ಮುಖ್ಯಮಂತ್ರಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
Team Udayavani, Jun 27, 2019, 3:05 AM IST
ಬೆಂಗಳೂರು: ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ವೈಟಿಪಿಎಸ್ ಸಿಬ್ಬಂದಿಯ ಸಮಸ್ಯೆಗಳಿಗೆ ಸ್ಪಂದಿಸದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ದರ್ಪ, ಉದ್ಧಟತನ ತೋರಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಇದಕ್ಕಾಗಿ ಸಿಎಂ ಅವರು ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.
ಮುಖ್ಯಮಂತ್ರಿಗಳು ಇದೇ ಧೋರಣೆ ಮುಂದುವರಿಸಿದರೆ ರಾಜ್ಯಾದ್ಯಂತ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ತಮ್ಮ ಅಹವಾಲು ಹೇಳಿಕೊಳ್ಳಲು ಬಂದ ವೈಟಿಪಿಎಸ್ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಯವರು ಉದ್ಧಟತನದಿಂದ ವರ್ತಿಸಿದ್ದಾರೆ.
ಸಿಬ್ಬಂದಿಯನ್ನು ಜನತಾ ದರ್ಶನ ಸ್ಥಳಕ್ಕೆ ಕರೆಸಿಕೊಂಡು ಚರ್ಚಿಸಬಹುದಿತ್ತು. ಅದನ್ನು ಬಿಟ್ಟು “ಲಾಠಿ ಚಾರ್ಜ್ ಮಾಡಿಸಬೇಕಾ. ಮೋದಿಗೆ ಮತ ಹಾಕುತ್ತೀರಿ, ಸಮಸ್ಯೆ ಪರಿಹಾರಕ್ಕೆ ನಾನು ಬೇಕಾ’ ಎಂದು ಪ್ರಶ್ನಿಸುವ ಮೂಲಕ ಗಾಂಭೀರ್ಯತೆ, ಸ್ಥಿಮಿತ, ಮಾನಸಿಕ ಸಮತೋಲನ ಕಳೆದುಕೊಂಡ ಹತಾಶ ಮನೋಭಾವ ಪ್ರದರ್ಶಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ರಾಜ್ಯದಲ್ಲಿ ರಾಯಚೂರು ಜಿಲ್ಲೆಯೂ ಹಿಂದುಳಿದಿದೆ. ಅಲ್ಲಿನ ಜನರ ಸಮಸ್ಯೆ ಆಲಿಸಲು ಗ್ರಾಮ ವಾಸ್ತವ್ಯ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ, ಅಹವಾಲು ಹೇಳಿಕೊಳ್ಳಲು ಬಂದವರ ಮೇಲೆ ದರ್ಪ ತೋರಿದ್ದು ಖಂಡನೀಯ.
ಪ್ರಧಾನಿ ಮೋದಿಯವರು ಜಗತ್ತಿನಲ್ಲೇ ಪ್ರಖ್ಯಾತರು. ಕುಮಾರಸ್ವಾಮಿಯವರು ರಾಜ್ಯದಲ್ಲಿ ಎಲ್ಲಿಗೆ ಹೋದರೂ ಜನ ಛೀಮಾರಿ ಹಾಕುತ್ತಿದ್ದಾರೆ. ಹಾಗಿದ್ದರೂ ಮೋದಿಯವರನ್ನು ಟೀಕಿಸಿದ್ದಾರೆ. ಕುಮಾರಸ್ವಾಮಿಯವರು ಆಕಾಶಕ್ಕೆ ಉಗುಳಿದರೆ ಆ ಉಗುಳು ಅವರ ಮೇಲೆಯೇ ಬೀಳುತ್ತಿದೆ. ಮೋದಿಯವರೆಲ್ಲಿ, ಕುಮಾರಸ್ವಾಮಿಯವರೆಲ್ಲಿ ಎಂದು ಕಿಡಿ ಕಾರಿದರು.
ಇದು ಎರಡನೇ ನಾಟಕ: ಮುಖ್ಯಮಂತ್ರಿಗಳದ್ದು ಗ್ರಾಮ ವಾಸ್ತವ್ಯವಲ್ಲ, ಬದಲಿಗೆ ನಾಟಕ. 13 ವರ್ಷಗಳ ಹಿಂದೆ 42 ಹಳ್ಳಿಗಳಲ್ಲಿ ವಾಸ್ತವ್ಯ ನಡೆಸಿದರೂ ಏನೂ ಸಾಧನೆಯಾಗಿಲ್ಲ. ಇದೀಗ ಎರಡನೇ ನಾಟಕ ಶುರು ಮಾಡಿದ್ದಾರೆ.
ಮುಖ್ಯಮಂತ್ರಿಗಳು ಕೂಡಲೇ ರಾಜ್ಯದ ಜನ ಅದರಲ್ಲೂ ಉತ್ತರ ಕರ್ನಾಟಕದವರ ಕ್ಷಮೆ ಯಾಚಿಸಬೇಕು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. “ಉತ್ತರ ಕರ್ನಾಟಕದವರು ತಮಗೆ ಮತ ಹಾಕಿದ್ದಾರಾ’ ಎಂದು ಪದೇ ಪದೇ ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿಗಳು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳ ಪ್ರವಾಸದಲ್ಲಿ ಕಾಂಗ್ರೆಸ್‌ನ ಪಾಲು ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ವೈಟಿಪಿಎಸ್ ಸಿಬ್ಬಂದಿ ಮೇಲೆ ಮುಖ್ಯಮಂತ್ರಿಗಳು ದರ್ಪ ತೋರಿರುವುದರಲ್ಲೂ ಕಾಂಗ್ರೆಸ್‌ನ ಸಮಪಾಲು ಇದೆ.
ಮುಖ್ಯಮಂತ್ರಿಗಳ ದುರಹಂಕಾರದ ವರ್ತನೆ ಬಗ್ಗೆ ಪರಮೇಶ್ವರ್, ಸಿದ್ದರಾಮಯ್ಯ, ಈಶ್ವರ್ ಖಂಡ್ರೆ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಸ್ವಾಮಿ ಕಾರ್ಯ, ಸ್ವಕಾರ್ಯ: ಮುಖ್ಯಮಂತ್ರಿಗಳ ಪ್ರವಾಸದ ಉದ್ದೇಶ ಜನರ ಸಮಸ್ಯೆ ಆಲಿಸುವುದಲ್ಲ, ಬದಲಿಗೆ ಪಕ್ಷ ಸಂಘಟನೆ.
ಹಾಗಾಗಿ, ಜೆಡಿಎಸ್ ಶಾಸಕರಿರುವ ಗುರುಮಿಠ್ಕಲ್, ಮಾನ್ವಿಯಲ್ಲಿ ವಾಸ್ತವ್ಯ ಹೂಡಿದ್ದು, ಗುರುವಾರ ಸಹ ಬೀದರ್‌ನಲ್ಲಿ ಜೆಡಿಎಸ್ ಶಾಸಕರ ಕ್ಷೇತ್ರದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಅಫಲ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿರುವ ಕಾರಣ ಅಲ್ಲಿ ವಾಸ್ತವ್ಯ ಹೂಡಿಲ್ಲ.
ಅವರ ಪ್ರವಾಸಕ್ಕೆ ಕಾಂಗ್ರೆಸ್‌ನ ಬೆಂಬಲವಿಲ್ಲ ಎಂಬುದು ಸ್ಪಷ್ಟ. ಮುಖ್ಯಮಂತ್ರಿಗಳ ಪ್ರವಾಸದಿಂದ ಒಂದಷ್ಟು ಕೆಲಸ ಕಾರ್ಯದ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಅವರಿಗೆ ಒಂದಿಷ್ಟು ಹಣ ಸಿಗಬಹುದು. ಹಾಗಾಗಿ, ಇದು ಸ್ವಾಮಿ ಕಾರ್ಯ, ಸ್ವಕಾರ್ಯದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರು ಹೇಳಿದ್ದು 100ರಷ್ಟು ಸತ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಳೆಯ ರಾಜಕಾರಣಿ. ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯಕ್ಕೆ ಕೆಲ ಶಕ್ತಿಗಳು ಅಡ್ಡಿಪಡಿಸುತ್ತಿವೆ ಎಂದು ಹೇಳಿರುವುದು 100ಕ್ಕೆ 100ರಷ್ಟು ಸತ್ಯ. ಮುಖ್ಯಮಂತ್ರಿಗಳ ವಾಸ್ತವ್ಯದ ವಿರುದ್ಧ ಬಿಜೆಪಿ ಶಾಸಕರು ಹೋರಾಟ ನಡೆಸಿದ್ದಾರೆ.
ನಾಟಕ ಮಾಡಲು ಬಿಡುವುದಿಲ್ಲ. ಹಗಲು ನಾಟಕ ಕೈಬಿಡಿ ಎಂದು ಒತ್ತಾಯಿಸಿದ್ದೇವೆ. ಈ ಹಿಂದೆ ಕುಮಾರಸ್ವಾಮಿಯವರು ವಾಸ್ತವ್ಯ ಹೂಡಿದ್ದ 42 ಗ್ರಾಮಗಳ ಪೈಕಿ ತಮ್ಮದೇ ಕ್ಷೇತ್ರದ ಜಟ್ಟಿದೊಡ್ಡಿಯಲ್ಲಿ ಇಡಲಾಗಿದ್ದ ಕುರ್ಚಿ, ಮೇಜು, ಯಾವ ವಸ್ತುವನ್ನೂ ನೆನಪಿಗೂ ಉಳಿಸದೆ ತೆಗೆದುಕೊಂಡು ಹೋಗಿದ್ದಾರೆ.
ಒಂದು ಬೇಡಿಕೆಯನ್ನೂ ಈಡೇರಿಸಿಲ್ಲ. ಕೇವಲ ಪ್ರಚಾರಕ್ಕಾಗಿ ವಾಸ್ತವ್ಯ ಮಾಡುತ್ತಿದ್ದಾರೆ. ಅವರ ಪ್ರವಾಸದಿಂದ ಉತ್ತರ ಕರ್ನಾಟಕಕ್ಕೆ ಯಾವುದೇ ಪ್ರಯೋಜನವಿಲ್ಲ. ಹಾಗಾಗಿ, ಬಿಜೆಪಿ ಯಾವುದೇ ಕೈವಾಡ ನಡೆಸಿಲ್ಲ. ನೇರವಾಗಿಯೇ ವಿರೋಧಿಸಿದ್ದೇವೆ ಎಂದು ತಿರುಗೇಟು ನೀಡಿದರು. ಮುಖಂಡರಾದ ಚಲವಾದಿ ನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಜಾಸತ್ತಾತ್ಮಕವಾಗಿ, ನ್ಯಾಯಯುತವಾಗಿ ಹೇಳಿಕೆ ನೀಡುವುದನ್ನು ಮರೆತು ಬಿಟ್ಟಿದ್ದಾರೆ. ಅವರಿಗೆ ಪುತ್ರ ವ್ಯಾಮೋಹದ ಅಮಲು ಜಾಸ್ತಿಯಾಗಿದೆ. ಅವರು ರಾಜ್ಯದ ಅಭಿವೃದ್ಧಿ ಬಯಸಿದ್ದರೆ ಪುತ್ರನಿಗೆ ಬುದ್ದಿ ಹೇಳಬೇಕಿತ್ತು. ಇನ್ನಾದರೂ ಪುತ್ರ ವ್ಯಾಮೋಹ ಬಿಡಲಿ.
-ಎನ್.ರವಿಕುಮಾರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.