ಸಿದ್ದರಾಮಯ್ಯರಿಂದ ಸಂವಿಧಾನಕ್ಕೆ ದ್ರೋಹ
Team Udayavani, Sep 2, 2017, 8:39 AM IST
ಚಿತ್ರದುರ್ಗ: ಇಂದು ರಾಜ್ಯಕ್ಕೆ ಕರಾಳ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನಕ್ಕೆ ಬೆಂಕಿ ಹಚ್ಚಿ ಸುಡುವುದೊಂದೇ ಬಾಕಿ ಇದೆ. ಸಂವಿಧಾನಕ್ಕೆ ಅಪಚಾರ ಎಸಗುವ ಉಳಿದೆಲ್ಲವನ್ನೂ ಮಾಡಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಆರ್.ಬಿ.ತಿಮ್ಮಾಪುರ ಬಾಗಲಕೋಟೆ ಜಿಲೆಯ ಅತ್ತೂರು ವಿಳಾಸ ನೀಡಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆಯಲ್ಲೂ ಮತ ಚಲಾಯಿಸಲು ಹೆಸರು ಸೇರಿಸಿಕೊಂಡಿದ್ದಾರೆ. ಟಿಎ, ಡಿಎಗಾಗಿ ಊರಿನ ಹಾಗೂ ಮತ ಚಲಾಯಿಸಲು ಬೆಂಗಳೂರು ವಿಳಾಸ ನೀಡುವುದು ವಿಪರ್ಯಾಸ. ಇಂತಹ ಸುಳ್ಳು ಹೇಳುವವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಬಿಜೆಪಿ ಹೋರಾಟಕ್ಕೆ ಜಯ
ಬೆಂಗಳೂರು: ಬಿಜೆಪಿ ಹೋರಾಟಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ ಅವರು ರಮಾನಾಥ್ ರೈ ಅವರಿಗೆ ಗೃಹಖಾತೆ ನೀಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈ ವಿಚಾರವನ್ನು ಇಲ್ಲಿಗೆ ನಾವು ಬಿಡುವುದಿಲ್ಲ. ನಮ್ಮ
ಹೋರಾಟದ ಫಲವಾಗಿಯೇ ಅವರಿಗೆ ಗೃಹಖಾತೆ ಕೊಟ್ಟಿಲ್ಲ. ಮಂಗಳೂರು ಚಲೋ ಕಾರ್ಯಕ್ರಮ ನಿಗದಿಯಂತೆ ನಡೆಯಲಿದ್ದು, ರಮಾನಾಥ್ ರೈ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದರು. ರಾಮಲಿಂಗಾರೆಡ್ಡಿಯವರಿಗೆ ಗೃಹಖಾತೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಇರುವ ಸಚಿವರಲ್ಲಿ ರಾಮಲಿಂಗಾರೆಡ್ಡಿ ಉತ್ತಮರಾಗಿದ್ದಾರೆ. ಅವರು ಹೇಗೆ ಕೆಲಸ ಮಾಡುತ್ತಾರೆ, ಕಾನೂನು ಸುವ್ಯವಸ್ಥೆ ಕಾಪಾಡುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದರು.
ಜನಪ್ರತಿನಿಧಿ ಕಾಯ್ದೆಯನ್ನು ಉಲ್ಲಂಸಿ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಆರ್.ಬಿ.ತಿಮ್ಮಾಪುರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಖಂಡನೀಯ. ಇದು ಕಾಂಗ್ರೆಸ್ಸಿನ ನೈತಿಕ ದಿವಾಳಿತನಕ್ಕೆ ಪುರಾವೆ.
ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.