Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಅಶೋಕ್‌, ವಿಜಯೇಂದ್ರ ನೇತೃತ್ವದ ಸಭೆಯಲ್ಲಿ ನಿರ್ಧಾರ

Team Udayavani, Nov 27, 2024, 7:10 AM IST

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಬೆಂಗಳೂರು: ಬೆಳಗಾವಿಯಲ್ಲಿ ಡಿ. 9ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರಕಾರವನ್ನು ಕಟ್ಟಿಹಾಕಲು ಬಿಜೆಪಿ ತಂತ್ರಗಾರಿಕೆ ನಡೆಸಿದ್ದು, ರಾಜ್ಯ ಸರಕಾರ ಮಾಡಿದೆ ಎನ್ನಲಾದ ಅನ್ಯಾಯಗಳ ಪಟ್ಟಿಯನ್ನೇ ತೆರೆದಿಡಲು ನಿರ್ಧರಿಸಿದೆ. ವಕ್ಫ್ ನೋಟಿಸ್‌, ರೇಶನ್‌ ಕಾರ್ಡ್‌ ರದ್ದು ಮತ್ತಿತರ ಸಮಸ್ಯೆಗಳನ್ನು ಸದನದಲ್ಲಿ ಪ್ರಶ್ನಿಸುವ ತೀರ್ಮಾನಕ್ಕೆ ಬರಲಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಪಕ್ಷ ದಿಂದ ನಡೆಸಬೇಕಾದ ಹೋರಾಟಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಚಿವರಾದ ಡಾ| ಅಶ್ವತ್ಥನಾರಾಯಣ, ಸಿ.ಟಿ. ರವಿ, ಸುನಿಲ್‌ ಕುಮಾರ್‌, ಆರಗ ಜ್ಞಾನೇಂದ್ರ, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಭಾಗಿಯಾಗಿದ್ದರು.

ವಕ್ಫ್ ಮಂಡಳಿಯಿಂದ ಆಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ. ಬಡವರ ರೇಷನ್‌ ಕಾರ್ಡ್‌ ರದ್ದು ಮಾಡಿ ಗ್ಯಾರಂಟಿಗಾಗಿ ಹಣ ಉಳಿಸಲಾಗುತ್ತಿದೆ. ಈ ಸಮಸ್ಯೆಯ ವಿರುದ್ಧ ಅಧಿವೇಶನದಲ್ಲಿ ಹೋರಾಟ ಮಾಡಬೇಕು. ಅಲ್ಲದೆ ಅಬಕಾರಿ ಇಲಾಖೆಯ ಹಗರಣ, ಬೆಳೆನಾಶಕ್ಕೆ ಪರಿಹಾರ ಮೊದಲಾದ ಹಲವು ಸಮಸ್ಯೆಗಳು ಇವೆ. ಆದರೆ ರಾಜ್ಯ ಸರಕಾರದಿಂದ ಈ ಬಾರಿ 2 ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಹೆಚ್ಚು ದಿನ ಅಧಿವೇಶನ ನಡೆಸಲು ಆಗ್ರಹಿಸಬೇಕೆಂದೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಎಲ್ಲಿ ಹಣ ಇಟ್ಟಿದ್ದೀಯಪ್ಪಾ? ತಕ್ಕಂಡ್‌ ಬಾ
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಆರ್‌. ಅಶೋಕ್‌, ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿದರೆ ಮೇಲೆತ್ತಬಹುದು, ಆದರೆ ಗತಿಯೇ ಇಲ್ಲದ ದುಃಸ್ಥಿತಿಗೆ ತಲುಪಿದೆ. ನಮ್ಮ ಬಳಿ ಹೆಚ್ಚುವರಿ ಸಂಪನ್ಮೂಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯಕ್ಕೆ ಹಣವಿಲ್ಲವಾಗಿದೆ.

ಹೀಗಾಗಿ, “ಯಾವ ಬ್ಯಾಂಕ್‌ನಲ್ಲಿ ಹೆಚ್ಚುವರಿ ಹಣ ಇಟ್ಟಿದ್ದೀಯಪ್ಪಾ? ತಕ್ಕಂಡ್‌ ಬಾ’ ಎಂದು ಬೆಳಗಾವಿ ಅಧಿವೇಶನದಲ್ಲಿ ನಾವು ಪ್ರಶ್ನೆ ಮಾಡುತ್ತೇವೆ. ಈ ಸರಕಾರ ದಿವಾಳಿ ಆಗಿದೆ ಎಂದು ಈ ಹಿಂದೆ ಜನ ಮಾತನಾಡಿಕೊಳ್ಳುತ್ತಿದ್ದರು. ಆದರೆ ಈಗ ಅವರ ಪಕ್ಷದ ಶಾಸಕ ಗವಿಯಪ್ಪನವರೇ ಆಕ್ಷೇಪ ಎತ್ತಿದ್ದಾರೆ. ಗವಿಯಪ್ಪ ಗವಿಯಿಂದ ಕೂಗಿದರೆ ಸಿದ್ದರಾಮಯ್ಯ ಬಿಲ ಸೇರಿಕೊಂಡು ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದು ಗುರುವಾರದ ಸರಕಾರ ರಾಜ್ಯದಲ್ಲಿ ಈಗ ಇರುವುದು “ಗುರುವಾರದ ಸರಕಾರ’. ಸಚಿವ ಸಂಪುಟ ಸಭೆ ನಡೆಯುವ ದಿನ ಮಾತ್ರ ಸಚಿವರು ವಿಧಾನಸೌಧಕ್ಕೆ ಬರುತ್ತಾರೆ. ಉಳಿದ ದಿನ ಇದ್ದಾರೋ, ಇಲ್ಲವೋ ಎಂಬುದೇ ಗೊತ್ತಾಗುವುದಿಲ್ಲ. ಸರಕಾರ ಜನರಿಂದ ದೂರವಾಗಿದೆ ಎಂದು ಅಶೋಕ್‌ ಟೀಕಿಸಿದರು. ವಿಪಕ್ಷದಲ್ಲಿ ಕಾಂಗ್ರೆಸ್‌ ಇದ್ದಾಗ ಕೋವಿಡ್‌ ಹಗರಣದ ಬಗ್ಗೆ ಮಾತನಾಡಲಿಲ್ಲ. ಈಗ ಮಾತ್ರ ಆ ಬಗ್ಗೆ ಮಾತನಾಡುತ್ತಿದೆ. ನಮ್ಮ ಅವಧಿ ಹಾಗೂ ಈಗಿನ 16 ತಿಂಗಳ ಅವಧಿಯ ಆಡಳಿತದ ಎಲ್ಲವನ್ನೂ ಸಿಬಿಐಗೆ ವಹಿಸಲಿ. ನಾವು ತನಿಖೆಗೆ ತಯಾರಿದ್ದೇವೆ ಎಂದು ಅಶೋಕ್‌ ಸವಾಲು ಹಾಕಿದರು.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.