ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತು ಹೋಗಿದೆ: ಡಿ.ಕೆ.ಶಿವಕುಮಾರ್ ಟೀಕೆ
Team Udayavani, May 13, 2021, 2:26 PM IST
ಬೆಂಗಳೂರು: ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ ವರದಿ ಕೊಟ್ಟಿದೆ. ಇದಕ್ಕೆ ಸರ್ಕಾರದ ಯಾರು ಹೊಣೆಗಾರರು ಎಂದು ನೀವೇ ತೀರ್ಮಾನಿಸಿ. ಈ ಸಾವುಗಳಿಗೆ ಸರ್ಕಾರ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಈಗ ಸುಮ್ಮನಾಗಿದ್ದಾರೆ. ಕೇಂದ್ರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ? ಲಸಿಕೆ ವಿತರಣೆ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು. ರಾಜ್ಯ ಸರ್ಕಾರ ಯಾಕೆ ಸುಮ್ಮನಿದೆಯೋ ಗೊತ್ತಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರನ್ನು ದೇವರೇ ಕಾಪಾಡಬೇಕು. ಇವರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? ಜನರಿಗೆ ನೆರವಾಗಿದ್ದಾರಾ? ಲಸಿಕೆ ಉಚಿತವಾಗಿ ನೀಡುತ್ತೇವೆ ಎಂದರು. 18-44 ರ ವಯೋಮಾನದವರಿಗೆ ಲಸಿಕೆ ಅಂತಾ ಮೇ 1ರಂದು ಉದ್ಘಾಟನೆಯನ್ನೂ ಮಾಡಿದರು. ಇವತ್ತು ಲಸಿಕೆ ಕೊಡಲು ಆಗಲ್ಲ ಅಂತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಡಬಲ್ ಇಂಜಿನ್ ಸರ್ಕಾರ ಬಹಳ ಚೆನ್ನಾಗಿ ಆಡಳಿತ ಮಾಡಲಿವೆ ಎಂದಿದ್ದರು. ಆದರೆ ಈ ಡಬಲ್ ಇಂಜಿನ್ ಗಳು ನಿಂತು ಹೋಗಿವೆ ಎಂದು ಟೀಕಿಸಿದರು.
ಇದನ್ನೂ ಓದಿ:ನಿಮ್ಮ ಖಾತೆಯನ್ನೇ ಡಿಲೀಟ್ ಮಾಡಬೇಕು: ತೇಜಸ್ವಿ ಸೂರ್ಯ ಟ್ವೀಟ್ ಗೆ ಜೆಡಿಎಸ್ ತಿರುಗೇಟು
ಆಕ್ಸಿಜನ್ ಪೂರೈಸುವಂತೆ ಆದೇಶಿಸಿ ಹೈಕೋರ್ಟ್ ರಾಜ್ಯದ ಜನರಿಗೆ ನ್ಯಾಯ ಒದಗಿಸಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಸಿಜನ್ ಕಳುಹಿಸಿದೆ ಎಂದು ಇವರು ಶಹಬ್ಬಾಶ್ ಗಿರಿ ತೆಗೆದುಕೊಳ್ಳುತ್ತಿದ್ದಾರೆ. ಅವರು ಯಾರಿಗಾದರೂ ಶಹಬ್ಬಾಶ್ ಗಿರಿ ಕೊಡಲಿ, ಒಟ್ಟಾರೆ ಜನರ ಪ್ರಾಣ ಉಳಿಸಿದರೆ ಸಾಕು ಎಂದು ಡಿ ಕೆ ಶಿವಕುಮಾರ್ ಹೇಳಿದರು.
45 ವರ್ಷ ಮೇಲ್ಪಟ್ಟವರಲ್ಲಿ ಅನೇಕರಿಗೆ ಇನ್ನು ಮೊದಲ ಲಸಿಕೆ ಕೊಟ್ಟಿಲ್ಲ. ಎರಡನೇ ಡೋಸ್ ಕೂಡ ಕೊಡಬೇಕು. ಈ ವಿಚಾರದಲ್ಲಿ ಸರ್ಕಾರದ ಬಳಿ ಪರಿಣಾಮಕಾರಿ ಯೋಜನೆ, ಸಿದ್ಧತೆ ಇಲ್ಲ. ಇದನ್ನು ನಿಭಾಯಿಸಲು ಇವರಿಗೆ ಆಗುತ್ತಿಲ್ಲ ಎಂದು ಆರೋಪಿಸಿದರು.
ರೈತರ ಪರಿಸ್ಥಿತಿ ದೇವರಿಗೇ ಪ್ರೀತಿ. ರಸಗೊಬ್ಬರ ಬೆಲೆ ಕಡಿಮೆಯಾಗಲಿಲ್ಲ. ಲಾಕ್ ಡೌನ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 10 ಸಾವಿರ ರುಪಾಯಿ ನೆರವು ನೀಡಬೇಕು ಎಂಬುದು ನಮ್ಮ ಆಗ್ರಹ. ಗೊಬ್ಬರದ ಬೆಲೆ ಕಡಿಮೆ ಮಾಡಬೇಕು. ತರಕಾರಿ, ಹೂ ಬೆಳೆದು, ನಷ್ಟ ಆದವರಿಗೆ ಪರಿಹಾರ ಕೊಡಬೇಕು. ಸಾಂಪ್ರದಾಯಿಕ ವೃತ್ತಿ ಆಧರಿಸಿದವರಿಗೆ, ಜಿಮ್, ಸಿನಿಮಾ ತಂತ್ರಜ್ಞರಿಗೆ ನೆರವು ಸಿಗಬೇಕು. ನಿಮ್ಮಿಂದ ಇದನ್ನು ನಿಭಾಯಿಸಲು ಆಗುತ್ತಿಲ್ಲ. ಕೋವಿಡ್ ಪ್ರಕರಣದ ಸಂಖ್ಯೆ ಕಡಿಮೆ ಮಾಡಲು ಪರೀಕ್ಷೆ ನಡೆಸುವುದನ್ನೇ ಕಡಿಮೆ ಮಾಡಿದ್ದೀರಿ. ಸರ್ಕಾರ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಬಡ್ಡಿ ಮನ್ನಾ ಮಾಡಬೇಕು, ಸಾಲದ ಕಂತು ಕಟ್ಟಲು ಕಾಲಾವಕಾಶ ನೀಡಬೇಕು. ಕೇಂದ್ರ ಸರ್ಕಾರವೇ ಲಸಿಕೆ ನೀಡಬೇಕು ಎಂದು ಕೇಳಬೇಕು. ರಾಜ್ಯದ ಹಣವನ್ನೇಕೆ ಇದಕ್ಕೆ ಬಳಸಬೇಕು? ಕೇಂದ್ರ ಸರಕಾರವೇ ಜವಾಬ್ದಾರಿ ಹೊರುವುದು ಜಗತ್ತಿನಾದ್ಯಂತ ಇರುವ ನೀತಿ. ಆದರೆ ಇಲ್ಲಿ ಅದು ಉಲ್ಟಾ ಆಗಿದೆ. ಸೋಂಕು ಹೆಚ್ಚಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.