Karnataka ಇಬ್ಬರು ಸಚಿವರನ್ನು ಕೈ ಬಿಡಲು ಬಿಜೆಪಿ ಆಗ್ರಹ

Team Udayavani, Sep 11, 2023, 8:45 PM IST

Karnataka ಇಬ್ಬರು ಸಚಿವರನ್ನು ಕೈ ಬಿಡಲು ಬಿಜೆಪಿ ಆಗ್ರಹ

ಬೆಂಗಳೂರು: ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಇಬ್ಬರು ಸಚಿವರನ್ನು ತಕ್ಷಣ ಸಂಪುಟದಿಂದ ಕೈ ಬಿಡುವಂತೆ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಚಿವ ಡಿ.ಸುಧಾಕರ್‌ ವಿರುದ್ಧ ದಲಿತ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಎಫ್ಐಆರ್‌ ದಾಖಲಾದ ತಕ್ಷಣ ಅವರನ್ನು ಬಂಧಿಸಬೇಕಿತ್ತು. ಆದರೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಜಾತಿ ನಿಂದನೆ ಮಾಡಿದ ಚಿತ್ರನಟ ಉಪೇಂದ್ರ ವಿರುದ್ಧ ತೀಕ್ಷ್ಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರು ಹಳ್ಳಿಗಳನ್ನು ಹೊಲಗೇರಿ ಮಾಡಬೇಡಿ ಎಂದಿದ್ದರು. ಆ ವಿಡಿಯೋ ಓಡಾಡುತ್ತಿದ್ದರೂ ದೂರು ದಾಖಲಿಸಿ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ದೌರ್ಜನ್ಯ ಕಾಯಿದೆಯಡಿ ಕೇಸು ಬಂದಾಗ ತಕ್ಷಣ ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ಡಿಸಿಪಿ ಸಂಬರಗಿ ಎಂಬವರು ದಲಿತರ ನಿಂದನೆ ಮಾಡಿದರೂ ಇಲಾಖೆ ಮತ್ತು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ದಲಿತರ ಹಕ್ಕು ರಕ್ಷಿಸುವುದಾಗಿ, ಅವರ ಪರ ಇರುವುದಾಗಿ ಸಿಎಂ ಹೇಳುತ್ತಾರೆ. ಇದೆಲ್ಲ ಗೋಸುಂಬೆ ರಾಜಕಾರಣ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರು ಬಾಯಲ್ಲಿ ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬಂತಾಗಿದೆ. ಈ ಸರ್ಕಾರದ್ದು ಇಬ್ಬಗೆಯ ನೀತಿ. ಮುಖ್ಯಮಂತ್ರಿಗಳು ದಲಿತ ವಿರೋಧಿ ಎಂಬುದಕ್ಕೆ ಇವೇ ನಿದರ್ಶನ. ಸುಧಾಕರ್‌, ಮಲ್ಲಿಕಾರ್ಜುನ್‌ ಅವರನ್ನು ಮಂತ್ರಿಮಂಡಲದಿಂದ ಕಿತ್ತೆಸೆಯಬೇಕಿತ್ತು. ಈ ಇಬ್ಬರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ಇಡೀ ರಾಜ್ಯದಲ್ಲಿ ದಲಿತರು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

putin (2)

Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.