ಸರಕಾರದಿಂದ ಫೋನ್ ಕದ್ದಾಲಿಕೆ, ರಾಜ್ಯಪಾಲರಿಗೆ ಬಿಜೆಪಿ ದೂರು
Team Udayavani, Aug 22, 2017, 6:05 AM IST
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ದುರುಪಯೋಗ ಪಡಿಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರಕಾರ ವಿಪಕ್ಷ ನಾಯಕರ ದೂರವಾಣಿ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವ ಬಿಜೆಪಿ, ಈ ಕುರಿತು ಮಧ್ಯಪ್ರವೇಶಿಸಿ ಸರಕಾರಕ್ಕೆ ಕಿವಿಮಾತು ಹೇಳುವಂತೆ ಕೋರಿದೆ.
ಸೋಮವಾರ ವಿಧಾನಸೌಧದ ಎದುರಿನ ಅಂಬೇಡ್ಕರ್ ಪ್ರತಿಮೆಯಿಂದ ರಾಜಭವನದ ವರೆಗೆ ಪಾದಯಾತ್ರೆ ನಡೆಸಿದ ಕೇಂದ್ರ ಸಚಿವ ಅನಂತ್ ಕುಮಾರ್, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಸಂಸದರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಶಾಸಕರಾದ ಆರ್. ಅಶೋಕ್, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ ಸಹಿತ ಹಲವಾರು ಮುಖಂಡರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಈ ಕುರಿತು ದೂರು ನೀಡಿದ್ದಾರೆ.
ಎಸಿಬಿ ಮತ್ತು ನಕಲಿ ಆರ್‌ಟಿಐ ಕಾರ್ಯಕರ್ತರನ್ನು ಬಳಸಿಕೊಂಡು ಬಿಜೆಪಿ ನಾಯ ಕರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹಾಕಿಸ ಲಾಗುತ್ತಿದೆ. ಕಾನೂನು ನಿಬಂಧನೆ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿ ಕೊಂಡು ವಿಪಕ್ಷ ಮುಖಂಡರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ. ಆರ್‌ಎಸ್‌ಎಸ್ ಕಾರ್ಯಕರ್ತರ ಕೊಲೆಗಳಲ್ಲಿ ಶಾಮೀಲಾ ಗಿರುವ ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರಕಾರ ವಿಫಲವಾಗಿದೆ ಎಂದು ಈ ದೂರಿನಲ್ಲಿ ವಿವರಿಸಲಾಗಿದೆ.
ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿದ ಬಳಿಕ ಪತ್ರಕರ್ತರ ಜತೆ ಮಾತ ನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಯಾವ ರೀತಿ ಕುತಂತ್ರಗಳನ್ನು ಹೆಣೆಯುತ್ತಿದೆ ಎಂಬ ಬಗ್ಗೆ ರಾಜ್ಯಪಾಲರಿಗೆ ವಿವರಣೆ ನೀಡಿದ್ದೇವೆ. ಅದೇ ರೀತಿ ಬಿಜೆಪಿ ನಾಯಕರ ಮೇಲೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುವುದು, ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವುದು, ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರನ್ನು ಕೊಲೆ ಮಾಡಿಸಿ ರಾಜ್ಯದಲ್ಲಿ ಜಂಗಲ್ ರಾಜ್ ವ್ಯವಸ್ಥೆಯನ್ನು ನಡೆಯಲು ಸಿದ್ದರಾಮಯ್ಯ ಅವಕಾಶ ಮಾಡಿಕೊಟ್ಟಿದ್ದಾರೆ. ಆ ಮೂಲಕ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಮಾಡಿದ್ದಾರೆ ಎಂಬುದನ್ನೂ ರಾಜ್ಯ ಪಾಲರಿಗೆ ವಿವರಿಸಲಾಗಿದೆ ಎಂದರು.
ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಅವರನ್ನು ಎಸಿಬಿ ಅಧಿಕಾರಿಗಳು ಕರೆಸಿಕೊಂಡು ಯಡಿಯೂರಪ್ಪ ಅವರ ವಿರುದ್ಧ ಹೇಳಿಕೆ ನೀಡುವಂತೆ ಬೆದರಿಕೆ ಹಾಕಿರುವ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದು, ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜ್ಯ ಸರಕಾರದಿಂದ ಸ್ಪಷ್ಟೀಕರಣ ಕೇಳಬೇಕು. ಎಸಿಬಿ ಈ ರೀತಿ ಏಕಪಕ್ಷೀಯ ಮತ್ತು ರಾಜಕೀಯ ಪ್ರೇರಿತ ನಿರ್ಣಯ ಕೈಗೊಳ್ಳದಂತೆ ಎಚ್ಚರಿಕೆ ನೀಡಬೇಕು ಎಂದು ಮನವಿ ಮಾಡಿರುವು ದಾಗಿ ಹೇಳಿದರು.
ರಾಜ್ಯ ಸರಕಾರ ಎಸಿಬಿ ರಚನೆ ಮಾಡಿದಾಗಲೇ ಅದು ಕಾಂಗ್ರೆಸ್ ಏಜೆಂಟ್ ಆಗುತ್ತದೆ ಎಂದು ನಾವು ಹೇಳಿದ್ದೆವು. ಮುಖ್ಯಮಂತ್ರಿಗಳ ಮೇಲೆ ಅನೇಕ ಕೇಸ್‌ಗಳು ದಾಖಲಾಗಿದ್ದರೂ ಅದರ ಬಗ್ಗೆ ಗಮನ ಕೊಡಲಿಲ್ಲ. ಈಗ ಯಡಿಯೂರಪ್ಪ ವಿರುದ್ಧ ದೂರು ದಾಖಲಾದ ತತ್‌ಕ್ಷಣ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತಿರುವುದನ್ನು ನೋಡಿದಾಗ ಎಸಿಬಿಯು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರ ಏಜೆಂಟ್ ಎಂಬುದು ಸ್ಪಷ್ಟ.
– ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.