ಬಿಜೆಪಿ ಜನೋತ್ಸವ ಮತ್ತೆ ಮುಂದೂಡಿಕೆ; ಕಾಂಗ್ರೆಸ್ ಲೇವಡಿ
ಜನೋತ್ಸವ ಮಾಡುವ ಶಕ್ತಿಯೂ ಇರಲಿಲ್ಲ. ಈಗ ಯೋಗವೂ ಇಲ್ಲ ...
Team Udayavani, Aug 17, 2022, 10:16 PM IST
ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ.
ಆ.28 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಈ ಕುರಿತಂತೆ ಪೂರ್ವ ಸಿದ್ಧತಾ ಸಭೆಗಳನ್ನೂ ನಡೆಸಲಾಗಿತ್ತು. ಆದರೆ, ಆಗಸ್ಟ್ ಕೊನೆ ವಾರದಲ್ಲಿ ಗಣೇಶ ಚತುರ್ಥಿ ಇರುವುದರಿಂದ ಆ ಸಂದರ್ಭದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡರೆ ಜನರನ್ನು ಸೇರಿಸುವುದು ಸಮಸ್ಯೆಯಾಗುವ ಕಾರಣಕ್ಕೆ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಗಸ್ಟ್ ಕೊನೆ ವಾರದಲ್ಲಿ ಗಣೇಶೋತ್ಸವ ಇರುವುದರಿಂದ ಜನೋತ್ಸವ ಮುಂದೂಡಲಾಗಿದೆ. ಶೀಘ್ರವೇ ಮುಂದಿನ ದಿನಾಂಕ ತಿಳಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಲೇವಡಿ
ಜನೋತ್ಸವ ಮುಂದೂಡಿಕೆ ಬಗ್ಗೆ ಬಿಜೆಪಿ ಕಾಲೆಳೆದಿರುವ ಕಾಂಗ್ರೆಸ್, ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗಳಿಗೂ ಇದಕ್ಕೂ ಸಂಬಂಧ ಇದೆಯೇ ಎಂದು ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಮತ್ತೂಮ್ಮೆ ಜನೋತ್ಸವ ಮುಂದೂಡಲಾಗಿದೆಯಂತೆ. ಬಿಜೆಪಿ ಭ್ರಷ್ಟೋತ್ಸವ ಮಾಡುತ್ತಿರುವ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರಿಗೆ ಜನೋತ್ಸವ ಮಾಡುವ ಶಕ್ತಿಯೂ ಇರಲಿಲ್ಲ. ಈಗ ಯೋಗವೂ ಇಲ್ಲ ಎಂದೆನಿಸುತ್ತದೆ ಎಂದು ಹೇಳಿದೆ.
ಸುರೇಶ್‌ಗೌಡರ ಸಿಎಂ ಬದಲಾವಣೆ ಹೇಳಿಕೆಗೂ ಮುಂದಿನ ಸಿಎಂ ನಿರಾಣಿ ಎಂಬ ಪೋಸ್ಟರ್‌ಗೂ ಹಾಗೂ ಜನೋತ್ಸವ ಮುಂದೂಡಿಕೆಗೂ ಸಂಬಂಧವಿದೆಯೇ ಎಂದು ಕೇಳಿದೆ.
ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಖಾತರಿಯಾಗಿದೆ. ಅದೇ ಕಾರಣಕ್ಕೆ ಮಾಧುಸ್ವಾಮಿ, ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಹೇಳಿದ್ದರೆ, ಶ್ರೀರಾಮುಲು ಸಿದ್ದರಾಮಯ್ಯ ಮತ್ತೂಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.