ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್ ಒಲವು
Team Udayavani, Oct 14, 2022, 2:47 PM IST
ಹೈದರಾಬಾದ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಅವರು ಭಾರತ್ ಬಯೋಟೆಕ್ ನ ಅಧ್ಯಕ್ಷ ಡಾ. ಕೃಷ್ಣ ಎಂ. ಎಲ್ಲ ಅವರನ್ನು ಹೈದರಾಬಾದ್ ನಲ್ಲಿ ಶುಕ್ರವಾರ ಭೇಟಿಯಾದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಕೃಷ್ಣ ಅವರ ಜತೆ ಮಾತುಕತೆ ನಡೆಸಿದ ಸಚಿವರು, “ಸುಲಲಿತ ವ್ಯವಹಾರಕ್ಕೆ ಒತ್ತು ನೀಡುವ ಕರ್ನಾಟಕದಲ್ಲಿ ಹೂಡಿಕೆದಾರರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಬದ್ಧ” ಎಂದು ಭರವಸೆ ನೀಡಿದರು.
ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನ.2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಭೆಗೆ ಕೃಷ್ಣ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದರು.
ಇದನ್ನೂ ಓದಿ:ಅಗ್ರಿಗೇಟರ್ ನಿಯಮ ಮಾರ್ಪಾಡಿಗೆ ಚಿಂತನೆ; ಆಟೋ ಸೇವೆ ಸೇರ್ಪಡೆ?
“ಉದ್ಯಮಕ್ಕೆ ಪೂರಕ ವಾತಾವರಣ ಇರುವ ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಉದ್ದೇಶ ಇದೆ,” ಎಂದು ಕೃಷ್ಣ ತಿಳಿಸಿದರು.
ಸಮಾವೇಶದ ಪೂರ್ವಭಾವಿಯಾಗಿ ಹೈದರಾಬಾದ್‌ನಲ್ಲಿ ಕೈಗೊಂಡಿರುವ ರೋಡ್‌ಶೋನಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.