Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Team Udayavani, Apr 24, 2024, 11:47 PM IST
ಕನಕಪುರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯವರಿಗೆ ಅಭ್ಯರ್ಥಿ ಇರಲಿಲ್ಲವಂತೆ, ಎಚ್.ಡಿ. ಕುಮಾರಸ್ವಾಮಿಗೆ ಇಲ್ಲಿ ನಿಂತುಕೊಳ್ಳಲು ಧೈರ್ಯ ಇರಲಿಲ್ಲವಂತೆ. ಈ ಕಾರಣದಿಂದ ದೇವೇಗೌಡರ ಅಳಿಯ, ಕುಮಾರಸ್ವಾಮಿಯವರ ಬಾಮೈದನನ್ನು ಕರೆತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಸ್ವಕ್ಷೇತ್ರದ ವಿವಿಧ ಕಡೆ ಬಿರುಸಿನ ಪ್ರಚಾರ ನಡೆಸಿ ತಮ್ಮ ಸಹೋದರನ ಪರ ಮತಯಾಚನೆ ಮಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿಯವರು ಯಾಕೆ ಸಮಯ ವ್ಯರ್ಥ ಮಾಡುತ್ತೀರಿ? ನಾವು ಜಾತಿ ಧರ್ಮ ನೋಡುವುದಿಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ.
ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಬಿಟ್ಟು ನಿಮ್ಮ ತಾಲೂಕಿನ ಹಿತ ದೃಷ್ಟಿಯನ್ನು ನೋಡಿ ಎಂದು ವಿಪಕ್ಷದ ಮುಖಂಡರಿಗೆ ಬಹಿರಂಗವಾಗಿ ಆಹ್ವಾನ ನೀಡಿದರು.
ನಮ್ಮ ಬದುಕು, ಪಲ್ಲಕ್ಕಿ, ನಮ್ಮ ಹೆಣ ಎಲ್ಲವೂ ಇಲ್ಲೆ: ಡಿ.ಕೆ. ಶಿವಕುಮಾರ್
ಕನಕಪುರ: ಕೆಲವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಬರುತ್ತಾರೆ, ಮಾತನಾಡುತ್ತಾರೆ. ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ದೇವೇಗೌಡರು ಐದು ವರ್ಷಕ್ಕೊಮ್ಮೆ ಬರುತ್ತಾರೆ. ಅದಕ್ಕೆ ನಮ್ಮದೇನು ತಕರಾರಿಲ್ಲ. ಆದರೆ ನಮ್ಮದು ಹಾಗಲ್ಲ. ನಮ್ಮ ಬದುಕು, ನಮ್ಮ ಪಲ್ಲಕ್ಕಿ, ನಮ್ಮ ಹೆಣ, ಎಲ್ಲವೂ ಇಲ್ಲೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್ ಮುಖಂಡರ ವಿರುದ್ಧ ವಾಗ್ಧಾಳಿ ನಡೆಸಿದರು.
ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರದ ಕೊನೆಯ ದಿನ ಸ್ವಕ್ಷೇತ್ರದ ವಿವಿಧೆಡೆ ಸಹೋದರ ಡಿ.ಕೆ.ಸುರೇಶ್ ಪರ ಮತಯಾಚಿಸಿ ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅಸೂಯೆಯಿಂದ ಆ ರೀತಿ ಮಾತನಾಡಿದ್ದಾರೆ.
ಬಿಜೆಪಿಯವರು 15 ಲಕ್ಷ ರೂ. ಕೊಡ್ತೀವಿ ಅಂದರೂ ಕೊಟ್ಟಿದ್ದಾರೆಯೇ? ಪ್ರಶ್ನಿಸಿದ ಅವರು, ದಳ ಮತ್ತು ಬಿಜೆಪಿಯವರು ಖಾಲಿ ಚೊಂಬು ಮಾತ್ರ ಕೊಟ್ಟಿದ್ದಾರೆ ಎಂದು ದೂರಿದರು. ಈ ಹಿಂದೆ ದೇವೇಗೌಡರ ಕುಟುಂಬ ಮತ್ತು ನಾವು ಸಾಕಷ್ಟು ಬಾರಿ ಎದುರಾಳಿಯಾಗಿದ್ದೇವೆ. ನನ್ನ ಮತ್ತು ದೇವೇಗೌಡರ ಮಧ್ಯೆ, ಪಿಜಿಆರ್ ಸಿಂಧ್ಯಾ ಮತ್ತು ದೇವೇಗೌಡರು, ನನ್ನ ಮತ್ತು ಕುಮಾರಸ್ವಾಮಿ ಮಧ್ಯೆ ಚುನಾವಣೆ ನಡೆದಿದೆ. ಡಿ.ಕೆ.ಸುರೇಶ್ ವಿರುದ್ಧ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದರೂ ಪರಾಭವಗೊಂಡರು ಎಂದು ಹೇಳಿ ಹಿಂದಿನ ಚುನಾವಣೆಗಳ ಬಗ್ಗೆ ಮೆಲುಕು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.