ಅಲೆಮಾರಿ ಜನಾಂಗಕ್ಕೆ ಬಿಜೆಪಿ ಕೊಡುಗೆಗೆ ಮೆಚ್ಚುಗೆ
Team Udayavani, Jun 20, 2022, 8:19 PM IST
ಬೆಂಗಳೂರು: ರಾಜ್ಯದಾದ್ಯಂತ ಇರುವ ಎಸ್ಸಿ ಹಾಗೂ ಎಸ್ಟಿ ಅಲೆಮಾರಿ ಜನಾಂಗದ ಮುಖಂಡರು ಹಾಗೂ ಪ್ರತಿನಿಧಿಗಳು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರನ್ನು ಭೇಟಿ ಮಾಡಿದ್ದರು.
ಬ್ರಿಟಿಷ್ ಆಡಳಿತ ಕಾಲದಲ್ಲಿ ಬುಡಕಟ್ಟು ಹಾಗೂ ಅಲೆಮಾರಿ ಸಮುದಾಯಗಳನ್ನು ಕ್ರಿಮಿನಲ್ ಟ್ರೈಬ್ ಎಂದು ಗುರುತಿಸಿದ್ದನ್ನು ತೆಗೆದುಹಾಕಲು (ಕ್ರಿಮಿನಲೈಫಷನ್ ಆಫ್ ನೊಮಾಡಿಟಿಕ್ ಟ್ರೈಬ್ಸ್’) ಹಿಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಪ್ರಯತ್ನಕ್ಕೆ ಮಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಕಡೆಗಳಲ್ಲಿ ಹಾಗೂ ವಿವಿಧ ಕೆಟಗರಿಗಳಲ್ಲಿ ಹಂಚಿಹೋಗಿರುವ ಸಮುದಾಯಗಳ ಪ್ರತಿನಿಧಿಗಳು ಅವರ ಬುಡಕಟ್ಟುಗಳ ವೈಶಿಷ್ಟ್ಯತೆಯನ್ನು, ಸಂಸ್ಕೃತಿ ಆಚರಣೆಗಳನ್ನು, ಸಂಪ್ರದಾಯಗಳ ಕುರಿತಾದ ಮಾಹಿತಿಯನ್ನು ಸಂತಸದಿಂದ ಹಂಚಿಕೊಂಡರು.
ಬಡತನ, ಅನಕ್ಷರತೆ, ಸಾಮಾಜಿಕ ಹಿಂದುಳಿಯುವಿಕೆ, ಅವಕಾಶಗಳ ಕೊರತೆ ಮುಂತಾದ ಹಲವಾರು ಆತಂಕಗಳ ನಡುವೆ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮೂಲವೃತ್ತಿಯಿಂದ ವಿಮುಖರಾಗುತ್ತಿರುವ ಯುವಜನಾಂಗ, ಸಮಾಜ ಎದುರಿಸುತ್ತಿರುವ ಸಂಕಟಗಳನ್ನು ತೋಡಿಕೊಂಡರು. ಸಣ್ಣ ಸಣ್ಣ ಅಲೆಮಾರಿ ಸಮುದಾಯಗಳಾಗಿರುವ ಕಾರಣಕ್ಕೆ ಸರಕಾರದ ಸೌಲಭ್ಯಗಳು, ಮೀಸಲಾತಿ ನಮನ್ನು ತಲುಪುತ್ತಿಲ್ಲ. ಹಾಗಾಗಿ ಒಳಮೀಸಲಾತಿ ಸೇರಿದಂತೆ ವಿವಿಧ ಅವಕಾಶಗಳನ್ನು ಸರಕಾರ ಒದಗಿಸಬೇಕು ಎಂದು ಮನವಿ ಮಾಡಿದರು.
ಪರಿಶಿಷ್ಟ ಪಂಗಡದಲ್ಲಿ 51 ಪರಿಶಿಷ್ಟ ಜಾತಿಯಲ್ಲಿ 23 ಹಂಚಿಹೋಗಿರುವ ಈ ಸಮುದಾಯಗಳು ತಾವು ಎದುರಿಸುತ್ತಿರುವ ಮತಾಂತರ, ನೆಲೆ ಮತ್ತು ವಸತಿ ಸಮಸ್ಯೆ, ಶಿಕ್ಷಣ, ಔದ್ಯೋಗಿಕ ಹಾಗೂ ರಾಜಕೀಯದಲ್ಲಿ ಪ್ರಾತಿನಿಧ್ಯವಿಲ್ಲದೆ ಇರುವುದರ ಕಡೆಗೂ ಗಮನ ಸೆಳೆದ ಈ ಪ್ರತಿನಿಧಿಗಳು ಸಮುದಾಯದ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.
ವಿಧಾನ ಪರಿಷತ್ ಸದಸ್ಯರೂ ಆದ ಛಲವಾದಿ ನಾರಾಯಣಸ್ವಾಮಿ, ಸಮಾಜದ ನಾಯಕರಾದ ಲೋಹಿತ್ ರಂಗಾಪುರ, ಆದರ್ಶ್ ಯಲ್ಲಪ್ಪ, ಡಾ. ಕೃಷ್ಣಮೂರ್ತಿ ಕೆ.ವಿ, ಮಂಜುನಾಥ್, ಕುಳ್ಳಯ್ಯಪ್ಪ, ಬಸವರಾಜು ಅವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.