ವಿಶ್ವಾಸಮತಕ್ಕೆ ಸಮಯ ನಿಗದಿಗೆ ಒತ್ತಾಯಿಸಲು ಬಿಜೆಪಿ ಸಜ್ಜು

Team Udayavani, Jul 22, 2019, 3:00 AM IST

BSY

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಸಮಯ ನಿಗದಿಪಡಿಸುವಂತೆ ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಮೇಲೆ ಒತ್ತಡ ಹೇರಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಶಾಸಕರು ವಾಸ್ತವ್ಯ ಹೂಡಿರುವ ಯಲಹಂಕ ಬಳಿಯ ರಮಡಾ ಹೋಟೆಲ್‌ನಲ್ಲಿ ಭಾನುವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಸೋಮವಾರ ವಿಶ್ವಾಸಮತ ಯಾಚನೆಗೆ ನಿರ್ದಿಷ್ಟ ಸಮಯ ನಿಗದಿಪಡಿಸಬೇಕು ಎಂದು ಒತ್ತಾಯಿಸಬೇಕು. ಯಾವುದೇ ಕಾರಣಕ್ಕೂ ಪ್ರಚೋದನೆಗೆ ಒಳಗಾಗಬಾರದು. ಯಾವುದೇ ಪ್ರತಿಕ್ರಿಯೆ ನೀಡದೆ ತಾಳ್ಮೆಯಿಂದ ವರ್ತಿಸಬೇಕು ಎಂಬುದಾಗಿ ಸೂಚಿಸಿದರು ಎಂದು ಮೂಲಗಳು ಹೇಳಿವೆ.

ಬಿಜೆಪಿಯ ಯಾವ ಶಾಸಕರೂ ಅನ್ಯ ಪಕ್ಷಗಳ ನಾಯಕರ ಸಂಪರ್ಕಕ್ಕೆ ಸಿಗದಂತೆ ತಡೆಯುವುದರ ಜತೆಗೆ ಎಲ್ಲರನ್ನೂ ಒಗ್ಗಟ್ಟಾಗಿ ಇಟ್ಟುಕೊಳ್ಳುವತ್ತ ನಾಯಕರು ಗಮನ ಹರಿಸಿದ್ದಾರೆ. ಜತೆಗೆ, ಅತೃಪ್ತ ಶಾಸಕರು ಕಲಾಪದಲ್ಲಿ ಪಾಲ್ಗೊಳ್ಳದಿರುವುದಾಗಿ ಪುನರುಚ್ಚರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತುಸು ನಿರಾಳರಾದಂತಿದ್ದಾರೆ.

ಅನುಮತಿ ಪಡೆದು ತಮ್ಮ ಕ್ಷೇತ್ರಗಳಿಗೆ ತೆರಳಿದ್ದ ಕೆಲ ಶಾಸಕರು ಭಾನುವಾರ ಸಂಜೆ ಹೊತ್ತಿಗೆ ರೆಸಾರ್ಟ್‌ಗೆ ಮರಳಿದರು. ರೆಸಾರ್ಟ್‌ನಲ್ಲಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಂಗಳೂರು ಹಾಗೂ ಸುತ್ತಮುತ್ತ ನೆಲೆಸಿರುವ ಶಾಸಕರನ್ನು ಹೊರತುಪಡಿಸಿ ಬಹುತೇಕ ಶಾಸಕರು ರೆಸಾರ್ಟ್‌ನಲ್ಲೇ ವಾಸ್ತವ್ಯ ಮುಂದುವರಿಸಿದ್ದಾರೆ.

ವಿಳಂಬ ಮಾಡಿದರೆ ಪ್ರಜಾತಂತ್ರಕ್ಕೆ ದ್ರೋಹ: ಸೋಮವಾರ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಸುವ ಭರವಸೆಯನ್ನು ಮುಖ್ಯಮಂತ್ರಿ ಹಾಗೂ ವಿಧಾನಸಭಾಧ್ಯಕ್ಷರು ನೀಡಿದ್ದು, ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ವಿಳಂಬ ಮಾಡಿದರೆ ಪ್ರಜಾತಂತ್ರಕ್ಕೆ ದ್ರೋಹ ಮಾಡಿದಂತಾಗಲಿದೆ ಎಂದು ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದ ಡಾಲರ್ ಕಾಲೋನಿ ನಿವಾಸದ ಬಳಿ ಭಾನುವಾರ ಪ್ರತಿಕ್ರಿಯಿಸಿದ ಅವರು, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತ ಮಾಡಬಾರದು ಎಂದು ಈಗಾಗಲೇ ಸುಪ್ರೀಂಕೋರ್ಟ್‌ ಸೂಚಿಸಿದೆ. ರಾಜೀನಾಮೆ ಸಲ್ಲಿಸಿರುವ 15 ಶಾಸಕರು ವಿಧಾನಸಭೆ ಕಲಾಪಕ್ಕೆ ಹೋಗಬಹುದು, ಇಲ್ಲವೇ ಹೋಗದಿರಬಹುದು ಎಂದು ತಿಳಿಸಿದೆ. ಹಾಗಾಗಿ, ಕಾಂಗ್ರೆಸ್‌ ವಿಪ್‌ ಜಾರಿಗೊಳಿಸಿರೂ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.