ಬಿಜೆಪಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿದೆ: ಎಚ್‌ಡಿಕೆ
Team Udayavani, Jul 22, 2019, 3:07 AM IST
ಬೆಂಗಳೂರು: ಆಡಳಿತಾರೂಢ ಮಿತ್ರ ಪಕ್ಷಗಳ ಶಾಸಕರನ್ನು ಬಲವಂತವಾಗಿ ಕರೆದೊಯ್ದು ಬಿಜೆಪಿ ಪ್ರಜಾಪ್ರಭುತ್ವದ ಅಣಕವಾಡಿದೆ. ಬಿಜೆಪಿ ಕರ್ನಾಟಕದ ರಾಜಕಾರಣವನ್ನು ಪಾತಾಳಕ್ಕೆ ಕೊಂಡೊಯ್ದಿರುವುದಲ್ಲದೆ ದೇಶದಲ್ಲಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿರುವುದು ಅತ್ಯಂತ ನೋವಿನ ಹಾಗೂ ಜಿಗುಪ್ಸೆ ತರುವ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬಿಜೆಪಿ ಮುಖಂಡರು, ಕಾರ್ಯಕರ್ತರು ವಿಶೇಷ ವಿಮಾನಗಳಲ್ಲಿ ಮೈತ್ರಿ ಪಕ್ಷದ ಶಾಸಕರೊಂದಿಗೆ ತೆರಳಿರುವುದು ಮಾಧ್ಯಮಗಳಿಂದ ಸ್ಪಷ್ಟವಾಗಿದೆ. ಅನೈತಿಕ ಹಾಗೂ ಕಾನೂನು ಬಾಹಿರ ವಿಧಾನಗಳಿಂದ ಅಧಿಕಾರಕ್ಕೆ ಬರಲು ಹಾತೊರೆಯುತ್ತಿರುವ ಬಿಜೆಪಿ, ಈ ಎಲ್ಲ ಬೆಳವಣಿಗೆಗಳ ನಡುವೆ, ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದೆ. ವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕುವಂತೆ ರಾಜಭವನದ ಮೂಲಕ ಗಡುವನ್ನೂ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ನೈತಿಕತೆ ಕುರಿತು ಮಾತನಾಡುತ್ತಲೇ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೂಲತತ್ವ, ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿರುವುದು ಇಡೀ ದೇಶಕ್ಕೆ ಅರಿವಾಗಬೇಕು. ನಮ್ಮಿಂದ ದೂರ ಹೋಗಿರುವ ಶಾಸಕರು ಹಿಂದಿರುಗಿ, ಅಧಿವೇಶನದಲ್ಲಿ ಪಾಲ್ಗೊಂಡು, ಬಿಜೆಪಿ ಅವರನ್ನು ಹೇಗೆ ಬಲವಂತವಾಗಿ ಕರೆದೊಯ್ದಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಪ್ರಕಟಣೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ.
“ಯಾವುದೇ ಹಿಂಜರಿಕೆಯಿಲ್ಲದೆ ಬನ್ನಿ, ನಿಮ್ಮ ಸಮಸ್ಯೆಗಳೂ ಸೇರಿದಂತೆ ಎಲ್ಲ ವಿಷಯಗಳ ಕುರಿತು ಒಟ್ಟಾಗಿ ಕುಳಿತು ಮುಕ್ತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳೋಣ. ಯಾಕೆಂದರೆ, ರಾಜಕೀಯ ಪ್ರಭಾವದ ದುರ್ಬಳಕೆಯ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನೇ ಅಲುಗಾಡಿಸುತ್ತಿರುವ, ಜನತಂತ್ರದಡಿ ಆಯ್ಕೆಯಾದ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳಿಂದ ಸರ್ಕಾರವನ್ನು ಪಾರು ಮಾಡಬೇಕಾಗಿದೆ’ ಎಂದು ಕೋರಿಕೊಂಡಿದ್ದಾರೆ.
ಅಧಿಕಾರಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಾಂವಿಧಾನಿಕವಾಗಿ ರಚಿಸಲಾದ ಸಂಸ್ಥೆಗಳನ್ನೇ ನಾಶಪಡಿಸಲು ಮುಂದಾಗಿರುವ ದುಷ್ಟ ಶಕ್ತಿಗಳಿಂದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಉಳಿಸಲು ಜತೆಯಾಗಿ ಹೋರಾಟ ನಡೆಸೋಣ ಎಂದು ಅತೃಪ್ತ ಶಾಸಕರಲ್ಲಿ ಪ್ರಕಟಣೆ ಮೂಲಕ ಸಿಎಂ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
Alleged: ಇದು 60 ಪರ್ಸೆಂಟ್ ಲಂಚದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಆರೋಪ
Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ
Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ
Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.