ಉಪಚುನಾವಣೆ ಪ್ರಚಾರಕ್ಕೆ ಬಿಜೆಪಿ ಸಿದ್ಧತೆ
Team Udayavani, Oct 30, 2019, 3:00 AM IST
ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು, ರಾಜ್ಯದ ಕೇಂದ್ರ ಸಚಿವರು, ರಾಜ್ಯ ಬಿಜೆಪಿ ಅಧ್ಯಕ್ಷರು, ಸಚಿವರು, ಸಂಘಟನಾ ಕ್ಷೇತ್ರದ ಪ್ರಮುಖರು ಸೇರಿ ಹಲವರಿಂದ ಚುನಾವಣಾ ಪ್ರಚಾರ ನಡೆಸಲು ಬಿಜೆಪಿ ಸಿದ್ಧತೆ ಆರಂಭಿಸಿದೆ.
ಉಪಚುನಾವಣಾ ನೀತಿ ಸಂಹಿತೆಯು ನ.11ರಿಂದ ಜಾರಿಯಾಗಲಿದ್ದು, ಅಂದಿನಿಂ ದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ನಡುವೆ ಅನರ್ಹತೆಗೊಂಡ ಶಾಸಕರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸುಪ್ರೀಂ ಕೋರ್ಟ್ ತೀರ್ಪು ಹೊರಬರಬೇಕಿದೆ. ಹಾಗಾಗಿ ಪ್ರಚಾರದ ವೇಳಾಪಟ್ಟಿಯನ್ನೂ ಸಿದ್ಧಪಡಿಸುವ ಕಾರ್ಯಕ್ಕೆ ರಾಜ್ಯ ಬಿಜೆಪಿ ಅಣಿಯಾಗುತ್ತಿದೆ.
ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಸದ್ಯದಲ್ಲೇ ಸಿದ್ಧತೆ ಆರಂಭಿಸಲಾಗುವುದು. ಮುಖ್ಯಮಂತ್ರಿ ಗಳು, ರಾಜ್ಯದ ಕೇಂದ್ರ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರು, ಸಚಿವರು, ಸಂಘಟನಾ ಕ್ಷೇತ್ರದ ಪ್ರಮುಖರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರ ಬೇಕು. ಅದರಂತೆ ಪಕ್ಷ ಟಿಕೆಟ್ ನೀಡಿದವರ ಪರವಾಗಿ ಎಲ್ಲರೂ ಪ್ರಚಾರ ನಡೆಸಿ ಗೆಲುವಿಗೆ ಶ್ರಮಿಸಬೇಕಿದೆ. ಅದರಂತೆ ಸದ್ಯ ದಲ್ಲೇ ಸಭೆ ನಡೆಸಿ ಪ್ರಚಾರ ವೇಳಾಪಟ್ಟಿ ಸಿದ್ಧಪಡಿಸಲಾಗುವುದು ಎಂದು ಬಿಜೆಪಿ ಪ್ರ.ಕಾರ್ಯದರ್ಶಿಯೊಬ್ಬರು ತಿಳಿಸಿದರು.
ಸರಳ ಆಚರಣೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ನ.2ಕ್ಕೆ 100 ದಿನ ಪೂರೈಸುತ್ತಿದ್ದು, ಆ ಸಂದರ್ಭವನ್ನು ಸರ್ಕಾರದ ವತಿಯಿಂದ ಸರಳವಾಗಿ ಆಚರಿಸಲು ಚಿಂತನೆ ನಡೆದಂತಿದೆ. ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ 100 ದಿನ ಪೂರ್ಣಗೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ನೆರೆ, ಭಾರೀ ಮಳೆಯಿಂದಾಗಿ ಲಕ್ಷಾಂತರ ಮಂದಿ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರ ಶತದಿನ ಪೂರೈಸಿದ ಸಂದರ್ಭವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.