Siddaramaiah ರಾಜೀನಾಮೆಗೆ ಬಿಜೆಪಿ ಆಗ್ರಹ
ವಾಲ್ಮೀಕಿ ಹಗರಣ ಸರಕಾರಿ ಪ್ರಾಯೋಜಿತ: ಸುನಿಲ್; ತುಕಾರಾಂ ವಜಾ ಮಾಡಿ: ರವಿಕುಮಾರ್
Team Udayavani, Sep 11, 2024, 12:25 AM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ವ್ಯಾಪಕ ಅಕ್ರಮದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಪಾತ್ರದ ಬಗ್ಗೆ ಜಾರಿ ನಿರ್ದೇಶನಾಲಯ ತನ್ನ ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ವಾಲಿ¾ಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮಧ್ಯಾಂತರ ಚಾರ್ಜ್‌ಶೀಟ್ ಸಲ್ಲಿಸಿದ್ದು, ಮಾಜಿ ಸಚಿವ ನಾಗೇಂದ್ರ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.
ನಾಗೇಂದ್ರ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ.ಗಳನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಇದರಿಂದ ವಾಲ್ಮೀಕಿ ಹಗರಣ ಸರಕಾರಿ ಪ್ರಾಯೋಜಿತ ಎಂಬುದು ಸಾಬೀತಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ರಾಜ್ಯ ಸರಕಾರ ರಚಿಸಿದ ಎಸ್‌ಐಟಿ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ನಾಗೇಂದ್ರ ಹೆಸರನ್ನು ಉದ್ದೇಶಪೂರ್ವಕವಾಗಿ ಬಚ್ಚಿಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರದಲ್ಲಿ ಈ ಎಲ್ಲ ತಪ್ಪುಗಳು ಹಾಗೂ ಅವ್ಯವಹಾರ ನಡೆದಿದ್ದು ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಐತಿಹಾಸಿಕ ಅನ್ಯಾಯ ಎಸಗಲಾಗಿದೆ. ಸಿದ್ದರಾಮಯ್ಯನವರೇ ನೈತಿಕತೆ ಎಂಬ ಪದ ನಿಮ್ಮ ಡಿಕ್ಷನರಿಯಲ್ಲಿದ್ದರೆ ಕೂಡಲೇ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ.
ವಜಾ ಮಾಡಿ
ವಾಲ್ಮೀಕಿ ನಿಗಮದ 21 ಕೋಟಿ ಮೊತ್ತವನ್ನು ಬಳ್ಳಾರಿ ಚುನಾವಣೆಗೆ ಖರ್ಚು ಮಾಡಿದ್ದಾಗಿ ಇ.ಡಿ. ತನ್ನ ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದ್ದರಿಂದ ಬಳ್ಳಾರಿ ಸಂಸದರ ಸ್ಥಾನದಿಂದ ತುಕಾರಾಂ ಅವರನ್ನು ಚುನಾವಣ ಆಯೋಗವು ಕೂಡಲೇ ವಜಾ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಒತ್ತಾಯಿಸಿದ್ದಾರೆ.
ಇದು ಅಂತಾರಾಜ್ಯ ಭ್ರಷ್ಟಾಚಾರ ಪ್ರಕರಣ. ಸಿದ್ದರಾಮಯ್ಯ ಮತ್ತು ಶಿವಕುಮಾರರ ಇನ್ವೆಸ್ಟಿಗೇಶನ್ ಟೀಂ (ಎಸ್‌ಐಟಿ) ನಾಗೇಂದ್ರ ಹೆಸರನ್ನು ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿರಲಿಲ್ಲ. ಅವರಿಗೆ ಕ್ಲೀನ್ ಚಿಟ್ ಕೊಡಲಾಗಿತ್ತು. ಎಸ್‌ಐಟಿ ಮೂಲಕ ಮಾಜಿ ಸಚಿವರನ್ನು ಉಳಿಸುವ ಪ್ರಯತ್ನ ನಡೆದಿತ್ತು. ಸರ್ಕಾರದ ಹಸ್ತಕ್ಷೇಪ, ಬೆಂಬಲ ಇಲ್ಲದೆ, ವಾಲ್ಮೀಕಿ ನಿಗಮದ ಹಗರಣ ನಡೆಯಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದರು.
ಸಂಚು
ರಾಜ್ಯ ಸರಕಾರ ರಚಿಸಿದ ಎಸ್‌ಐಟಿ ಚಾರ್ಜ್‌ಶೀಟ್‌ಗೂ ಇಡಿ ಆರೋಪ ಪಟ್ಟಿಗೂ ಅಜಗಜಾಂತರವಿದೆ. ಈ ಪ್ರಕರಣವನ್ನು ಮುಚ್ಚಿ ಹಾಕುವುದಕ್ಕೆ ರಾಜ್ಯ ಸರಕಾರ ಸಂಚು ನಡೆಸಿತ್ತು. ಇದಕ್ಕಾಗಿ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.