ನಳಿನ್ ಕಟೀಲ್ ಸಮ್ಮುಖದಲ್ಲಿ ಕಮಲ ಪಾಳಯ ಸೇರಿದ ಭಾಸ್ಕರ್ ರಾವ್
Team Udayavani, Mar 1, 2023, 11:39 AM IST
ಬೆಂಗಳೂರು: ಆಮ್ ಆದ್ಮಿ ಪಕ್ಷದಲ್ಲಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಬುಧವಾರ ಅಧಿಕೃತವಾಗಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.
ಬಳಿಕ ಮಾತನಾಡಿದ ಅವರು, ನಾನು ಬಿಜೆಪಿಗೆ ಹೆಚ್ಚಿನ ಕೊಡುಗೆ ನೀಡಬಹುದು ಎಂದು ಭಾವಿಸುತ್ತೇನೆ. ಬಿಜೆಪಿಯು ದೇಶವ್ಯಾಪಿ ಸಂಘಟನೆ ಹೊಂದಿರುವ ಪಕ್ಷ. ಪ್ರಧಾನಿ ಮೋದಿಯವರ ದೂರದೃಷ್ಟಿ ನನ್ನನ್ನು ಪಕ್ಷಕ್ಕೆ ಸೇರಲು ಪ್ರೇರೇಪಿಸಿತು. ಆಪ್ ದೊಡ್ಡದಾಗಿ ಬೆಳೆಯಲ್ಲ. ಅವರು ಒಂದು ಕೂಟದ ಕೈಯಲ್ಲಿದ್ದಾರೆ, ಅವರ ಇಬ್ಬರು ಮಂತ್ರಿಗಳು ಜೈಲಿನಲ್ಲಿರುವುದು ನಾಚಿಕೆಗೇಡಿನ ಸಂಗತಿ. ಪಕ್ಷದಲ್ಲಿ ಸ್ಪಷ್ಟತೆ ಇಲ್ಲ ಎಂದರು.
ಇದನ್ನೂ ಓದಿ:ಮುಕೇಶ್ ಅಂಬಾನಿ ಮತ್ತು ಕುಟುಂಬಕ್ಕೆ ದೇಶ, ವಿದೇಶದಲ್ಲೂ ಝಡ್ ಪ್ಲಸ್ ಭದ್ರತೆ ನೀಡಿ: ಸುಪ್ರೀಂ
ಪೃಥ್ವಿ ರೆಡ್ಡಿ ಆಪ್ ರಾಜ್ಯಾಧ್ಯಕ್ಷರಾಗಿ ಮುಂದುವರಿದ ಬಳಿಕ ಪಕ್ಷದ ಚಟುವಟಿಕೆಗಳಿಂದ ತುಸು ದೂರವಾಗಿದ್ದ ಭಾಸ್ಕರ್ ರಾವ್, ಚುನಾವಣ ಹೊಸ್ತಿಲಲ್ಲಿ ಬಿಜೆಪಿ ಸೇರುತ್ತಿದ್ದಾರೆ.
Former Police Commissioner of Bengaluru and AAP Leader Bhaskar Rao Joins BJP in Presence of BJP State President Naleen Kumar Kateel… @Nimmabhaskar22 @BJP4Karnataka pic.twitter.com/c3C24E9eft
— Yasir Mushtaq (@path2shah) March 1, 2023
ರಾಜ್ಯ ಚುನಾವಣ ಸಹ ಉಸ್ತುವಾರಿ, ನಿವೃತ್ತ ಐಪಿಎಸ್ ಕೆ. ಅಣ್ಣಾಮಲೈ ಅವರು ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ ಹಿಂದೆ ಮಹತ್ವದ ಪಾತ್ರ ವಹಿಸಿದ್ದಾರೆಂದು ಹೇಳಲಾಗಿದೆ.
ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅಣ್ಣಾಮಲೈ ಜತೆ ಭಾಸ್ಕರ್ ರಾವ್ ಚರ್ಚೆ ನಡೆಸಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಂಘ-ಪರಿವಾರದ ಹಿರಿಯರನ್ನು ಈ ಹಿಂದೆಯೇ ಅವರು ಭೇಟಿ ಮಾಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.