ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾರು ಢಿಕ್ಕಿ;ವ್ಯಕ್ತಿ ಗಂಭೀರ
Team Udayavani, Feb 21, 2019, 3:51 PM IST
ಚಿತ್ರದುರ್ಗ: ಸಿ.ಟಿ.ರವಿ ಅವರ ಕಾರು ಢಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹಿರಿಯೂರಿನ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರಿನ ಪ್ರವಾಸಿ ಮಂದಿರದ ಬಳಿ ನಡೆದಿದೆ ಎಂದು ವರದಿಯಾಗಿದೆ.
ಅಪಘಾತ ನಡೆಯುವ ವೇಳೆ ಶಾಸಕಿ ಪೂರ್ಣಿಮಾ ಅವರು ಕಾರಿನಲ್ಲಿರಲಿಲ್ಲ . ಫಾರ್ಚುನರ್ ಕಾರನ್ನು ಹಿಂದಕ್ಕೆ ಚಲಿಸುತ್ತಿರುವಾಗ ಅಬ್ದುಲ್ ರೆಹಮಾನ್ ಎನ್ನುವವರಿಗೆ ಢಿಕ್ಕಿಯಾಗಿದೆ. ರೆಹಮಾನ್ ಬೆನ್ನಿಗೆ ಗಂಭೀರವಾದ ಗಾಯವಾಗಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಪೂರ್ಣಿಮಾ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ನಮ್ಮ ಕಾರು ಢಿಕ್ಕಿ ಆಗಿದೆ ಎನ್ನುವುದು ಸುಳ್ಳು, ಆವ್ಯಕ್ತಿ ಕುಡಿದು ಬಿದ್ದಿದ್ದರು. ನಾನೇ ಮುಂದೆ ನಿಂತು ಅವರನ್ನು ಆಸ್ಪತ್ರೆಗೆ ಕಳುಹಿಸಿದ್ದೇನೆ ಎಂದಿದ್ದಾರೆ.
ಹಿರಿಯೂರು ಠಾಣೆಯಲ್ಲಿ ಶಾಸಕಿಯ ಕಾರು ಚಾಲಕ ಮಲ್ಲಿಕಾರ್ಜುನ ವಿರುದ್ಧ ಸೆಕ್ಷನ್ 279 ಮತ್ತು 337 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.