ವಲಸೆಗೆ ಮೂಲ ಬಿಜೆಪಿಗರ ಅಪಸ್ವರ ; ಪಕ್ಷನಿಷ್ಠರಿಗೆ ಅವಕಾಶ ಕಡಿಮೆಯಾಗುವ ಆತಂಕ
Team Udayavani, Oct 4, 2021, 6:20 AM IST
ಬೆಂಗಳೂರು: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ 20 ಮಂದಿ ಹಾಲಿ, ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ, ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಜತೆ ಮಾತುಕತೆ ನಡೆದಿದೆ ಎಂಬ ಮಾಹಿತಿ ಬಿಜೆಪಿಯಲ್ಲಿ ತೀವ್ರ ತಳಮಳಕ್ಕೆ ಕಾರಣವಾಗಿದೆ. ಅನ್ಯ ಪಕ್ಷಗಳಿಂದ ನಾಯಕರನ್ನು ಆಮದು ಮಾಡಿಕೊಳ್ಳುವ ವಿಚಾರಕ್ಕೆ ಪಕ್ಷದಲ್ಲಿ ಭಾರೀ ಆಕ್ಷೇಪ ವ್ಯಕ್ತ ವಾಗಿದೆ ಎನ್ನಲಾಗುತ್ತಿದೆ.
ಬಿಜೆಪಿ ಸರಕಾರ ರಚನೆಗೆ ಕಾರಣರಾದ ಕಾಂಗ್ರೆಸ್, ಜೆಡಿಎಸ್‌ನಿಂದ ವಲಸೆ ಬಂದ ಶಾಸಕರಿಗೆ ಹೆಚ್ಚಿನ ಪ್ರಾಧಾನ್ಯ ನೀಡಲಾಗುತ್ತಿದೆ ಎಂಬ ಅಸಮಾಧಾನ ಈಗಾಗಲೇ ಪಕ್ಷದಲ್ಲಿದೆ. ಸರಕಾರ ದಲ್ಲಿ ಅರ್ಧಕ್ಕೂ ಹೆಚ್ಚು ಸಚಿವರು ವಲಸಿಗರೇ ಆಗಿದ್ದು, ಬಿಜೆಪಿಯ ಮೂಲ ಕಾರ್ಯ ಕರ್ತರ ಅಹವಾಲುಗಳಿಗೆ ಅವರಿಂದ ಮಾನ್ಯತೆ ದೊರೆ ಯುತ್ತಿಲ್ಲ ಎಂಬ ಅತೃಪ್ತಿ ಇದೆ ಎನ್ನಲಾಗುತ್ತಿದೆ.
ಇನ್ನಷ್ಟು ನಾಯಕರು ಪಕ್ಷಗಳಿಂದ ಬಿಜೆಪಿಗೆ ವಲಸೆ ಬಂದರೆ ಅವರಿಗೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿ ಸಲು ಅವಕಾಶ ನೀಡಬೇಕಾಗುತ್ತದೆ. ಆಗ ಮೂಲ ಬಿಜೆಪಿ ಮುಖಂಡರಿಗೆ ಅವಕಾಶ ಸಿಗದು ಎಂದು ಕಾರ್ಯಕರ್ತರು ಪಕ್ಷದ ನಾಯಕರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ ಎನ್ನಲಾಗುತ್ತಿದೆ.
ಹಳೆ ಮೈಸೂರು ಭಾಗದಲ್ಲಿ ಪಕ್ಷದ ಚಟುವಟಿಕೆಗಳು ವಿಸ್ತಾರಗೊಂಡಿದ್ದು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿಯೂ ಪಕ್ಷ ಗಟ್ಟಿಗೊಳ್ಳುತ್ತಿದೆ. ಚುನಾವಣೆಯ ಲೆಕ್ಕಾಚಾರದಲ್ಲಿ ಅನ್ಯ ಪಕ್ಷಗಳಿಂದ ನಾಯಕರನ್ನು ಆಮದು ಮಾಡಿಕೊಂಡರೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಇದನ್ನೂ ಓದಿ:ಮೇಕೆದಾಟು ನಿಲುವಿಗೆ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ
ವರಿಷ್ಠರ ಆಲೋಚನೆ
ಅನ್ಯ ಪಕ್ಷಗಳಿಂದ ನಾಯಕರನ್ನು ಕರೆತರುವ ಕುರಿತು ಪಕ್ಷದ ವರಿಷ್ಠರು ಸ್ಪಷ್ಟ ಸೂಚನೆ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಲಸಿಗರ ಸಂಖ್ಯೆ ಹೆಚ್ಚಾದರೆ ಪಕ್ಷದ ಮೂಲ ಸಿದ್ಧಾಂತವೇ ಮರೆಯಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ರಾಜ್ಯ ಕೆಲವು ನಾಯಕರು ವರಿಷ್ಠರ ಗಮನಕ್ಕೆ ತಂದಿದ್ದಾರೆ. ಇದೇ ಕಾರಣಕ್ಕೆ ಈ ಕುರಿತು ವರಿಷ್ಠರು ಇನ್ನೂ ಸ್ಪಷ್ಟ ಸೂಚನೆ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ನಾಯಕರ ಬೇಸರ
ಪಕ್ಷದ ಬೇರುಗಳನ್ನು ವಿಸ್ತರಿಸಲು ಕೆಲವು ಸಮುದಾಯಗಳ ನಾಯಕ ರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಅಸಮಾಧಾನ ವ್ಯಕ್ತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಲಿತ ಬಲಗೈ ಸಮುದಾಯ, ಒಕ್ಕಲಿಗ ಸಮುದಾಯದ ನಾಯಕರನ್ನು ಸೇರಿಸಿಕೊಳ್ಳುವುದರಿಂದ ಪಕ್ಷದಲ್ಲಿ ಈಗಾಗಲೇ ಇರುವ ಈ ಸಮುದಾಯಗಳ ನಾಯಕರು ತಮ್ಮ ಭವಿಷ್ಯಕ್ಕೆ ಮಾರಕವಾಗುತ್ತದೆ ಎಂಬ ಆತಂಕದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಲಾಗದೆ ಆಪ್ತರ ಬಳಿ ಬೇಸರ ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.