ಉಪ ಚುನಾವಣೆಯಲ್ಲಿ ಬಿಜೆಪಿಗೇ ಹೆಚ್ಚು ಸ್ಥಾನ
Team Udayavani, Dec 8, 2019, 3:05 AM IST
ಧಾರವಾಡ: ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬರಲಿದ್ದು, ಸಮೀಕ್ಷೆಗಳೂ ಬಿಜೆಪಿಗೇ ಅತಿ ಹೆಚ್ಚು ಸ್ಥಾನ ಸಿಗುವುದಾಗಿ ತಿಳಿಸಿವೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಗಳಲ್ಲಿ ಬಿಜೆಪಿಗೇ ಹೆಚ್ಚು ಸ್ಥಾನ ಲಭಿಸಿರುವ ಕಾರಣ ಸಿದ್ದರಾಮಯ್ಯನವರು ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ ಎನ್ನುತ್ತಿದ್ದಾರೆ. ಆದರೆ, ಹೆಚ್ಚು ಸ್ಥಾನ ಸಿಗುವುದು ಗ್ಯಾರಂಟಿ. ಒಂದು ವೇಳೆ ಕಡಿಮೆ ಸ್ಥಾನ ಸಿಕ್ಕರೆ ಮಾತ್ರ ಮೈತ್ರಿ ಸರಕಾರದ ಬಗ್ಗೆ ಚರ್ಚಿಸಲಾಗುವುದು. ಡಿ.9ರಂದು ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದರು.
ತಪ್ಪಿತಸ್ಥರಿಗೆ ಶಿಕ್ಷೆ ಸ್ವಾಗತಾರ್ಹ: ಅತ್ಯಾಚಾರಿಗಳ ಮೇಲಿನ ಎನ್‌ಕೌಂಟರ್‌ನಿಂದ ಸಾಮಾನ್ಯ ಜನರಿಗೆ ಅಂತೂ ನ್ಯಾಯ ಸಿಕ್ಕ ಸಮಾಧಾನವಿದೆ. ಇದು ಪೂರ್ವನಿಯೋಜಿತ ಎನ್‌ಕೌಂಟರ್ ಅಲ್ಲ. ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದಾಗ ಆತ್ಮರಕ್ಷಣೆಗಾಗಿ ಪೊಲೀಸರು ಆಕಸ್ಮಿಕವಾಗಿ ಮಾಡಿರುವ ಎನ್‌ಕೌಂಟರ್ ಆಗಿದೆ. ಒಟ್ಟಿನಲ್ಲಿ ತಪ್ಪಿಸ್ಥರಿಗೆ ಶಿಕ್ಷೆ ಆಗಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಎನ್‌ಕೌಂಟರ್ ಮಾಡಿದ ಪೊಲೀಸ್ ಆಯುಕ್ತ ವಿಶ್ವನಾಥ ಸಜ್ಜನರ ಹುಬ್ಬಳ್ಳಿಯವರೇ ಆಗಿರುವುದು ಹೆಮ್ಮೆಯ ವಿಷಯ. ಅವರಿಗೆ ದೇಶದ ಜನರೇ ಶಹಬ್ಟಾಸ್‌ಗಿರಿ ನೀಡಿದ್ದಾರೆ. ಈ ವಿಷಯದಲ್ಲೂ ಪರ-ವಿರೋಧಗಳು ಇದ್ದು, ಅವು ವೈಯಕ್ತಿಕ ಅಭಿಪ್ರಾಯಗಳಷ್ಟೇ ಎಂದರು. ಆದರೆ, ಎಲ್ಲರಿಗೂ ಐಶ್ವರ್ಯ ರೈ ಬೇಕು ಎಂಬ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್
Officers Promotion: ಹೊಸ ವರ್ಷಕ್ಕೆ 153 ಅಧಿಕಾರಿಗಳಿಗೆ ಭಡ್ತಿ ಭಾಗ್ಯ
New Office Bearers: ಜೆಡಿಎಸ್‌ಗೆ ಹೊಸ ರಾಜ್ಯಾಧ್ಯಕ್ಷ ಜತೆಗೆ ಮೂರು ಕಾರ್ಯಾಧ್ಯಕ್ಷ?
BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.