ರಾಜಭವನ ಚಲೋ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ? ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನೆ
Team Udayavani, Jan 20, 2021, 12:06 PM IST
ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ನಿಮ್ಮ ಅಧಿಕಾರದ ಅವಧಿಯಲ್ಲಿ ರೈತರ ಆತ್ಮಹತ್ಯೆ ನಡೆದಾಗ ಸುಮ್ಮನಿದ್ದು, ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕಾಂಗ್ರೆಸ್ ಪ್ರತಿಭಟನೆಯ ಬಗ್ಗೆ ವ್ಯಂಗ್ಯವಾಡಿದೆ.
2013-14 – 104, 2014-15 – 128, 2015-16 – 1483, 2016-17 – 1185, 2018-19 – 900 ಹೀಗೆ 3800 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ ಎಂದು ಟೀಕಿಸಿದೆ.
ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟದಂತೆ ರೈತರು ಪ್ರತಿಭಟನೆ ನಡೆಸಬೇಕು: ಡಿ ಕೆ ಶಿವಕುಮಾರ್
ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ.
2019 ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡುವುದುದಾಗಿ ಕಾಂಗ್ರೆಸ್ ಘೋಷಿಸಿತ್ತು. ನರೇಂದ್ರ ಮೋದಿ ಸರ್ಕಾರ ಆ ಕಾರ್ಯ ಮಾಡಿದಾಗ ಮಾತ್ರ ಬೀದಿಗೆ ಬಂದು ಬೊಬ್ಬೆ ಹೊಡೆಯುತ್ತಿದ್ದಾರೆ. ನಿಮ್ಮ ದುರಾಡಳಿತದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ʼರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼ ಎಂದು ಹೇಳಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದೆ.
ಇದನ್ನೂ ಓದಿ: ಸಚಿವ ಬಿ.ಸಿ. ಪಾಟೀಲ್ ರೈತರ ಕ್ಷಮೆ ಕೇಳಬೇಕು: ಶಾಸಕ ಪುಟ್ಟರಾಜು ಆಗ್ರಹ
ಪ್ರಧಾನಿ ಮೋದಿ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ಕಾಯ್ದೆ ಜಾರಿಗೆ ತಂದಿತು. ರೈತರು ನೇರವಾಗಿ ಮಾರಾಟ ಮಾಡಿದರೆ ಹೆಚ್ಚು ಲಾಭಗಳಿಸುತ್ತಾರೆ ಎಂಬುದು ಲೋಕ ಸತ್ಯ. ಆದರೆ ನೀವು ಮಾತ್ರ ಇದನ್ನು ವಿರೋಧಿಸುತ್ತಿದ್ದೀರಿ. ಕಾಂಗ್ರೆಸ್ ನವರೇ ನೀವೇಕೆ ದಲ್ಲಾಳಿಗಳ ಪರ ವಕಾಲತ್ತು ವಹಿಸುತ್ತೀರಿ ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.