Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು
ದೇಶಾದ್ಯಂತ ಸಂಚಲನ ಮೂಡಿಸಿದ್ದ ಬೆಂಗಳೂರಿನಲ್ಲಿ ನಡೆದ ಪ್ರಕರಣ
Team Udayavani, Jan 4, 2025, 7:27 PM IST
ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹ*ತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಪತ್ನಿ, ಅತ್ತೆ ಮತ್ತು ಬಾಮೈದನಿಗೆ ಬೆಂಗಳೂರಿನ ನ್ಯಾಯಾಲಯ ಶನಿವಾರ(ಡಿ4) ಜಾಮೀನು ಮಂಜೂರು ಮಾಡಿದೆ.
ಅತುಲ್ ಸುಭಾಷ್ ಡಿಸೆಂಬರ್ 9 ರಂದು ಪತ್ನಿ ಮತ್ತು ಆಕೆಯ ಕುಟುಂಬದವರ ಕಿರುಕುಳದ ಆರೋಪ ಹೊರಿಸಿ ಸುದೀರ್ಘ ಡೆ*ತ್ ನೋಟ್ ಬರೆದು ಆತ್ಮಹ*ತ್ಯೆ ಮಾಡಿಕೊಂಡಿದ್ದರು. ಪೊಲೀಸರು ಕಾರ್ಯಾಚರಣೆ ನಡೆಸಿ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾರನ್ನು ಬಂಧಿಸಿದ್ದರು. ಮೂವರೂ ಜಾಮೀನು ಕೋರಿ ಬೆಂಗಳೂರಿನ ಸೆಷನ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೆಷನ್ ಕೋರ್ಟ್ಗೆ ನಿರ್ದೇಶಿಸುವಂತೆ ಕರ್ನಾಟಕ ಹೈಕೋರ್ಟ್ಗೆ ಮನವಿ ಮಾಡಿದ್ದರು. ಅರ್ಜಿಯನ್ನು ಇಂದೇ ವಿಲೇವಾರಿ ಮಾಡುವಂತೆ ಸೆಷನ್ ಕೋರ್ಟ್ ಗೆ ಹೈಕೋರ್ಟ್ ಸೂಚಿಸಿತ್ತು.
ಡಿಸೆಂಬರ್ 14 ರಂದು, ನಿಕಿತಾ ಸಿಂಘಾನಿಯಾಳನ್ನು ಗುರುಗ್ರಾಮದಲ್ಲಿ ಬಂಧಿಸಲಾಗಿತ್ತು, ಆಕೆಯ ತಾಯಿ ಮತ್ತು ಸಹೋದರ ಅನುರಾಗ್ ರನ್ನು ಉತ್ತರ ಪ್ರದೇಶದ ಪ್ರಯಾಗ್ರಾಜ್ನಿಂದ ಬಂಧಿಸಿ ಕರೆ ತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.