ಇಂದಿನಿಂದ ಬೆಂಗಳೂರು ಟೆಕ್ ಸಮಿಟ್
Team Udayavani, Nov 17, 2021, 7:10 AM IST
ಬೆಂಗಳೂರು: ಏಷ್ಯಾದ ಅತೀ ದೊಡ್ಡ ತಂತ್ರಜ್ಞಾನ ಸಂತೆ “ಬೆಂಗಳೂರು ಟೆಕ್ ಸಮಿಟ್’ನ 24ನೇ ಆವೃತ್ತಿ ಬುಧವಾರ ಆರಂಭವಾಗಲಿದೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ತಾಜ್ ವೆಸ್ಟ್‌ಎಂಡ್ ಹೊಟೇಲ್‌ನಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಮೇಳವನ್ನು ಉದ್ದೇಶಿಸಿ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನ್ನೆಟ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮಾತನಾಡಲಿದ್ದಾರೆ.
ಯುಎಇ, ಐರೋಪ್ಯ ಒಕ್ಕೂಟ, ವಿಯೆಟ್ನಾಂ, ದಕ್ಷಿಣ ಆಫ್ರಿಕ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, 30ಕ್ಕೂ ಹೆಚ್ಚು ದೇಶಗಳು ಇದಕ್ಕೆ ಸಾಕ್ಷಿಯಾಗಲಿವೆ ಎಂದು ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ| ಅಶ್ವತ್ಥನಾರಾಯಣ ತಿಳಿಸಿದರು.
ಇದನ್ನೂ ಓದಿ:5000 ಹೆರಿಗೆ ಮಾಡಿಸಿದ್ದ ನರ್ಸ್ ತಮ್ಮ ಹೆರಿಗೆ ವೇಳೆ ನಿಧನ!
ಬಿಟಿಎಸ್- 2021ರಲ್ಲಿ ವರ್ಚುವಲ್ ವಸ್ತುಪ್ರದರ್ಶನ ಏರ್ಪಡಿಸಲಾಗಿದ್ದು, 320ಕ್ಕೂ ಹೆಚ್ಚು ಕಂಪೆನಿಗಳು ಪಾಲ್ಗೊಳ್ಳಲಿವೆ.
ಇವುಗಳ ಪೈಕಿ ಸರಕಾರದ “ಎಲಿವೇಟ್’ ಯೋಜನೆ ಅಡಿ ಆಯ್ಕೆಯಾಗಿರುವ ನೂರು ಮಳಿಗೆಗಳು ಇರಲಿವೆ. 300ಕ್ಕೂ ಹೆಚ್ಚು ಕಂಪೆನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು ಸಕ್ರಿಯವಾಗಿ ಭಾಗವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.