BJP-JDS ಪಂಚರಾಜ್ಯ ಚುನಾವಣೆ ಬಳಿಕವೇ ಮೈತ್ರಿ ಸ್ಥಾನ ಹಂಚಿಕೆ

ಕ್ಷೇತ್ರ ಹಂಚಿಕೆ ಕಗ್ಗಂಟು ಬಿಡಿಸಲು ಡಿಸೆಂಬರ್‌ ನಂತರ ಮುಹೂರ್ತ

Team Udayavani, Oct 23, 2023, 7:30 AM IST

BJP-JDS ಪಂಚರಾಜ್ಯ ಚುನಾವಣೆ ಬಳಿಕವೇ ಮೈತ್ರಿ ಸ್ಥಾನ ಹಂಚಿಕೆ

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬೆಂಬಲಿಸಿರುವ ಜೆಡಿಎಸ್‌, ಮೇಲ್ಮಟ್ಟದಲ್ಲಿ ಮೈತ್ರಿ ಮಾಡಿಕೊಂಡರೂ ಲೋಕಸಭಾ ಸ್ಥಾನ ಹಂಚಿಕೆ ವಿಚಾರವಿನ್ನೂ ನಿಗೂಢವಾಗಿಯೇ ಇದೆ.

ದಸರಾ ಹಬ್ಬದ ನಂತರ ಸ್ಥಾನಗಳ ವಿನಿಮಯ ಆಗಲಿದೆ ಎನ್ನುವ ವಿಶ್ವಾಸದಲ್ಲಿ ಜೆಡಿಎಸ್‌ ಇತ್ತು. ಆದರೆ, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರು ಮಗ್ನರಾಗಿದ್ದು, ಸದ್ಯಕ್ಕೆ ಜೆಡಿಎಸ್‌ ಜತೆಗೆ ಸ್ಥಾನ ಹಂಚಿಕೆಯ ಮಾತುಕತೆ ನಡೆಸುವ ಲಕ್ಷಣಗಳಿಲ್ಲ.

ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎನ್ನುವಂತಿರುವ ಪಂಚರಾಜ್ಯಗಳ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಸಾಕಷ್ಟು ಕಸರತ್ತು ನಡೆಸುತ್ತಿದ್ದು, ಈ ಹಂತದಲ್ಲಿ ಲೋಕಸಭೆ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳುವ ತವಕ ಇದ್ದಂತಿಲ್ಲ.

ಐದು ರಾಜ್ಯಗಳ ಚುನಾವಣಾ ಫ‌ಲಿತಾಂಶ ಹೊರಬಿದ್ದ ಬಳಿಕ ಕರ್ನಾಟಕ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಸಮಯದಲ್ಲಿ ಮೈತ್ರಿಯ ಮುಂದುವರಿದ ಮಾತುಕತೆ ನಡೆಯುವ ಅಂದಾಜಿದೆ. ಪ್ರಸ್ತುತ ಮೈತ್ರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ಭಿನ್ನಾಭಿಪ್ರಾಯಗಳಿದ್ದು, ಅದನ್ನೂ ಅಷ್ಟರೊಳಗೆ ಶಮನ ಮಾಡಿಕೊಳ್ಳುವ ಸವಾಲು ಎರಡೂ ಪಕ್ಷಗಳ ಮುಂದಿದೆ. ಇಲ್ಲದಿದ್ದರೆ, ಸ್ಥಾನ ಹಂಚಿಕೆಗಾಗಿ ನಡೆಯುವ ಮಾತುಕತೆ ಹಾಗೂ ಅದರ ಪರಿಣಾಮ ಮತ್ತಷ್ಟು ಸಂಕಷ್ಟಗಳನ್ನು ತಂದೊಡ್ಡಬಹುದು.

ಕೇಳಿದ ಕ್ಷೇತ್ರ ಬಿಟ್ಟು ಕೊಡಿ: ಮೈತ್ರಿ ಮಾತುಕತೆಯ ಆರಂಭದಲ್ಲಿಯೇ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ 24:4 ಅನುಪಾತದಲ್ಲಿ ಕ್ಷೇತ್ರ ಹಂಚಿಕೆಯ ಚಿಂತನ-ಮಂಥನ ನಡೆದಿತ್ತು. ಆದರೆ, ಬಿಜೆಪಿ ಸ್ಪರ್ಧಿಸುವ 24 ಕ್ಷೇತ್ರಗಳು ಯಾವುವು? ಜೆಡಿಎಸ್‌ ಸ್ಪರ್ಧಿಸುವ 4 ಕ್ಷೇತ್ರಗಳು ಯಾವುವು ಎಂಬುದು ಸ್ಪಷ್ಟವಾಗಿರಲಿಲ್ಲ. ಬಿಜೆಪಿಯ 24 ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವುದರಿಂದ ನಾವು ಕೇಳಿದ 4 ಕ್ಷೇತ್ರವನ್ನು ನಮಗೆ ಬಿಟ್ಟು ಕೊಡಬೇಕೆಂಬುದು ಜೆಡಿಎಸ್‌ ಷರತ್ತು ವಿಧಿಸುವ ಸಾಧ್ಯತೆಗಳಿವೆ. ಯಾವ ಪಕ್ಷಗಳ ಸಹಾಯವೂ ಇಲ್ಲದೆ, ಕಳೆದ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರವನ್ನು ಬಿಜೆಪಿ ಗೆದ್ದಿದೆ. ಹೀಗಿರುವಾಗ ಕೇಳಿದ ಕ್ಷೇತ್ರವನ್ನು ಬಿಟ್ಟುಕೊಡುವುದಕ್ಕೆ ಸಾಧ್ಯವಿಲ್ಲ. ಉಭಯ ಪಕ್ಷಗಳು ಹಳೇ ಮೈಸೂರು ಭಾಗದಲ್ಲಿಯೇ ಪ್ರವರ್ಧಮಾನಕ್ಕೆ ಬರುವ ತವಕದಲ್ಲಿದ್ದು, ಕ್ಷೇತ್ರ ಹಂಚಿಕೆಯ ಕಗ್ಗಂಟು ಬಿಡಿಸಲು ಡಿಸೆಂಬರ್‌ ನಂತರ ಮುಹೂರ್ತ ನಿಗದಿಯಾಗುವ ಸಾಧ್ಯತೆಗಳಿವೆ.

ಬಿಜೆಪಿಯಿಂದ ರಕ್ಷಣಾತ್ಮಕ ಹೆಜ್ಜೆ: ದೆಹಲಿ ಮಟ್ಟದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾತುಕತೆ ನಡೆದಿದ್ದರೂ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ರಾಜ್ಯ ನಾಯಕರು ತಲೆ ಬಿಸಿ ಮಾಡಿಕೊಂಡಿದ್ದಾರೆ.

ಸ್ಥಳೀಯ ನಾಯಕರನ್ನು ಬಿಟ್ಟು ವರಿಷ್ಠರೇ ಕ್ಷೇತ್ರ ಹಂಚಿಕೆಯನ್ನೂ ಮಾಡಿದರೆ, ಒಪ್ಪಿಕೊಂಡು ಕೆಲಸ ಮಾಡುವುದು ಕಷ್ಟವಾಗಬಹುದು ಎಂಬ ಆತಂಕವೂ ಇದೆ. ಹೀಗಾಗಿ ನಿರೀಕ್ಷಣಾತ್ಮಕವಾಗಿ ಕೆಲ ಲೋಕಸಭಾ ಕ್ಷೇತ್ರಗಳನ್ನು ಪಟ್ಟಿ ಮಾಡಿ ಕೊಡುವುದು ಲೇಸು ಎಂಬ ಚಿಂತನೆಯಿದೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರ್ಯಾರು ಎನ್ನುವಂತಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಸುಳಿವು ಇರುವುದರಿಂದ ಯಾರೊಬ್ಬರೂ ಈ ಬಗ್ಗೆ ಸ್ಪಷ್ಟ ನಿಲುವಿಗೆ ಬರಲಾಗುತ್ತಿಲ್ಲ. ಬಿಜೆಪಿ ಗೆದ್ದಿರುವ 25 ಕ್ಷೇತ್ರಗಳನ್ನು ಬಿಟ್ಟು, ಜೆಡಿಎಸ್‌ ಭದ್ರಕೊಟೆ ಎನಿಸಿರುವ ಹಾಸನ, ಮಂಡ್ಯ ಕ್ಷೇತ್ರಗಳನ್ನು ಬಿಟ್ಟುಕೊಟ್ಟು, ಸಂಸದ ಡಿ.ಕೆ.ಸುರೇಶ್‌ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಅಥವಾ ಚಿಕ್ಕಬಳ್ಳಾಪುರವನ್ನು ಜೆಡಿಎಸ್‌ ಕೈಗಿಡುವ ರಕ್ಷಣಾತ್ಮಕ ಹೆಜ್ಜೆ ಇಡುವ ಚಿಂತನೆಗಳನ್ನೂ ನಡೆಸುತ್ತಿದೆ.

ಯಾರಾಗಲಿದ್ದಾರೆ ಹಾಸನದ ದಳಪತಿ?
ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಈ ಕ್ಷೇತ್ರದಲ್ಲಿ ಜೆಡಿಎಸ್‌ನ್ನು ಬಿಜೆಪಿ ಬೆಂಬಲಿಸಬೇಕಾಗಬಹುದು. ಪ್ರಜ್ವಲ್‌ ರೇವಣ್ಣ ಅವರೇ ಮತ್ತೆ ಸ್ಪರ್ಧಿಸುತ್ತಾರೋ ಅಥವಾ ರಾಜ್ಯಸಭಾ ಸದಸ್ಯರಾಗಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರೇ ಸ್ಪರ್ಧಿಗಿಳಿಯುತ್ತಾರಾ? ಇಬ್ಬರ ಬದಲು ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿಸುತ್ತಾರಾ ಕಾದು ನೋಡಬೇಕಿದೆ.

ನಿಖಿಲ್ ಅದೃಷ್ಟ ಪರೀಕ್ಷೆ, ಪ್ರಜ್ವಲ್‌ಗ‌ೂ ಸ್ಥಾನ
ಮಂಡ್ಯದಲ್ಲಿ ಬಿಜೆಪಿ ಬೆಂಬಲಿಸಿದ್ದ ಪಕ್ಷೇತರ ಸದಸ್ಯೆ ಸುಮಲತಾರನ್ನು ಮತ್ತೆ ಬೆಂಬಲಿಸಬೇಕೇ ಬೇಡವೇ ಎಂಬ ಡೋಲಾಯಮಾನ ಸ್ಥಿತಿಯಲ್ಲಿ ಬಿಜೆಪಿ ಇದೆ. ಜೆಡಿಎಸ್‌ಗೆ ಬೆಂಬಲಿಸಿದರೆ, ಸ್ಪರ್ಧಿ ಯಾರು ಎಂಬುದು ಇನ್ನೂ ನಿಗೂಢವಾಗಿದೆ. ಹಿಂದೆ ಸುಮಲತಾ ವಿರುದ್ಧ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಪರೀಕ್ಷೆಗೆ ಒಡ್ಡಿಕೊಳ್ಳಲಿದ್ದಾರೆಯೇ ಎಂಬುದು ಗೊತ್ತಿಲ್ಲ. ಆದರೆ, ಪ್ರಜ್ವಲ್‌ರನ್ನು ಮಂಡ್ಯದಿಂದ ಕಣಕ್ಕಿಳಿಸುವ ಪ್ಲಾನ್‌ ಸಹ ಇದೆ.

ಡಿ.ಕೆ. ಸುರೇಶ್‌ ವಿರುದ್ಧ ಕಣಕ್ಕಿಳಿಯಲಿದ್ದಾರೆಯೇ ಎಚ್‌ಡಿಕೆ?
ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ. ಸುರೇಶ್‌ರನ್ನು ಮಣಿಸಲು ಬಿಜೆಪಿ-ದಳ ಟೊಂಕ ಕಟ್ಟಿ ನಿಲ್ಲಲಿದ್ದು, ಚನ್ನಪಟ್ಟಣದ ಸಿ.ಪಿ.ಯೋಗೇಶ್ವರ್‌ ಹಾಗೂ ರಾಮನಗರ ಶಾಸಕರೂ ಆಗಿರುವ ಎಚ್‌.ಡಿ.ಕುಮಾರಸ್ವಾಮಿ ಕೂಡ ಜಂಟಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಕುಮಾರಸ್ವಾಮಿ ಅವರೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಮನಗರ ವಿಧಾನಸಭಾ ಕ್ಷೇತ್ರವನ್ನು ಬಿಟ್ಟು ಕೊಟ್ಟರೂ ಅಚ್ಚರಿಯಿಲ್ಲ.

ಕೋಲಾರವೋ, ಚಿಕ್ಕಬಳ್ಳಾಪುರವೋ?
ಕೋಲಾರದಲ್ಲಿ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಇದ್ದಾರೆ. ಸ್ವಂತ ವರ್ಚಸ್ಸಿನಿಂದ ಗೆಲ್ಲುವುದು ಸುಲಭವಿಲ್ಲ. ಚಿಕ್ಕಬಳ್ಳಾಪುರದಲ್ಲೂ ಬಿಜೆಪಿಗೆ ಅಭ್ಯರ್ಥಿ ಸಿಗುವುದು ಕಷ್ಟವಿದೆ. ಹೀಗಾಗಿ ಎರಡರಲ್ಲಿ ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ತಯಾರಿದೆ. ದೇವನಹಳ್ಳಿ ಶಾಸಕರಾಗಿದ್ದ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಟಿಕೆಟ್‌ ಕೊಟ್ಟರೆ, ಬಿಜೆಪಿ ಸಹ ಬೆಂಬಲಿಸುವ ಸಾಧ್ಯತೆಗಳು ನಿಚ್ಚಳವಾಗಿವೆ.

ತುಮಕೂರು ಕೇಳುತ್ತಿರುವ ಜೆಡಿಎಸ್‌
ಬಿಜೆಪಿ ಸಂಸದ ಬಸವರಾಜು ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಪ್ರಕಟಸಿದ್ದಾರೆ. ಹೀಗಾಗಿ ಲಿಂಗಾಯತ ಮತಪ್ರಭಾವ ಇರುವ ತುಮಕೂರಿನಲ್ಲಿ ಒಕ್ಕಲಿಗ ಮತವನ್ನು ಗಟ್ಟಿಗೊಳಿಸಿಕೊಳ್ಳಬೇಕು ಎಂದುಕೊಂಡಿರುವ ಜೆಡಿಎಸ್‌, ತುಮಕೂರಿನಲ್ಲಿ ಜಂಟಿ ಹೊರಾಟಕ್ಕೆ ಬೇಡಿಕೆ ಇಡಬೇಕೆಂದಿದೆ. ಹಾಗೊಂದು ವೇಳೆ ತುಮಕೂರು ಬಿಟ್ಟುಕೊಟ್ಟರೆ ದೇವೇಗೌಡರು ಮರು ಸ್ಪರ್ಧೆ ಸಾಧ್ಯತೆ. ಸೋತ ಕ್ಷೇತ್ರದಿಂದಲೇ ಗೆದ್ದು ಕಾಂಗ್ರೆಸ್‌ಗೆ ಟಾಂಗ್‌ ಕೊಡಬೇಕೆಂಬ ಇರಾದೆ. ಆದರೆ, ತನ್ನ ತೆಕ್ಕೆಯಲ್ಲಿರುವ ತುಮಕೂರನ್ನು ಬಿಟ್ಟುಕೊಡಲು ಬಿಜೆಪಿ ಒಪ್ಪುವ ಯಾವ ಲಕ್ಷಣಗಳೂ ಇಲ್ಲ.

ಟಾಪ್ ನ್ಯೂಸ್

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.