Bengaluru SHAMED again! : ಮತ್ತೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ
Team Udayavani, Jan 7, 2017, 4:03 PM IST
ಬೆಂಗಳೂರು : ಬೆಂಗಳೂರು ಪೂರ್ವದ ನಗರವಾರಾ ಮುಖ್ಯ ರಸ್ತೆಯಲ್ಲಿ ಇಂದು ಶುಕ್ರವಾರ ಅಪರಿಚಿತ ವ್ಯಕ್ತಿಯೋರ್ವ 23ರ ಹರೆಯದ ಮಹಿಳೆಗೆ ನಡು ರಸ್ತೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ನಡೆದಿದ್ದು ಇದರ ಸಿಸಿಟಿವಿ ಚಿತ್ರಿಕೆಯು ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಇಂದು ಶುಕ್ರವಾರ ಬೆಳಗ್ಗೆ 6.30ರ ಹೊತ್ತಿಗೆ ತಾನು ಆರೇಬಿಕ್ ಕಾಲೇಜ್ ಬಸ್ ಸ್ಟಾಪ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ತನ್ನನ್ನು ಬೆನ್ನಟ್ಟಿಕೊಂಡು ಬಂದು ಕಿರುಕುಳ ನೀಡಿದ ಎಂದ ಮಹಿಳೆಯು ಕೆ ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ ಎಂದು ವರದಿ ತಿಳಿಸಿದೆ.
ತಾನು ತನ್ನ ಉದ್ಯೋಗ ಸ್ಥಳಕ್ಕೆ ಹೋಗುತ್ತಿದ್ದಾಗ ತನ್ನನ್ನು ಬೆನ್ನಟ್ಟಿಕೊಂಡು ಬಂದ ಅಪರಿಚಿತ ವ್ಯಕ್ತಿಯು ತನಗೆ ಲೈಂಗಿಕ ಕಿರುಕುಳ ನೀಡಿದ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾಳೆ.
ಬಲವಂತವಾಗಿ ತನ್ನ ಮೇಲೆ ಎರಗಲು ಯತ್ನಿಸಿದ ಅಪರಿಚಿತ ವ್ಯಕ್ತಿಗೆ ಪ್ರತಿರೋಧ ಒಡ್ಡುವ ಯತ್ನದಲ್ಲಿ ತಾನು ಆತನ ಕೈಯನ್ನು ಕಚ್ಚುವಾಗ ತನ್ನ ನಾಲಗೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಾಯಗಳಾದವೆಂದು ಮಹಿಳೆ ಹೇಳಿದ್ದಾಳೆ. ಈ ಘಟನೆಯ ವೇಳೆ ಬೀದಿ ನಾಯಿಯೊಂದು ದೊಡ್ಡದಾಗಿ ಬೊಗಳ ತೊಡಗಿದಾಗ ಅಪರಿಚಿತ ಆರೋಪಿಯು ಸ್ಥಳದಿಂದ ಪಲಾಯನಗೈದನೆಂದು ವರದಿಗಳು ತಿಳಿಸಿವೆ.
ಬೆಂಗಳೂರು ಪೂರ್ವ ಕಮ್ಮನಹಳ್ಳಿಯಲ್ಲಿ ಮಹಿಳೆಯೊಬ್ಬಳಿಗೆ ನಾಲ್ವರು ಕಾಮಾಂಧರು ಲೈಂಗಿಕ ಕಿರುಕುಳ ನೀಡಿದ ಘಟನೆ ಇನ್ನೂ ಜನಮನದಲ್ಲಿ ಭೀತಿಯನ್ನು ಸೃಷ್ಟಿಸಿರುವ ವೇಳೆಯಲ್ಲಿ ಇಂದು ಶುಕ್ರವಾರ ನಡೆದಿರುವ ಈ ಹೊಸ ಘಟನೆ ಜನರಲ್ಲಿನ ಆತಂಕವನ್ನು ಇನ್ನಷ್ಟು ತೀವ್ರಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.