ಹೊಸಬರ ನಿರೀಕ್ಷೆ , ಹಳಬರ ಆತಂಕ
Team Udayavani, Jul 29, 2021, 7:50 AM IST
ಬೆಂಗಳೂರು: ನೂತನ ಮುಖ್ಯ ಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಸಚಿವ ಸಂಪುಟ ರಚನೆ ಸಾಕಷ್ಟು ಕುತೂ ಹಲ ಮೂಡಿಸಿದ್ದು, ಆಕಾಂಕ್ಷಿ ಗಳಿಗೆ ನಿರೀಕ್ಷೆ ಹೆಚ್ಚಾ ಗಿದ್ದರೆ, ಮಾಜಿ ಸಚಿವರಿಗೆ ಆತಂಕ ಹೆಚ್ಚಿದೆ.
ಸಂಪುಟ ರಚನೆ ಕುರಿತು ಚರ್ಚಿಸುವುದಕ್ಕಾಗಿ ದಿಲ್ಲಿಗೆ ತೆರಳಲು ಬೊಮ್ಮಾಯಿ ಸಮಯ ಕೇಳಿ ದ್ದಾರೆ. ಹೊಸ ಮುಖಗಳಿಗೆ ಆದ್ಯತೆ ನೀಡಲು ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸಚಿವಾಕಾಂಕ್ಷಿಗಳು ಈಗಾ ಗಲೇ ಲಾಬಿ ಆರಂಭಿಸಿದ್ದಾರೆ.
ಶುಕ್ರವಾರ ದಿಲ್ಲಿಗೆ ತೆರಳಿ, ವರಿಷ್ಠರ ಜತೆ ಸಂಪುಟ ರಚನೆ ಬಗ್ಗೆ ಚರ್ಚಿಸುತ್ತೇನೆ. ಶೆಟ್ಟರ್ ಸಂಪುಟ ಸೇರಲು ನಿರಾಕರಿಸಿದ್ದು ತಿಳಿದಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಹಿರಿಯರಿಗೆ ಕೊಕ್?:
ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಪಡೆದವರು ಮತ್ತು ಸಚಿವರಾಗಿ ಎರಡು ವರ್ಷ ಪೂರ್ಣಗೊಳಿಸಿರುವ ಹಿರಿಯರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಬಿಜೆಪಿ ವರಿಷ್ಠರು ಚಿಂತಿಸಿದ್ದಾರೆ. ಜಗದೀಶ್ ಶೆಟ್ಟರ್, ಈಶ್ವರಪ್ಪ, ಸೋಮಣ್ಣ, ಸುರೇಶ್ ಕುಮಾರ್ ಸಹಿತ ಅನೇಕ ಹಿರಿಯ ನಾಯಕರನ್ನು ಹೀಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಚಿವರಾಗಿದ್ದೂ ಸಕ್ರಿಯರಾಗಿರ ದಿದ್ದ ಎಂ.ಟಿ.ಬಿ. ನಾಗರಾಜ್, ಶ್ರೀಮಂತ ಪಾಟೀಲ್, ಕೆ. ಗೋಪಾಲಯ್ಯ, ನಾರಾಯಣ ಗೌಡ ಸಹಿತ ಕೆಲವರನ್ನು ಹೊರಗಿಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ವಲಸಿಗರಲ್ಲಿ ಯಾರನ್ನೂ ಕೈಬಿಡಬಾರದು ಎಂದು ಬೊಮ್ಮಾಯಿ ಮತ್ತು ಬಿಎಸ್‌ವೈ ಅವರು ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ವಲಸಿಗ ಮಾಜಿ ಸಚಿವರೆಲ್ಲ ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಮ್ಮನ್ನು ಸಂಪುಟದಿಂದ ಹೊರಗಿಡುವುದಾಗಿ ಹೇಳಿಲ್ಲ. ಅಂಥ ಪ್ರಶ್ನೆ ಉದ್ಭವಿಸುವುದಿಲ್ಲ. ನಮಗೆ ವರಿಷ್ಠರ ಮೇಲೆ ನಂಬಿಕೆ ಇದೆ, ಆತಂಕ ಇಲ್ಲ ಎಂದು ಭೇಟಿಯ ಬಳಿಕ ಮಾಜಿ ಸಚಿವರು ಹೇಳಿದ್ದಾರೆ.
ಜತೆಗೆ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಪ್ರತಿವಾದಿಯಾಗಿರುವ ರಾಜ್ಯ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ದೇವಿ ಪ್ರಸಾದ್ ಅವರಿಗೂ ನೋಟಿಸ್ ಜಾರಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.