BJP-JD(S) ಬೆಂಗಳೂರು-ಮೈಸೂರು ಪ್ರತಿಭಟನಾ ಪಾದಯಾತ್ರೆಗೆ ದಿನಾಂಕ ನಿಗದಿ
ಕೇಂದ್ರ ಬಿಜೆಪಿ ನಾಯಕರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ...
Team Udayavani, Jul 28, 2024, 8:33 PM IST
ಬೆಂಗಳೂರು: ಹಗರಣಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಭಾರೀ ಹೋರಾಟಕ್ಕೆ ಮುಂದಾಗಿರುವ ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಆಗಸ್ಟ್ 3 ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಿಸಲಿದ್ದು ಆಗಸ್ಟ್ 10ರಂದು ಮುಕ್ತಾಯಗೊಳಿಸಲಿದೆ.
ಭಾನುವಾರ ನಡೆದ ಬಿಜೆಪಿ -ಜೆಡಿಎಸ್ ಉನ್ನತ ನಾಯಕರ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ”ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಅವ್ಯವಹಾರ, ಮೈಸೂರು ನಗರಾಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಂತಹ ಹಗರಣಗಳನ್ನು ವಿರೋಧಿಸಿ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: BJP-JDS Meet: ಸುದ್ದಿಗೋಷ್ಠಿ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ !
“ಬೆಂಗಳೂರಿನಿಂದ ನಮ್ಮ ಮೆರವಣಿಗೆ ಆಗಸ್ಟ್ 3 ರಿಂದ ಪ್ರಾರಂಭವಾಗುತ್ತದೆ. ಮೆರವಣಿಗೆಯನ್ನು ಪೂರ್ಣಗೊಳಿಸಲು ಒಂದು ವಾರ ಬೇಕಾಗುತ್ತದೆ. ಆಗಸ್ಟ್ 10 ರಂದು ಮುಕ್ತಾಯವಾಗಲಿದೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದು, ಕೇಂದ್ರ ಬಿಜೆಪಿ ನಾಯಕರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ, ವಿಧಾನಸಭೆಯ ವಿಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮತ್ತು ಕಾರ್ಯತಂತ್ರ ರೂಪಿಸಲು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.