Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ ಕಾಂಗ್ರೆಸ್ ; ಜಾಹೀರಾತು ಬಿಜೆಪಿ ಆಕ್ರೋಶ
Team Udayavani, Apr 19, 2024, 11:21 PM IST
ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿದ ಚೊಂಬಿನ ಜಾಹೀರಾತು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ಬಿಡುಗಡೆ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರಿನಲ್ಲಿ ಶುಕ್ರವಾರ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದು “ಕೈ ಬಿಟ್ಟ ಯೋಜನೆಗಳು, ಕೈ ಕೊಟ್ಟ ಕಾಂಗ್ರೆಸ್ ಸರಕಾರ’ ಎಂಬ ಹೆಸರಿನಲ್ಲಿ ಬಿಜೆಪಿ ಆರೋಪಪಟ್ಟಿ ಸಲ್ಲಿಸಿ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿ ವಿರುದ್ಧ ನೀವು ಚೊಂಬಿನ ಜಾಹೀರಾತು ನೀಡಿರಬಹುದು. ಆದರೆ ಕರ್ನಾಟಕದ ಜನತೆಗೆ ಚೊಂಬಿನಷ್ಟು ಕುಡಿಯುವ ನೀರು ಇಲ್ಲದಂಥ ಪರಿಸ್ಥಿತಿ ಸೃಷ್ಟಿಸಿದ್ದೀರಿ ಎಂದು ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-ಅಧಿಕಾರಕ್ಕೆ ಬಂದ ಮೇಲೆ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದು, ಒಬ್ಬ ಬಿಲ್ಡರ್ ಕಾಂಗ್ರೆಸ್‌ಗೆ 7-8 ಕೋಟಿ ರೂ. ಕೊಡಬೇಕಿದೆ. ಇದೇ ಕಾಂಗ್ರೆಸ್‌ನ ಹೊಸ ತೆರಿಗೆ.
-ಸರಕಾರ ನೀಡುತ್ತಿರುವ ಗ್ಯಾರಂಟಿಗಳನ್ನು ಜನರಿಂದ ದೋಚಿದ ತೆರಿಗೆಯ ಮೂಲಕವೇ ನೀಡಲಾಗುತ್ತಿದೆ. ಯಾವುದೇ ಯೋಜನೆಯನ್ನು ಜೇಬಿನಿಂದ ನೀಡುತ್ತಿಲ್ಲ. ಇದರಿಂದ ಸಂಗ್ರಹವಾದ ಹಣವನ್ನು ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಜೆಸಿಬಿಯಲ್ಲಿ ಅಗೆಯುವಂತೆ ಹಣ ಲೂಟಿ ಮಾಡಲಾಗುತ್ತಿದೆ.
-ಕಾಂಗ್ರೆಸ್ ಕೋಟ್ಯಂತರ ಜನರಿಗೆ ಚೊಂಬು ನೀಡಿದೆ. 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿ ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಲಾಗಿದೆ.
-ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರೂ. ಎಂದು 5 ರೂಪಾಯಿ ನೀಡಿಲ್ಲ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ.
ಕಾಂಗ್ರೆಸ್ಸಿಗರೇ, ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ ತುಂಬಿದ ಕೊಡ ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟವರು ನೀವು. ಬೆಳೆ ಒಣಗಿಸಿ ರೈತರಿಗೆ ಚೊಂಬು ಕೊಟ್ಟವರು ನೀವು. ಇದ್ದ ಬದ್ದ ಹಣವನ್ನೆಲ್ಲ ಖಾಲಿಮಾಡಿಕೊಂಡು ಪರಿಶಿಷ್ಟರ/ ಹಿಂದುಳಿದವರ ಕಲ್ಯಾಣಕ್ಕೆ ಮೀಸಲಾದ ಹಣವನ್ನೂ ವರ್ಗಾಯಿಸಿಕೊಂಡು ಶೋಷಿತರಿಗೆ ಚೊಂಬು ಕೊಟ್ಟವರು ನೀವು. ದೇಶದಲ್ಲಿ ಕಾಣದ “ಕೈ’ ಸ್ಥಿತಿ ತಲುಪುತ್ತಿರುವ ನಿಮಗೆ ಕೆಲವೇ ದಿನಗಳಲ್ಲಿ ಜನರೇ ನೀಡಲಿದ್ದಾರೆ ಖಾಲಿ ಚೊಂಬು.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಕಾಂಗ್ರೆಸ್ ಮನಃಸ್ಥಿತಿಗೆ ತಕ್ಕಂತೆ ಜಾಹೀರಾತು: ರಾಘವೇಂದ್ರ
ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ. ಅಪ್ಪಿತಪ್ಪಿ ಕರ್ನಾಟಕದಲ್ಲಿ ಅಧಿ ಕಾರಕ್ಕೆ ಬಂದಿದೆ. ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ಜನರಿಗೆ ಆರಂಭದಿಂದಲೂ ಚೊಂಬನ್ನೇ ನೀಡುತ್ತಿರುವ ಕಾಂಗ್ರೆಸ್ ನಾಯಕರು ಅದಕ್ಕೆ ತಕ್ಕಂತೆ ಜಾಹೀರಾತು ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿ ಎದುರಾದಾಗೆಲ್ಲ ಕಾಂಗ್ರೆಸ್ ಇವಿಎಂ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತದೆ. ಕಾಂಗ್ರೆಸ್ ಆಕ್ಷೇಪದ ಬಗ್ಗೆ ಜನರಿಗೆ ಗೊತ್ತಿದೆ. ದೇಶದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಅಧಿ ಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಈ ಬಗ್ಗೆ ಅನುಮಾನ ಬೇಡ. ಶಿವಮೊಗ್ಗದಲ್ಲಿ ಒಂದು ಲಕ್ಷಕ್ಕೂ ಅಧಿ ಕ ಮತಗಳ ಮುನ್ನಡೆಯಿಂದ ಬಿಜೆಪಿ ಗೆಲ್ಲಲಿದೆ. ಈ ಬಾರಿ ಜೆಡಿಎಸ್ ಜತೆಗಿರುವ ಕಾರಣ ಶಕ್ತಿ ಹೆಚ್ಚಿದೆ. ಆ ಪಕ್ಷದ ಕುಮಾರಸ್ವಾಮಿ, ನಮ್ಮಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಎಲ್ಲರೂ ಸೇರಿ ಕೆಲಸ ಮಾಡುತ್ತಿದ್ದು, ನಮಗೆ ಲಾಭವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ
Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್ ಆಗಿ ಪರಿವರ್ತಿಸಿದ ಬಾಲಕ!
ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.