ಸಿಎಂ ವಿರುದ್ಧ ಟೀಕೆ: ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ ಹೈಕಮಾಂಡ್
Team Udayavani, Feb 12, 2021, 1:14 PM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರವನ್ನು ಸತತವಾಗಿ ಟೀಕೆ ಮಾಡುತ್ತಿದ್ದ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕದವರು ಮುಂದಿನ ಸಿಎಂ ಆಗುತ್ತಾರೆ ಎಂಬಿತ್ಯಾದಿ ಹೇಳಿಕೆ ನೀಡಿ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.
ಇದನ್ನೂ ಓದಿ:ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ: ಎಚ್.ವಿಶ್ವನಾಥ್ ವಾಗ್ದಾಳಿ
ಸಚಿವ ಸಂಪುಟ ವಿಸ್ತರಣೆಯ ವೇಳೆ ಅಸಮಾಧಾನಗೊಂಡಿದ್ದ ಯತ್ನಾಳ್ ‘ಸಿಡಿ’ ಬಾಂಬ್ ಹಾಕಿದ್ದರು. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು.
ಇದನ್ನೂ ಓದಿ: ಅಪಘಾತಗಳ ನೋವುಂಡವರಲ್ಲಿ ನಾನೂ ಒಬ್ಬ.. ಬೇಸರ ತೋಡಿಕೊಂಡ ಲಕ್ಷ್ಮಣ ಸವದಿ
ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿದ್ದರು. ಇದೀಗ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶೋಕಾಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.