾರ್, ಶಾಂತರಾಮ ಸಿದ್ದಿ ಮೊದಲಾದವರು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.