ಸಿದ್ದರಾಮಯ್ಯನವರೇ ಬೀಗುವಾಗ ಹತ್ತು ಬಾರಿ ಯೋಚಿಸಿ, ನಿಮ್ಮದು ಬಣ್ಣದ ತಗಡಿನ ತುತ್ತೂರಿ: ಬಿಜೆಪಿ
Team Udayavani, Nov 4, 2021, 12:58 PM IST
ಬೆಂಗಳೂರು: ಸಿದ್ದರಾಮಯ್ಯನವರೇ, ತಾನೊಬ್ಬ ಅಹಿಂದ ನಾಯಕ ಎಂದು ಅಧಿಕಾರಕ್ಕೆ ಬಂದ ಮೇಲೆ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ. ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ದಲಿತ ವಿರೋಧಿ ಸಿದ್ದರಾಮಯ್ಯ ಹ್ಯಾಷ್ ಟ್ಯಾಗ್ ನಡಿ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
ಮಾನ್ಯ ಸಿದ್ದರಾಮಯ್ಯನವರೇ, ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ ಸ್ವಾಮಿ? ಜನ ಹೊಸದನ್ನು ಬಯಸುತ್ತಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಂದೆ ನಿಂತು “ದಲಿತರನ್ನು ಮುಖ್ಯಮಂತ್ರಿ” ಮಾಡುತ್ತೇನೆ ಎಂದು ಹೇಳಿ ನೋಡೋಣ. ಆಗ ನಿಮ್ಮ ದಲಿತ ಪ್ರೇಮವನ್ನು ಒಪ್ಪಿಕೊಳ್ಳೋಣ. ಸಿದ್ದರಾಮಯ್ಯನವರಿಗೆ ದಲಿತರು ಎಂದರೆ ಕೇವಲ ಮತಬ್ಯಾಂಕ್. ಈ ಕಾರಣಕ್ಕಾಗಿಯೇ ನಮ್ಮ ಸರ್ಕಾರವಿದ್ದಾಗ ದಲಿತ ಸಮುದಾಯದ ಅಭಿವೃದ್ಧಿಗೆ ಹಣ ನೀಡಿದ್ದೇನೆ ಎಂದು ಹೇಳುತ್ತಾರೆ. ಅಂತರ್ಯದಲ್ಲಿ ದಲಿತ ನಾಯಕರನ್ನು ತುಳಿದು ಅಧಿಕಾರಕ್ಕೆ ಏರುತ್ತಾರೆ. ಸಿದ್ದರಾಮಯ್ಯ ಅವರದು ಬಣ್ಣದ ತಗಡಿನ ತುತ್ತೂರಿ ಎಂದು ಟೀಕಿಸಿದೆ.
ಇದನ್ನೂ ಓದಿ:ಬೊಕ್ಕಸಕ್ಕೆ ಕೊರತೆಯಾದರೂ ಪೆಟ್ರೋಲ್-ಡೀಸಲ್ ತೆರಿಗೆ ಇಳಿಕೆ: ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯನವರೇ, ದಲಿತ ಪರ ಕಾಳಜಿ ಮೆರೆದಿದ್ದೀರಲ್ಲವೇ? ಹಾಗಾದರೆ, ಕೊರಟಗೆರೆಯಲ್ಲಿ ದಲಿತ ನಾಯಕ ಡಾ.ಜಿ. ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? ಮುಖ್ಯಮಂತ್ರಿಯಾಗುವುದಕ್ಕೆ ಪರಮೇಶ್ವರ್ ಅವರು ಅಡ್ಡಿಯಾಗುತ್ತಾರೆ ಎನ್ನುವ ಕಾರಣಕ್ಕೆ ನೀವೇ ಸೋಲಿಸಿದ್ದಲ್ಲವೇ? ಸತ್ಯದರ್ಶನ ಮಾಡಿಸುವಿರಾ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.
ಮಾನ್ಯ ಸಿದ್ದರಾಮಯ್ಯನವರೇ,
√ ದಲಿತ ನಾಯಕ ಡಾ.ಮಹಾದೇವಪ್ಪ ಅವರನ್ನು ದೂರವಿಟ್ಟಿದ್ದು ಹೊಟ್ಟೆಪಾಡಿಗಾಗಿಯೇ?
√ ದಲಿತ ನಾಯಕ ಪರಮೇಶ್ವರ್ ಅವರ ಏಳಿಗೆ ಸಹಿಸದ್ದು ಹೊಟ್ಟೆಪಾಡಿನ ಕಾರಣಕ್ಕಾಗಿಯೇ?
√ ಈಗ ನೀವು ದಲಿತ ಪರ ಹೇಳಿಕೆ ನೀಡುತ್ತಿರುವುದೂ ಹೊಟ್ಟೆಪಾಡಿಗಾಗಿಯೇ?#ದಲಿತವಿರೋಧಿಸಿದ್ದರಾಮಯ್ಯ
— BJP Karnataka (@BJP4Karnataka) November 4, 2021
ಸಿದ್ದರಾಮಯ್ಯನವರೇ, ನೀವು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು ಹೊಟ್ಟೆಪಾಡಿಗಾಗಿಯೇ? ಮಲ್ಲಿಕಾರ್ಜುನ ಖರ್ಗೆ ಅವರನ್ನು ನೀವು ಪಿತೂರಿ ನಡೆಸಿ ದೆಹಲಿಗೆ ಸಾಗಹಾಕಿದ್ದು ಹೊಟ್ಟೆಪಾಡಿಗಾಗಿಯೇ? ದಲಿತ ನಾಯಕ ಡಾ.ಮಹಾದೇವಪ್ಪ ಅವರನ್ನು ದೂರವಿಟ್ಟಿದ್ದು ಹೊಟ್ಟೆಪಾಡಿಗಾಗಿಯೇ? ದಲಿತ ನಾಯಕ ಪರಮೇಶ್ವರ್ ಅವರ ಏಳಿಗೆ ಸಹಿಸದ್ದು ಹೊಟ್ಟೆಪಾಡಿನ ಕಾರಣಕ್ಕಾಗಿಯೇ? ಈಗ ನೀವು ದಲಿತ ಪರ ಹೇಳಿಕೆ ನೀಡುತ್ತಿರುವುದೂ ಹೊಟ್ಟೆಪಾಡಿಗಾಗಿಯೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.