ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಬೊಮ್ಮಾಯಿ ಗೋಪೂಜೆ: ಶುಭ ಹಾರೈಸಿದ ಪ್ರಧಾನಿ ಮೋದಿ
Team Udayavani, Jan 28, 2022, 9:17 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್ ಟಿ ನಗರ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ್ಮದಿನದ ಹಾಗೂ ಅವರ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಶುಭಕೋರಿದರು.
ಇದನ್ನೂ ಓದಿ:ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, “ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿಯವರು ನಿನ್ನೆಯೇ ಕರೆ ಮಾಡಿ ಶುಭ ಕೋರಿದ್ದರು. ಇಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಶುಭ ಕೋರಿದ ಎಲ್ಲರಿಗೂ ಧನ್ಯವಾದಗಳು” ಎಂದರು.
“ಇವರ ಮಾರ್ಗದರ್ಶನದಲ್ಲಿ ಕೆಲಸ ಮಾಡಲು ಪ್ರೇರಣೆ ಸಿಕ್ಕಿದೆ. ಇನ್ನಷ್ಟು ಗಟ್ಟಿಯಾಗಿ ಮತ್ತು ಸ್ಪೂರ್ತಿಯಾಗಿ ರಾಜ್ಯದ ಮುನ್ನಡೆಸುತ್ತೇನೆ. ಸರ್ಕಾರಕ್ಕೆ ಆರು ತಿಂಗಳಾಗಿದೆ. ಕೋವಿಡ್ ನಿರ್ವಹಣೆ, ಪ್ರವಾಹ ನಿರ್ವಹಣೆ ಬಗ್ಗೆ ಕಿರುಹೊತ್ತಿಗೆ ಬಿಡುಗಡೆ ಮಾಡುತ್ತೇವೆ. ರಾಜ್ಯದ ಆರ್ಥಿಕ ದೃಷ್ಟಿಯಿಂದ ಒಳ್ಳೆಯ ಬಜೆಟ್ ನೀಡಬೇಕಿದೆ, ಚುನಾವಣೆಯ ವರ್ಷದ ಬಜೆಟ್ ಸಹ ಆಗಿದೆ. ರಾಜ್ಯದ ಒಟ್ಟು ಬೆಳವಣಿಗೆ ದೃಷ್ಟಿಯಿಂದ ಬಜೆಟ್ ನೀಡಬೇಕಿದೆ” ಎಂದರು.
ಮೋದಿ ಟ್ವೀಟ್: ಸಿಎಂ ಬೊಮ್ಮಾಯಿ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. “ಕರ್ನಾಟಕದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ಕರ್ನಾಟಕದ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ಮತ್ತು ಘನತೆಯ ಜೀವನವನ್ನು ಮತ್ತು ಬಡವರ ಏಳಿಗೆಯನ್ನು ಉತ್ತಮಗೊಳಿಸಲು ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
Best wishes to Karnataka’s CM Shri @BSBommai Ji on his birthday. He is making outstanding efforts to boost Karnataka’s growth trajectory and ensure a life of dignity as well as prosperity for the poor. Praying for his long and healthy life.
— Narendra Modi (@narendramodi) January 28, 2022
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.