Bengaluru Rameshwaram Cafe Case: ಜೈಲಲ್ಲಿರುವ ನಾಲ್ವರ ವಿಚಾರಣೆ
Team Udayavani, Mar 9, 2024, 7:00 AM IST
ಬೆಂಗಳೂರು/ಬಳ್ಳಾರಿ: ಬೆಂಗಳೂರಿನ “ರಾಮೇಶ್ವರಂ ಕೆಫೆ’ ಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ “ಬಳ್ಳಾರಿ ಮಾಡ್ಯೂಲ್’ಗೂ ಸಾಮ್ಯತೆ ಇರುವುದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ತನಿಖೆ ಯಲ್ಲಿ ಬೆಳಕಿಗೆ ಬಂದಿದೆ.
ಎನ್‌ಐಎ ಅಧಿಕಾರಿ ಗಳು ಕಳೆದ ವರ್ಷ ಡಿ. 18ರಂದು ಬಳ್ಳಾರಿ ಮಾಡ್ಯೂಲ್ (ಬಳ್ಳಾರಿಯನ್ನು ಕೇಂದ್ರವನ್ನಾಗಿಸಿ ಕೊಂಡು ಕೃತ್ಯ) ಪ್ರಕರಣದಲ್ಲಿ ಬಂಧನ ಕ್ಕೊಳಗಾಗಿ, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಎಂ.ಡಿ. ಸುಲೇಮಾನ್, ಸೈಯದ್ ಸಮೀರ್ ಮತ್ತು ಮಹಾ ರಾಷ್ಟ್ರದ ಮುಂಬಯಿಯಲ್ಲಿ ಅನಾಸ್ ಇಕ್ಬಾಲ್ ಶೇಖ್, ದಿಲ್ಲಿಯಲ್ಲಿ ಶಯಾನ್ ರೆಹಮಾನ್ ಅಲಿಯಾಸ್ ಹುಸೇನ್‌ನನ್ನು ಎರಡು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಬೆಂಗಳೂರಿನಿಂದ ತುಮಕೂರು ಮಾರ್ಗ ವಾಗಿ ಬಳ್ಳಾರಿಗೆ ತೆರಳಿ ಕೆಲವು ತಾಸು ಉಳಿದುಕೊಂಡಿದ್ದ ಎಂಬುದು ಪತ್ತೆಯಾಗಿದೆ. ಶಂಕಿತರು ಬಳಸಿದ್ದ ರಾಸಾಯನಿಕ ವಸ್ತುಗಳನ್ನೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಬಳಸಿದ್ದಾನೆ.
ಬಂಧಿತರು ಬಳ್ಳಾರಿ, ಬೆಂಗಳೂರಿ ನಲ್ಲಿ ವಿದ್ಯಾರ್ಥಿಗಳನ್ನು ಸಂಘಟನೆ ಮಾಡುತ್ತಿರುವುದು ಪತ್ತೆಯಾಗಿದೆ. ಜತೆಗೆ ಬ್ಯಾಡರಹಳ್ಳಿಯಲ್ಲಿ ಬಂಧನಕ್ಕೆ ಒಳಗಾದ ಮೂವರು ಶಂಕಿತರು ಕೆಲವು ಯುವಕರನ್ನು ಪ್ರಚೋದಿಸಿ ಸಂಘಟನೆ ಬಗ್ಗೆ ಒಲವು ಬರುವಂತೆ ಮಾಡಿರುವುದು ಪತ್ತೆಯಾಗಿತ್ತು.
ಐಸಿಸ್ ನಂಟಿನ ತನಿಖೆ
ಐಸಿಸ್ ಸಂಪರ್ಕ ಹೊಂದಿದ್ದ ಸುಲೇಮಾನ್ “ಬಳ್ಳಾರಿ ಮಾಡ್ಯೂಲ್’ ಹೆಸರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ. ಬಳ್ಳಾರಿಯ ಫರ್ಟಿಲೈಸರ್ ಮಳಿಗೆಯಲ್ಲಿ ಅಮೋನಿಯಂ ನೈಟ್ರೇಟ್ ಖರೀದಿಸಿದ್ದ. ಹೀಗಾಗಿ ಸುಲೇಮಾನ್ ಹಾಗೂ ಸಮೀರ್ ಇಬ್ಬರನ್ನೂ ಈಗ ಎನ್‌ಐಎ ಅಧಿಕಾರಿಗಳು ಪುನಃ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.