ಬಿಜೆಪಿ-ಕೈ ಸಮರ ಸಿದ್ಧತೆ
Team Udayavani, Apr 1, 2022, 7:10 AM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿನಲ್ಲಿ ತಮ್ಮ ತಮ್ಮ ಪಕ್ಷಗಳ ಚುನಾವಣ ಸಿದ್ಧತೆ ಬಗ್ಗೆ ಸಭೆ ನಡೆಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ಸಂಪುಟ ಪುನಾರಚನೆ, ಬಿಜೆಪಿ ಮುಖಂಡರ ಪ್ರವಾಸದ ಬಗ್ಗೆ ನಿರ್ದೇಶನ ನೀಡಲಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಸಿದ್ಧತೆಯನ್ನು ಒರೆಗೆ ಹಚ್ಚಲಿದ್ದಾರೆ.
ಏನಿರಬಹುದು ಶಾ ಸಲಹೆ?:
ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಭರ್ಜರಿ ಸರ್ಜರಿ ಆಗಲಿದೆಯೇ, ನಿಗಮ- ಮಂಡಳಿ ಅಧ್ಯಕ್ಷರ ಬದಲಾವಣೆ ಖಚಿತವೇ, ಚುನಾವಣೆಗೆ ಪಕ್ಷದ ಸಿದ್ಧತೆ ಹೇಗೆ ಇರಬೇಕು… ಈ ಎಲ್ಲ ಅಂಶಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ಮುಖಂಡರ ಜತೆಗೆ ಚರ್ಚಿಸಲಿದ್ದಾರೆ. ಗುರುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿರುವ ಅವರು ಶುಕ್ರವಾರ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಭೇಟಿ ಸಂಚಲನಕ್ಕೆ ಕಾರಣವಾಗಿದೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವರು ರಾಜ್ಯದಲ್ಲಿನ ಪ್ರಸಕ್ತ ವಿದ್ಯಮಾನಗಳ ಜತೆಗೆ ಪಕ್ಷ ಮತ್ತು ಸರಕಾರದಲ್ಲಿ ಆಗಬೇಕಿರುವ ಬದಲಾವಣೆಗಳ ಬಗ್ಗೆಯೂ ನಿರ್ದಿಷ್ಟ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಖ್ಯವಾಗಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಅಮಿತ್ ಶಾ ಏನು ಹೇಳುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಪುನಾರಚನೆ ಗುಮ್ಮ :
ಬಿಜೆಪಿ ಮೂಲಗಳ ಪ್ರಕಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೂ ಮುನ್ನವೇ ರಾಜ್ಯ ಸಚಿವ ಸಂಪುಟದ ಪುನಾರಚನೆಯಾಗುವ ಸಾಧ್ಯತೆ ಇದ್ದು, ಖಾಲಿ ಇರುವ ನಾಲ್ಕು ಸ್ಥಾನಗಳ ಜತೆಗೆ ಕನಿಷ್ಠ ಐದರಿಂದ ಆರು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಅಮಿತ್ ಶಾ ಸಭೆಯ ಅನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಅಧಿಕಾರ ಅನುಭವಿಸಿರುವ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಪಟ್ಟಿ ಸಿದ್ದವಾಗಿದ್ದರೂ ಮಾಜಿ ಸಿಎಂ ಯಡಿಯೂರಪ್ಪ ಅವರ ಒತ್ತಡದಿಂದ ಬದಲಾವಣೆ ವಿಳಂಬವಾಗಿರುವ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಚುನಾವಣಾ ಸಿದ್ಧತೆ :
2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ನಾಯಕರ ರಾಜ್ಯ ಪ್ರವಾಸದಲ್ಲಿ ಪಕ್ಷದ ಸಂಘಟನೆ, ಸರಕಾರಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ಕುರಿತು ಅಮಿತ್ ಶಾ ಕೆಲವು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.
ರಾಹುಲ್ ಚುನಾವಣೆ ಸಿದ್ಧತೆ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾಜ್ಯಕ್ಕೆ ಆಗಮಿಸಿದ್ದು, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ನಮಿಸಿದರು. ಅನಂತರ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಪ್ಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆ, ಸಂಘಟನೆ ಕುರಿತು ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ನಾಯಕರ ಸಿದ್ಧತೆಗಳ ವಿವರ ಪಡೆಯಲಿದ್ದಾರೆ. ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಕೆಲವು ನಿರ್ದೇಶನ ನೀಡುವ ಸಾಧ್ಯತೆಯಿದೆ.
ರಾಹುಲ್ ಗಾಂಧಿಯವರು ಶುಕ್ರವಾರ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ. ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅನಂತರ ಯುವ, ವಿದ್ಯಾರ್ಥಿ ಹಾಗೂ ಮಹಿಳಾ ಘಟಕಗಳ ಜತೆ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಾಯಕರ ಸ್ವಾಗತ :
ಗುರುವಾರ ಬೆಂಗಳೂರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಸಲೀಂ ಅಹಮದ್ ಮತ್ತಿತರ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.
ನಮ್ಮದು ಹಳೆಯ ಒಡನಾಟ :
ಸಿದ್ಧಗಂಗಾ ಮಠಕ್ಕೆ ಬಂದದ್ದು ಸಂತೋಷವಾಗಿದೆ. ಮಠದ ಜತೆ ನಮ್ಮ ಒಡನಾಟ ತುಂಬಾ ಹಳೆಯದು. ಬಸವಣ್ಣ ಹೇಳಿದಂತೆ ನಾವೆಲ್ಲಾ ಕೂಡಿ ಬಾಳಬೇಕು. ಶಿವಕುಮಾರ ಶ್ರೀಗಳು ನಮಗೆಲ್ಲ ದಾರಿ ದೀಪ ಆಗಿದ್ದರು.– ರಾಹುಲ್ ಗಾಂಧಿ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.