ನಾಳೆ ಬಿಜೆಪಿ ಜನೋತ್ಸವ; ಸರ್ಕಾರದ ಸಾಧನೆಗಳ ರಿಪೋರ್ಟ್ ಕಾರ್ಡ್ ಬಿಡುಗಡೆ
Team Udayavani, Sep 7, 2022, 7:30 AM IST
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಗುರುವಾರ (ಸೆ.8) ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಅದ್ಧೂರಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲ ಹೆಚ್ಚಿಸಲು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದು ಈ ಬೃಹತ್ ಸಮಾವೇಶದ ಉದ್ದೇಶವಾಗಿದೆ. ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಜ್ಯದ ಬಿಜೆಪಿಯ ಎಲ್ಲ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ವಿಶೇಷವಾಗಿ ಬಯಲು ಸೀಮೆಯ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಜಿಲ್ಲೆಗಳ ಜನರನ್ನು ಸೇರಿಸಲು ಬಿಜೆಪಿ ಯೋಜಿಸಿದೆ.
4 ಲಕ್ಷ ಜನ:
ಈಗಾಗಲೇ ಜನೋತ್ಸವದ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸುಮಾರು 4 ಲಕ್ಷ ಜನರನ್ನು ಕರೆತರಲು ಬಿಜೆಪಿ ನಿರ್ಧರಿಸಿದೆ. ಜನರನ್ನು ಕರೆ ತರಲು 4500 ಬಸ್‌ಗಳಲ್ಲದೇ, ಕಾರು, ಟಿಟಿ ಸೇರಿದಂತೆ ಇತರ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮೋತ್ಸವಕ್ಕೆ ಕೌಂಟರ್:
ಕಳೆದ ತಿಂಗಳು ದಾವಣಗೆರೆಯಲ್ಲಿ ನಡೆದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಗೆ ಪ್ರತ್ಯುತ್ತರ ನೀಡಲು ಬಿಜೆಪಿ ಈ ಸಮಾವೇಶವನ್ನು ಬಳಸಿಕೊಳ್ಳಲು ತೀರ್ಮಾಸಿದೆ ಎಂದು ಹೇಳಲಾಗಿದೆ.
ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರಿಂದ ಆ ಕಾರ್ಯಕ್ರಮ ರಾಷ್ಟ್ರ ಮಟ್ಟದಲ್ಲಿ ಹೆಚ್ಚು ಸದ್ದು ಮಾಡಿತ್ತು. ಆ ಕಾರ್ಯಕ್ರಮಕ್ಕೆ ಜನೋತ್ಸವದ ಮೂಲಕ ಬಿಜೆಪಿ ನಾಯಕರು ಸಂದೇಶ ರವಾನೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವರ ಉಸ್ತುವಾರಿ:
ಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್, ತೋಟಗಾರಿಕಾ ಸಚಿವ ಮುನಿರತ್ನ ಹಾಗೂ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಸಮಾವೇಶದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದು, ಮೂವರು ಸಚಿವರು ಸಮಾವೇಶದ ಯಶಸ್ಸಿಗಾಗಿ ನಿರಂತರ ಪ್ರಯತ್ನ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.