ನಾಳೆ ಭಾರತ್ ಬಂದ್;ಬೆಂಗಳೂರು ಸ್ತಬ್ಧ?;ರಾಜ್ಯದಲ್ಲಿ ಪ್ರತಿಭಟನೆ ಬಿಸಿ
Team Udayavani, Sep 9, 2018, 4:22 PM IST
ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಸೋಮವಾರದ “ಭಾರತ ಬಂದ್’ಗೆ ಹಲವು ಸಂಘಟನೆಗಳು ಕೈಜೋಡಿಸಿದ್ದು, ಇದರ ಬಿಸಿ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ತಟ್ಟುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನಾಳೆ ಪರಿಸ್ಥಿತಿಗೆ ಅನುಗುಣವಾಗಿ ಬಸ್ ಸಂಚರಿಸುವ ಸಾಧ್ಯತೆಗಳಿವೆ. ಓಲಾ, ಉಬರ್, ಆಟೋ ಚಾಲಕರು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದು ನಗರದಲ್ಲಿ ಜನಜೀವನ ಸ್ತಬ್ಧವಾಗುವ ಸಾಧ್ಯತೆಗಳಿವೆ.
ಬೆಂಗಳೂರು ನಗರದಲ್ಲಿ 15 ಸಾವಿರ ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬಿಎಂಟಿಸಿ,ಕೆಎಸ್‌ಆರ್‌ಟಿಸಿ ಸೇರಿದಂತೆ ಸರ್ಕಾರಿ ಬಸ್‌ಗಳ ಸಿಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗುವ ಹಿನ್ನಲೆಯಲ್ಲಿ ಸಂಚಾರ ನಡೆಸುವ ಸಾಧ್ಯತೆಗಳು ವಿರಳ.
ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಬೀದಿಗಿಳಿದು ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ.
ಸಂಜೆ 3 ಗಂಟೆಯ ಬಳಿಕ ಬಸ್ ಸಂಚಾರ ಆರಂಭವಾಗುವ ಸಾಧ್ಯತೆಗಳಿವೆ.
ದಕ್ಷಿಣ ಕನ್ನಡದಲ್ಲಿ ಬೆಂಬಲ: ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ನಾಳೆಯ ಭಾರತ್ ಬಂದ್ ಗೆ ಬೆಂಬಲ ನೀಡಿದೆ. ಹಾಗಾಗಿ ನಾಳೆ ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಾಟ ಇರುವುದಿಲ್ಲ.
ಬಳ್ಳಾರಿ, ರಾಯಚೂರು, ಚಾಮರಾಜನಗರ, ವಿಜಯಪುರ , ಕಲಬುರಗಿ, ಬಾಗಲಕೋಟೆ, ಮೈಸೂರು ಮತ್ತು ಕೊಪ್ಪಳದಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಹೊಟೇಲ್ ಬಂದ್ ಇಲ್ಲ
ಮುಷ್ಕರ ಬಂದ್‌ನಿಂದ ಎನೂ ಸಾಧಿಸಲು ಸಾಧ್ಯವಿಲ್ಲ. ರಾಜಕೀಯ ಉದ್ದೇಶದ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಹೊಟೇಲ್ ಮಾಲೀಕರ ಸಂಘ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.