ಮತ್ತೆ ಡಿಸಿಎಂ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ ಭೇಟಿ; ಹಲವು ರೀತಿಯ ರಾಜಕೀಯ ಚರ್ಚೆ
Team Udayavani, May 24, 2024, 9:45 PM IST
ಬೆಂಗಳೂರು: ಅಲ್ಪಾವಧಿಯಲ್ಲಿ ಸತತ ಎರಡನೇ ಬಾರಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡುವ ಮೂಲಕ ಕುತೂಹಲ ಕೆರಳಿಸಿದ್ದಾರೆ.
ಈ ಹಿಂದೆ ಮೂರು ಶಿಕ್ಷಕರು ಮತ್ತು ಮೂರು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಶಿವರಾಂ ಹೆಬ್ಬಾರ್ ಅವರು ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ಇದಾದ ಬಳಿಕ ಈಗ ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ನಡೆಯಲಿರುವ ವಿಧಾನ ಪರಿಷತ್ತಿನ 11 ಸ್ಥಾನಗಳ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಮತ್ತೆ ಭೇಟಿ ನೀಡಿರುವುದು ಕಾಕತಾಳೀಯವಾಗಿದ್ದರೂ, ಹಲವು ರೀತಿಯ ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಸದಾಶಿವ ನಗರದಲ್ಲಿರುವ ಡಿಸಿಎಂ ಮನೆಗೆ ಆಗಮಿಸಿದ್ದ ಶಿವರಾಂಹೆಬ್ಬಾರ್, ಪರಿಷತ್ತಿನ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಶಾಸಕರು, ಕ್ಷೇತ್ರದ ಕೆಲಸಕ್ಕೆ ಅಂತ ಪದೇಪದೆ ಬರುತ್ತೇನೆ. ಒಬ್ಬ ಶಾಸಕನಾಗಿ ಉಪಮುಖ್ಯಮಂತ್ರಿಯನ್ನು ಭೇಟಿಯಾಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಬಿಜೆಪಿಯಿಂದ ನೋಟಿಸ್ ಕೊಟ್ಟಿದ್ದಾರೆ. ಪಕ್ಷ ಕ್ರಮ ಕೈಗೊಂಡರೇ ನಿಮ್ಮ ನಿಲುವು ಏನು ಎಂಬ ಪ್ರಶ್ನೆಗೆ, ಕ್ರಮ ತೆಗೆದುಕೊಂಡಾಗ ಹೇಳುತ್ತೇನೆ ಎಂದಷ್ಟೇ ಹೇಳಿದರು. ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಶಿವರಾಂ ಹೆಬ್ಬಾರ್ ನನ್ನ ಒಳ್ಳೆಯ ಗೆಳೆಯ. ಅವರು ಆಗಾಗ್ಗೆ ಭೇಟಿಯಾಗುತ್ತಲೇ ಇರುತ್ತಾರೆ ಎಂದು ಹೇಳಿದರು.
ಅಂದ ಹಾಗೆ, ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೈರುಹಾಜರಾಗಿದ್ದ ಶಿವರಾಂ ಹೆಬ್ಬಾರ್, ಬಳಿಕ ಪರಿಷತ್ತಿನ ಚುನಾವಣೆ ಚುರುಕುಗೊಂಡಾಗಲೇ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.