ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Team Udayavani, Oct 5, 2024, 8:53 AM IST
ಹುಬ್ಬಳ್ಳಿ: ಮುಡಾ ವಿಚಾರದಲ್ಲಿ ಬಿಜೆಪಿ ಅನವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ಪ್ರಧಾನಿ ಅಂಥವರು ವಿವಿಧ ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ನಮಗೂ ಸಹ ಇವರ ರೀತಿ ರಾಜಕಾರಣ ಮಾಡಲು ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹರಿಹಾಯ್ದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತನಿಖೆ ನಡೆಯುತ್ತಿದೆ. ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿಯವರು ಈ ವಿಷಯವನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸುತ್ತಾರೆ. ಇದು ರಾಜಕಾರಣ ಅಲ್ಲದೇ ಮತ್ತಿನ್ನೇನು. ನಮಗೂ ರಾಜಕಾರಣ ಮಾಡಲು ಬರುತ್ತದೆ. ನಮ್ಮ ಕಾಂಗ್ರೆಸ್ ಸರ್ಕಾರ ಅದಕ್ಕೆ ಸಮರ್ಥ ಉತ್ತರ ಕೊಡುತ್ತದೆ ಎಂದು ಕುಟುಕಿದರು.
ನಾವು ಯಾರ ಮೇಲೂ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಮುಡಾ ವಿಚಾರವಾಗಿ ಈಗಾಗಲೇ ತನಿಖೆ ನಡೆದಿದೆ. ಪ್ರತಿ ಪಕ್ಷದವರು ಸರ್ಕಾರಕ್ಕೆ ಸಲಹೆ, ಸೂಚನೆ ಕೊಡಬೇಕು. ಅದನ್ನು ಮೀರಿ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದರು.
ಸೈಟ್ ವಾಪಸ್ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ ಮೊದಲು ರಾಜೀನಾಮೆ ಕೊಡಲಿ. ಆ ನಂತರ ಉಳಿದವರ ರಾಜೀನಾಮೆ ಪ್ರಶ್ನೆ ಬರುತ್ತದೆ ಎಂದರು.
ಬೆಂಗಳೂರಿನಲ್ಲಿ ಪಾಕಿಸ್ತಾನದವರು ಅಕ್ರಮವಾಗಿ ನೆಲೆಸಿದ್ದನ್ನು ಪತ್ತೆ ಹಚ್ಚಿ ಬಂಧಿಸಿರುವುದು ಕರ್ನಾಟಕದ ಪೋಲಿಸರು. ಆದರೆ, ಕೇಂದ್ರದ ಸಿಬಿಐ ಸೇರಿದಂತೆ ಎಲ್ಲಾ ಎಜೆನ್ಸಿಗಳು ದೇಶದಲ್ಲಿ ಪಾಕಿಸ್ತಾನದವರ ಇರುವಿಕೆ ಪತ್ತೆ ಹಚ್ಚುವಲ್ಲಿ ವಿಫಲವಾಗಿವೆ ಎಂದರು.
ಜಾತಿ ಗಣತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ನಂತರ ತೀರ್ಮಾನ ಮಾಡಲಾಗುವುದು. ಪಿಎಸ್‌ಐ ಅಭ್ಯರ್ಥಿಗಳ ವಿವಾದ ನ್ಯಾಯಾಲಯದಲ್ಲಿದೆ. ಹೀಗಾಗಿ ಕಗ್ಗಂಟಾಗಿದೆ. ಶೀಘ್ರವೇ ಇದು ಪರಿಹಾರವಾಗಲಿದೆ. ಹುಬ್ಬಳ್ಳಿಯ ಮೇಲ್ಸೇತುವೆ ಅವಘಡದಲ್ಲಿ ಎಎಸ್‌ಐ ಅಧಿಕಾರಿ ಸಾವಿನ ಬಗ್ಗೆ ಮಾಹಿತಿ ಇಲ್ಲ. ತಿಳಿದುಕೊಳ್ಳುವೆ ಎಂದರು.
ಇದನ್ನೂ ಓದಿ: Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.