ಬಿಜೆಪಿ, ಯಾವುದೇ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಸಿ.ಟಿ.ರವಿ
Team Udayavani, Aug 1, 2022, 10:35 PM IST
ಬೆಂಗಳೂರು: ಬಿಜೆಪಿ, ಯಾವುದೇ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ನಮ್ಮದು ಕೇಡರ್ ಆಧಾರಿತ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಲವು ಕಾರಣಕ್ಕೆ ಸ್ವಾಭಾವಿಕವಾಗಿ ಅಸಮಾಧಾನ ಇರುತ್ತದೆ. ಕೆಲವರನ್ನು ವ್ಯಕ್ತಿಗತವಾಗಿ, ಇನ್ನೂ ಹಲವರನ್ನು ಗುಂಪಾಗಿ ಕೂತು ಮಾತನಾಡಿಸುವ ಕೆಲಸ ಇರುತ್ತದೆ. ದವಡೆಯೂ ನಮ್ಮದೇ; ನಾಲಿಗೆಯೂ ನಮ್ಮದೇ. ಹಲ್ಲು ನಾಲಿಗೆಗೆ ಕಚ್ಚಿದರೆ ಹಲ್ಲು ಉದುರಿಸಿಕೊಳ್ಳುವ ಕೆಲಸ ಯಾರೂ ಮಾಡುವುದಿಲ್ಲ ಎಂದು ಹೇಳಿದರು.
ಪಕ್ಷದ ಸಂಕಷ್ಟದ ಕಾಲದಲ್ಲೂ ವಿಚಾರಕ್ಕಾಗಿಯೇ ಹೋರಾಟ ಮಾಡಿದ ಪ್ರತಿ ಕಾರ್ಯಕರ್ತರೂ ನಮ್ಮ ಪಕ್ಷದ ಆಸ್ತಿ. ಪಂಚಾಯತ್ ಸದಸ್ಯರೂ ಅಲ್ಲದ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ. ಸಾವಿರಾರು ಜನ ಕಾರ್ಯಕರ್ತರು ಮೆಟ್ಟಿಲಾಗಿ ಒಬ್ಬ ನಾಯಕನನ್ನು ಮೇಲೆ ಏರಿಸಿರುತ್ತಾರೆ. ಹಾಗಾಗಿ, ಆ ಮೆಟ್ಟಿಲನ್ನು ಮರೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಕಸಕಡ್ಡಿ ಸಹಿಸಿಕೊಳ್ಳಬೇಕು
ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರ ಬೇಕೆಂದಾಗ ಅತಿವೃಷ್ಟಿಯಲ್ಲಿ ಬರುವ ಕಸಕಡ್ಡಿಯನ್ನು ಸಹಿಸಿಕೊಳ್ಳಬೇಕು. ಡ್ಯಾಂ ತುಂಬಿದಾಗ ಮಾತ್ರ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತದೆ. ಆಗ ಪವರ್ ಟರ್ಬೆçನ್ ತಿರುಗುತ್ತದೆ. ಅತಿವೃಷ್ಟಿ ಆದಾಗ ವೇಗವಾಗಿ ಅಣೆಕಟ್ಟು ತುಂಬುತ್ತದೆ. ಅದನ್ನು ನೀರಾವರಿ, ವಿದ್ಯುತ್ ಉತ್ಪಾದನೆ ಮಾಡಲು ಬಳಸಬಹುದು. ತೇಲಿಬಂದ ಕಸಕಡ್ಡಿ ಡ್ಯಾಂನಲ್ಲಿ ಫಿಲ್ಟರ್ ಆಗುತ್ತದೆ. ಫಿಲ್ಟರ್ ಮಾಡುವುದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ.
-.ಟಿ.ರವಿ
ಚಕ್ರವರ್ತಿ ಸೂಲಿಬೆಲೆ ಅವರು ಒಬ್ಬ ಅಪ್ಪಟ ರಾಷ್ಟ್ರವಾದಿ. ಅವರು ವ್ಯತಿರಿಕ್ತವಾಗಿ ಮಾತನಾಡಿದ್ದರೆ ಅವರ ಜೊತೆ ವೈಯಕ್ತಿಕವಾಗಿ ಮಾತನಾಡುತ್ತೇವೆ. ಹತ್ತಾರು ಕಾರಣಕ್ಕೆ ಸಿಟ್ಟು ಬಂದಿರಬಹುದು. ಆ ಸಿಟ್ಟನ್ನು ಶಮನ, ಸಮಾಧಾನ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.