POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್
Team Udayavani, Jun 14, 2024, 5:00 PM IST
ಬೆಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ಸಮಾಧಾನ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ಅವರನ್ನು ಸದ್ಯ ಬಂಧನ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯವರೆಗೆ ಅವರನ್ನು ಬಂಧಿಸುವಂತಿಲ್ಲ ಎಂದಿದೆ.
ಬಿಎಸ್ ಯಡಿಯೂರಪ್ಪ ಅವರು ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವುದು ಬೇಡ ಎಂದು ಉಚ್ಛ ನ್ಯಾಯಾಲಯದ ಪೀಠ ಹೇಳಿದೆ.
ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದರು. “ಪೋಕ್ಸೊ ಕೇಸ್‌ಗೆ ಸಂಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ಇನ್ನೊಂದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೂರುದಾರೆಗೆ ಬ್ಲ್ಯಾಕ್‌ಮೇಲ್ ಮಾಡುವುದೇ ಕೆಲಸವಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಆಕೆಯ ವೃತ್ತಿಯೇ ಬೇರೆಯವರ ವಿರುದ್ಧ ಕೇಸ್ ದಾಖಲಿಸುವುದಾಗಿದೆ. ಇದುವರೆಗೆ ಮಹಿಳೆಯು ಸುಮಾರು 53 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಲ್ಲಿ ಭಾವನಾತ್ಮಕ ಅಂಶಗಳಿಗಿಂತ ವಾಸ್ತವಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ” ಎಂದು ಹೇಳಿದರು.
ಏನಿದು ಪ್ರಕರಣ?
ಕೆಲ ತಿಂಗಳ ಹಿಂದೆ ಸಹಾಯ ಬಯಸಿ, ಅಪ್ರಾಪ್ತ ವಯಸ್ಕ ಪುತ್ರಿ ಜತೆ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆ ಅಪ್ತಾಪ್ತೆ ಜತೆಗೆ ಬಿಎಸ್‌ವೈ ಅಸಭ್ಯ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು. ಯಡಿಯೂರಪ್ಪ ವಿರುದ್ಧ ಸಾಕ್ಷ್ಯ ಕಲೆಹಾಕುತ್ತಿದ್ದ ಸಿಐಡಿ ಅಧಿಕಾರಿಗಳು ಬುಧವಾರ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಆದರೆ ಬಿಎಸ್‌ವೈ ಗೈರಾದ ಕಾರಣ ಸಿಐಡಿ ಮನವಿಯನ್ನು ಪುರಸ್ಕರಿಸಿ ಬೆಂಗಳೂರಿನ 1ನೇ ತ್ವರಿತಗತಿಯ ನ್ಯಾಯಾಲಯವು ಗುರುವಾರ ಜಾಮೀನುರಹಿತ ವಾರಂಟ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.