Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್ ಸಿಂಗ್!
Team Udayavani, Sep 28, 2023, 11:25 PM IST
ಬೆಂಗಳೂರು: ಕಾವೇರಿ ಬಗ್ಗೆ ಪ್ರಧಾನಿಮಧ್ಯಸ್ಥಿಕೆಗಾಗಿ ರಾಜ್ಯ ಸರಕಾರ ಒತ್ತಾಯಿಸುತ್ತಿರುವುದರ ಮಧ್ಯೆಯೇ, ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿ ಮಾಡಿ ವಿವಾದ ಬಗೆಹರಿಸುವಂತೆ ಮನವಿ ಮಾಡಲು ಸತತ 48 ಗಂಟೆಗಳ ಕಾದು ಬರಿಗೈಯಲ್ಲಿ ಮರಳಿರುವ ಸಂಗತಿ ಬಹಿರಂಗವಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಈ ವಿಚಾರ ತಿಳಿಸಿದ ಲೆಹರ್ ಸಿಂಗ್, ಬೆಂಗಳೂರಿನಲ್ಲಿ ಉಂಟಾಗಿರುವ ಕುಡಿಯುವ ನೀರಿನ ಬಿಕ್ಕಟ್ಟು, ಕರ್ನಾಟಕದ ಬರ ಪರಿಸ್ಥಿತಿ ಬಗ್ಗೆ ಸ್ಟಾಲಿನ್‌ಗೆ ಮನವರಿಕೆ ಮಾಡಲು ಬಯಸಿದ್ದೆ. ಈ ಸಮಸ್ಯೆಯನ್ನು ಪ್ರಾದೇಶಿಕ ಸಂಘರ್ಷವಾಗಿ ನೋಡುವ ಬದಲು, ಮಾನವೀಯ ನೆಲೆಯಲ್ಲಿ ಪರಿಗಣಿಸುವಂತೆ ಆಗ್ರಹಿಸಿ ಅವರಿಗೆ ಪತ್ರವನ್ನೂ ಬರೆದಿದ್ದೇನೆ ಎಂದು ತಿಳಿಸಿದರು. ನಾನು ಚೆನ್ನೈಗೆ ಹೋಗಿ ಎರಡು ದಿನಗಳ ಕಾಲ ಅಲ್ಲಿದ್ದರೂ ಸ್ಟಾಲಿನ್ ಭೇಟಿಗೆ ಅವಕಾಶ ಸಿಗಲಿಲ್ಲ. ನನ್ನ ಭೇಟಿ ರಾಜಕೀಯ ರಹಿತವಾಗಿತ್ತು ಎಂದು ಹೇಳಿದರು.
ಡಿಎಂಕೆ ಸಂಸದರು ಮತ್ತು ತಮಿಳುನಾಡು ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಇದು ಅತ್ಯಂತ ಸಕಾರಾತ್ಮಕವಾಗಿತ್ತು. ಡಿಎಂಕೆ ನಾಯಕರು ನಾನು ನೀಡಿದ ಸಲಹೆಗಳನ್ನು ಸ್ವೀಕರಿಸಿದರು. ಎರಡೂ ಸರಕಾರಗಳ ನಡುವಿನ ಚರ್ಚೆಯಿಂದ ಪರಿಹಾರ ದೊರೆಯುತ್ತದೆ ಎಂಬ ನಿಲುವನ್ನು ಅವರೆಲ್ಲರೂ ಹೊಂದಿದ್ದಾರೆ. ಆದ್ದರಿಂದ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಭೇಟಿಯಾಗಿ ಮಾತುಕತೆ ನಡೆಸಿದರೆ ಕಾವೇರಿ ಬಿಕ್ಕಟ್ಟಿಗೆ ಉತ್ತಮ ಪರಿಹಾರ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ
Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.