ಪ್ರಜ್ವಲ್ ಸ್ಪರ್ಧೆ ಗೌಡರಿಗೆ ಬಿಟ್ಟಿದ್ದು: ಭವಾನಿ ರೇವಣ್ಣ
Team Udayavani, Oct 31, 2017, 7:00 AM IST
ಬೆಂಗಳೂರು:“ಪ್ರಜ್ವಲ್ ಚುನಾವಣೆ ಸ್ಪರ್ಧೆ ಬಗ್ಗೆ ಎಚ್.ಡಿ. ದೇವೇಗೌಡರು ತೀರ್ಮಾನಿಸುತ್ತಾರೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಪತ್ನಿ, ಹಾಸನ ಜಿಪಂ ಸದಸ್ಯೆ ಭವಾನಿ ರೇವಣ್ಣ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು, ಅವರಿಗೆ ಎಲ್ಲಿ ಟಿಕೆಟ್ ನೀಡಬೇಕು ಎಂಬುದ ದೇವೇಗೌಡರಿಗೆ ಬಿಟ್ಟ ವಿಚಾರ. ನಮ್ಮ ಕುಟುಂಬದಲ್ಲೇ ಏನೇ ತೀರ್ಮಾನವಾದರೂ ದೇವೇಗೌಡರದೇ ಅಂತಿಮ ನಿರ್ಧಾರ ಎಂದು ಹೇಳಿದರು.
ರಾಜಕೀಯ ವಿಚಾರ ಹಾಗೂ ಪಕ್ಷದ ವಿಷಯಕ್ಕೆ ಸಂಬಂಧಿಸಿದಂತೆ ಬಾಲಿಶ ಹೇಳಿಕೆ ಕೊಡಬೇಡ ಎಂದು ನಾನು ಪ್ರಜ್ವಲ್‌ಗೆ ತಿಳಿ ಹೇಳಿದ್ದೇನೆ ಎಂದರು. ಅನಿತಾ ಕುಮಾರಸ್ವಾಮಿ ಅವರು ನನ್ನ ಸಹೋದರಿ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ದೊರೆತರೆ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ ನನ್ನ ಮುಂದಿಲ್ಲ. ನಾನು ಒಂದೇ ಕ್ಷೇತ್ರಕ್ಕೆ ಸೀಮಿತವಾಗುವ
ಬದಲು ಪಕ್ಷದ ಕಾರ್ಯಕರ್ತೆಯಾಗಿ ಎಲ್ಲ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದರು. ಒಂದೊಮ್ಮೆ ಕಾರ್ಯಕತರು
ಹಾಗೂ ಮುಖಂಡರು ವಿಧಾನಸಭೆ ಚುನಾವಣೆಗೆ ಒತ್ತಡ ತಂದು ಗೌಡರು ಒಪ್ಪಿಗೆ ಸೂಚಿಸಿದರೆ ಎಂಬ ಪ್ರಶ್ನೆಗೆ, ಅದು
ದೇವರ ಇಚ್ಛೆ, ನೋಡೋಣ ಎಂದಷ್ಟೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡುಬಿದ್ರಿ,ಮಲ್ಪೆ,ಕುಂದಾಪುರ,ಹಂಗಾರಕಟ್ಟೆ ಸಹಿತ ರಾಜ್ಯದ 12 ಬಂದರುಗಳಿಗೆ ಹೈಟೆಕ್ ಸ್ಪರ್ಶ?
“ಕರಾಳ’ ಎಂಇಎಸ್‌ಗೆ ಹೈಕೋರ್ಟ್ ನೋಟಿಸ್; ನಿಲುವು ಸ್ಪಷ್ಟಪಡಿಸಲು ಎಂಇಎಸ್‌ಗೆ ಸೂಚನೆ
BJP: ವಿಜಯೇಂದ್ರ ವಿರುದ್ಧ ಈಗ ತಟಸ್ಥ ಬಣವೂ ಬಂಡಾಯ
ಸಿದ್ದು ಮುಂದೆ ಯಾರನ್ನೋ “ಸಿಎಂ’ ಅನ್ನೋದು ಅಪಮಾನ: ಸಿ.ಟಿ. ರವಿ
ವಿಟಿಯುನಲ್ಲಿ ಇಂಟರ್ನ್ ಶಿಪ್ ಬದಲು ಕೌಶಲಾಭಿವೃದ್ಧಿ ಕೋರ್ಸ್!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್