ಭಾರತ್ ಜೋಡೋ ಯಾತ್ರೆ: ಧನ್ಯವಾದ ಅರ್ಪಿಸಿದ ಡಿ.ಕೆ. ಶಿವಕುಮಾರ್
ರಾಜ್ಯದಲ್ಲಿ ಭಾರತ್ ಜೋಡೋ ಮುಕ್ತಾಯ
Team Udayavani, Oct 22, 2022, 10:29 PM IST
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸಿ ನಮಗೆ ಶಕ್ತಿ ತುಂಬಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಭಾರತ್ ಜೋಡೋ ಮುಕ್ತಾಯ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಅವರು, ಕಳೆದ ತಿಂಗಳು 30ರಂದು ಗುಂಡ್ಲುಪೇಟೆಯಲ್ಲಿ ಸ್ವಾಗತ ಮಾಡಿದ್ದೆ. ರಾಜ್ಯದಲ್ಲಿ 22 ದಿನಗಳ ಕಾಲ ಹೆಜ್ಜೆ ಹಾಕಿದ್ದು, ಭಾನುವಾರ ರಾಜ್ಯವನ್ನು ದಾಟಿ ಯಾತ್ರೆ ಮುಂದುವರಿಸುತ್ತಿದ್ದು, ಈ ಸಮಯದಲ್ಲಿ ನಾನು ಯಾತ್ರೆಯಲ್ಲಿ ಪಾಲ್ಗೊಂಡ ಪ್ರತ್ಯಕ್ಷ ಪರೋಕ್ಷ ಸಹಕಾರ ನೀಡಿದ ರಾಜ್ಯದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
ದೇಶ ಉಳಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕುವ ದಿಟ್ಟ ನಿರ್ಧಾರ ಕೈಗೊಂಡಿದ್ದೀರಿ. ಹೀಗಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಯದಲ್ಲಿ ಸೋನಿಯಾ ಗಾಂಧಿ ಅವರನ್ನು ಮರೆಯುವಂತಿಲ್ಲ. ಎರಡೂವರೆ ವರ್ಷಗಳ ಹಿಂದೆ ನನ್ನ ಮೇಲೆ ನಂಬಿಕೆ ಇಟ್ಟು ನನಗೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದು, ನನ್ನ ಅಧಿಕಾರದ ಅವಧಿಯಲ್ಲಿ ಇಂತಹ ಐತಿಹಾಸಿಕ ಯಾತ್ರೆ ನಡೆಸುವ ಅವಕಾಶ ಸಿಕ್ಕಿದೆ. ಹೀಗಾಗಿ ಈ ಸಮಯದಲ್ಲಿ ಅವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.