ಬಿಜೆಪಿಯಿಂದ ಜಾತಿ, ಧರ್ಮ ಒಡೆಯುವ ಕೆಲಸ: ಸಿದ್ದರಾಮಯ್ಯ
Team Udayavani, Sep 17, 2022, 9:00 PM IST
ಮಂಡ್ಯ: ಧರ್ಮ ಕೇಂದ್ರಿತ ರಾಜಕಾರಣ ಮಾಡಬಾರದು ಎಂದು ಸಂವಿಧಾನವೇ ಹೇಳಿದೆ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಧರ್ಮ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯವರು ಜಾತಿ, ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ನಗರದ ಸುಮರವಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಭಾರತ್ ಜೋಡೋ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ನ ನಾಯಕರಾದ ರಾಹುಲ್ ಗಾಂಧಿ ಬಿಜೆಪಿಯಿಂದ ಒಡೆದಿರುವ ಮನಸ್ಸುಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಯಾತ್ರೆಯಾಗಲಿದೆ. ಆದ್ದರಿಂದ ಎಲ್ಲರೂ ಇದಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿಯದ್ದು ಭ್ರಷ್ಟ ಸರ್ಕಾರ
ರಾಜ್ಯದಲ್ಲಿರುವುದು ಭ್ರಷ್ಟ ಬಿಜೆಪಿ ಸರಕಾರ. ಸದಾ ಕಮಿಷನ್ ಪಡೆಯುವ ಮೂಲಕ ಕಾಸಿನದ್ದೆ ಚಿಂತೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ನಿಲ್ಲದ ಸಿದ್ದು-ಡಿಕೆಶಿ ಒಳಮುನಿಸು?
ಶನಿವಾರ ನಡೆದ ಭಾರತ ಐಕ್ಯತಾ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಮುನಿಸು ಮತ್ತೊಮ್ಮೆ ಬಹಿರಂಗೊಂಡಿತು. ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ ನಿಗದಿಯಾಗಿತ್ತು. ಆದರೆ ಸಿದ್ದರಾಮಯ್ಯ ಮಧ್ಯಾಹ್ನ 1 ಗಂಟೆಗೆ ಆಗಮಿಸಿದರು. ಅದಾದ ಅರ್ಧ ಗಂಟೆ ಬಳಿಕ ಡಿ.ಕೆ.ಶಿವಕುಮಾರ್ ಆಗಮಿಸಿದರು. ಅಷ್ಟರೊಳಗೆ ಸಭೆ ಆರಂಭಿಸಲಾಗಿತ್ತು. ಡಿ.ಕೆ.ಶಿವಕುಮಾರ್ ಸಭಾಂಗಣಕ್ಕೆ ಬರುತ್ತಿದ್ದಂತೆ ಕಾರ್ಯಕರ್ತರು ಜೈಕಾರ ಕೂಗಿದರು. ಇದೊಂದು ಇಬ್ಬರ ನಾಯಕರ ಶಕ್ತಿ ಪ್ರದರ್ಶನದಂತೆ ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.