ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ಹಲವರ ಬಂಧನ
Team Udayavani, May 28, 2018, 8:35 AM IST
ಬೆಂಗಳೂರು : ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ ಕರ್ನಾಟಕ ಬಂದ್ ಗೆ ರಾಜ್ಯವ್ಯಾಪಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ನಡೆಯುತ್ತಿದ್ದು, ಸಾರಿಗೆ ಸಂಚಾರ, ಅಂಗಡಿ ಮುಂಗಟ್ಟುಗಳ ವ್ಯವಹಾರಕ್ಕೆ ಯಾವುದೇ ತೊಂದರೆಯಾಗಿಲ್ಲ.
ಮೈಸೂರಿನ ಬನ್ನಿಮಂಟಪದ ಬಳಿ ಸಂಸದ ಪ್ರತಾಪ್ ಸಿಂಹ ಜೊತೆ ಬಿಜೆಪಿ ಕಾರ್ಯಕರ್ತರು ಬಸ್ಸು ತಡೆದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಪೊಲೀಸರು ಸಂಸದ ಪ್ರತಾಪ್ ಸಿಂಹ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್ ರಾಲಿ ನಡೆಸಿದರು. ಬಸ್ ನಿಲ್ದಾಣದಲ್ಲಿ ರೈತ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಆದರೆ, ಬಿಜೆಪಿಯ ಪ್ರಾಬಲ್ಯವಿರುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ವ್ಯಕ್ತವಾಗಿಲ್ಲ. ಕೆಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ, ಜನಜೀವನ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
ರಾಜ್ಯವ್ಯಾಪಿ ಬಂದ್ ಗೆ ನೀರಸ ಪ್ರತಿಕ್ರೀಯೆ ವ್ಯಕ್ತವಾಗಿದ್ದು ಕೋಲಾರ , ಕೊಪ್ಪಳ , ಧಾರವಾಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಪ್ರದೇಶದಲ್ಲಿ ಬಸ್ಸು ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.