BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
Team Udayavani, Nov 24, 2024, 7:00 AM IST
ಬೆಂಗಳೂರು: ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ಹಿಂದೆಂದೂ ಕಾಣದ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಘಟಿತ ಹಾಗೂ ಯೋಜನಾ ಬದ್ಧ ತಂತ್ರಗಾರಿಕೆ ನಡೆಸುವಲ್ಲಿ ಬಿಜೆಪಿ ರಾಜ್ಯ ಘಟಕ ಸಂಪೂರ್ಣ ವಿಫಲವಾಗಿದ್ದು, ನಾಯಕತ್ವದ ಬಗ್ಗೆ ಪಕ್ಷದ ಆಂತರಿಕ ಹಾಗೂ ಬಾಹ್ಯ ವಲಯದಲ್ಲಿ ಭಾರಿ ಪ್ರಶ್ನೆಗಳು ಸೃಷ್ಟಿಯಾಗಿವೆ.
ಈ ಚುನಾವಣೆ ಕುಟುಂಬ ರಾಜಕಾರ ಣದ ವಿರುದ್ಧ ಮತದಾರ ತೋರಿದ ತಿರಸ್ಕಾರ ಎಂದು ವ್ಯಾಖ್ಯಾನಿಸಲಾ ಗುತ್ತಿದೆ. ಹೀಗಾಗಿ ಇದರ ಪರಿಣಾಮ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನೂ ಆವರಿಸಿದ್ದು, ಅವರ ವಿರುದ್ಧ ಬಹಿರಂಗವಾಗಿ ತೊಡೆತ ಟ್ಟುತ್ತಿದ್ದವರ ಯಾದಿಗೆ ಇನ್ನಷ್ಟು ಜನ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಪಕ್ಷದೊಳಗೆ ನಡೆಯುತ್ತಿದ್ದ “ಡಿಸೆಂಬರ್’ ಚರ್ಚೆಗೆ ಮತ್ತಷ್ಟು ಬಲ ಬರಲಿದೆ.ಉಪಚುನಾವಣೆ ನಡೆದ 3 ಕ್ಷೇತ್ರಗಳ ಪೈಕಿ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರನ್ನು ಕಣಕ್ಕೆ ಇಳಿಸಲಾಗಿತ್ತು.ಇದಕ್ಕೆ ಬಿಜೆಪಿಯ ಕಾರ್ಯಕರ್ತ ಪಡೆ ಕನಲಿ ಕೆಂಡವಾ ಗಿತ್ತು. ಪಕ್ಷದಲ್ಲಿ ಹಣವಂತರಿಗೆ, ಕುಟುಂಬ ಹಿನ್ನೆಲೆ ಇರುವವ ರಿಗೆ ಮಾತ್ರ ಅವಕಾಶ. ವಂಶವಾದದ ವಿರುದ್ಧ ಬಿಜೆಪಿಯ ಟೀಕೆ “ಸೆಲೆಕ್ಟಿವ್’ ಎಂಬ ಅಭಿಪ್ರಾಯ ಮೂಡಿತ್ತು.
ಅವಕಾಶ ಕಳೆದುಕೊಂಡಿತೇ?
ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಕೊಡಬೇಕೆಂದು ಬಿಜೆಪಿಯ ಒಕ್ಕಲಿಗ ನಾಯಕರೆಲ್ಲರೂ ಪ್ರತಿಪಾದಿಸಿದ್ದರು. ಹೈಕಮಾಂಡ್ ಸಮ್ಮತಿಸಿದ್ದರೂ ಕುಮಾರಸ್ವಾಮಿ ಹಠ ಮೇಲುಗೈ ಸಾಧಿಸಿತ್ತು. ಬಿಜೆಪಿಯಿಂದ ಯೋಗೇಶ್ವರ್ ಸ್ಪರ್ಧಿಸಿ ಗೆದ್ದಿದ್ದರೆ ಹಳೇ ಮೈಸೂರು ಭಾಗದಲ್ಲಿ ಯೋಗೀ ಪರ್ಯಾಯ ಒಕ್ಕಲಿಗ ನಾಯಕರಾಗುತ್ತಿದ್ದ ಅವಕಾಶವನ್ನು ಕಳೆದುಕೊಂಡಂತಾಗಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.