ರಾಜ್ಯದಲ್ಲಿ ಯುಪಿ ಮಾದರಿ ಚುನಾವಣೆಗೆ ಬಿಜೆಪಿ ಸಿದ್ಧತೆ
Team Udayavani, Apr 29, 2022, 6:50 AM IST
ಬೆಂಗಳೂರು: ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಮರಳಿ ಅಧಿಕಾರ ಪಡೆದಿರುವ ಬಿಜೆಪಿ, ದಕ್ಷಿಣದ ಹೆಬ್ಟಾಗಿಲು ಕರ್ನಾಟಕದಲ್ಲೂ ಅಧಿಕಾರ ಉಳಿಸಿಕೊಳ್ಳಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಲು ನಿರ್ಧರಿಸಿದೆ. ಅದಕ್ಕಾಗಿ ಅಭಿವೃದ್ಧಿ ಮಂತ್ರವನ್ನೇ ಮುಂದಿಟ್ಟುಕೊಂಡು “ಸೈಲೆಂಟ್ ಓಟರ್’ಗಳನ್ನು ಗಟ್ಟಿಗೊಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ.
ರಾಜ್ಯದ ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ ಮೂರಂಕಿ ಮುಟ್ಟುವುದು ಕಷ್ಟ ಎಂಬ ಮಾಹಿತಿ ಪಕ್ಷದ ವರಿಷ್ಠರಿಗೆ ಲಭ್ಯವಾಗಿದ್ದು, 150 ಸ್ಥಾನಗಳ ಗುರಿ ಮುಟ್ಟಲು ಉತ್ತರ ಪ್ರದೇಶ ಮಾದರಿ ಅನುಸರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಏನಿದು ಯುಪಿ ಮಾದರಿ? :
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರ ಐದು ವರ್ಷಗಳ ಆಡಳಿತದ ಬಗ್ಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಯೋಗಿ ಹಿಂದುತ್ವದ ಉಗ್ರ ಪ್ರತಿಪಾದಕರಾಗಿದ್ದರು. ಅವರು ಐದು ವರ್ಷಗಳಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಹಾಗೂ ಅವರಿಂದ ಬೇರೆ ಯಾವ ಬೇಡಿಕೆಗಳಿವೆ ಎಂದು ಫಲಾನುಭವಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದಾರೆ.
ಮನೆಮನೆಗೆ ಭೇಟಿ :
ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅರ್ಹರಿಗೆ ಸುಲಭವಾಗಿ ತಲುಪಿಸಲಾಗಿದೆ. ಇದಕ್ಕಾಗಿ ಯಾರಿಗೂ ಲಂಚ ನೀಡಿಲ್ಲ ಹಾಗೂ ಫಲಾನುಭವಿಗಳು ಸರಕಾರಿ ಕಚೇರಿಗಳಿಗೆ ಅಲೆದಿಲ್ಲ. ಯೋಜನೆಗಳು ನೇರವಾಗಿ ಫಲಾನುಭವಿಗಳ ಮನೆಗೇ ತಲುಪಿದೆ. ಈ ಯೋಜನೆಗಳ ಫಲಾನುಭವಿಗಳು ಪ್ರತಿಯೊಂದು ಮನೆಯಲ್ಲೂ ಇದ್ದಾರೆ ಎನ್ನುವುದು ಬಿಜೆಪಿ ಲೆಕ್ಕಾಚಾರ.
ಪ್ರಮುಖವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಹಣವು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗುತ್ತಿದೆ. ಉಜ್ವಲ ಯೋಜನೆ ಮೂಲಕ ಉಚಿತ ಅಡುಗೆ ಅನಿಲ ವಿತರಣೆ, ಕೊರೊನಾ ಸಂದರ್ಭದಲ್ಲಿ ಉಚಿತ ಆಹಾರ ಪದಾರ್ಥ ವಿತರಣೆ, ವೃದ್ಧಾಪ್ಯ, ವಿಧವಾ ವೇತನ ಹೆಚ್ಚಳ, ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ, ವಿವಿಧ ಯೋಜನೆಗಳಡಿಯಲ್ಲಿ ಮನೆ ನಿರ್ಮಾಣ ಮುಂತಾದ ಯೋಜನೆಗಳ ಫಲಾನುಭವಿಗಳನ್ನು ನೇರವಾಗಿ ಭೇಟಿ ಮಾಡುವ ಕಾರ್ಯ ಆರಂಭವಾಗಿದೆ.
ಸರಕಾರದ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ? ಅರ್ಹ ಫಲಾನುಭವಿಗಳಿದ್ದರೂ, ಯೋಜನೆಗಳು ತಲುಪುವಲ್ಲಿ ಆಗಿರುವ ಲೋಪಗಳೇನು ಎನ್ನುವುದನ್ನು ತಿಳಿದುಕೊಳ್ಳಲು ಬಿಜೆಪಿಯ ಪ್ರತಿ ಬೂತ್ ಮಟ್ಟದಲ್ಲಿರುವ ಪಕ್ಷದ ಪೇಜ್ ಪ್ರಮುಖರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಒಂದು ಪೇಜ್‌ಗೆ ಆರು ಪ್ರಮುಖರು ಫಲಾನುಭವಿಗಳಿಗೆ ತಲುಪಿರುವ ಯೋಜನೆಗಳ ಮಾಹಿತಿ ಪಡೆಯುವುದರ ಜತೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕೊಡುಗೆಗಳನ್ನು ಮನವರಿಕೆ ಮಾಡಿಕೊಡುವ ಕೆಲಸ ಆರಂಭಿಸಿದ್ದಾರೆ. ಜತೆಗೆ ಅವರ ಬೇಡಿಕೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಶೇ. 25ರಷ್ಟು ಪೇಜ್ ಪ್ರಮುಖರು ಫಲಾನುಭವಿಗಳ ಮನೆಗಳನ್ನು ತಲುಪಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕೇಂದ್ರ ಹಾಗೂ ರಾಜ್ಯ ಡಬಲ್ ಎಂಜಿನ್ ಸರಕಾರದ ಪ್ರಯೋಜನ ಪಡೆದಿರುವವರು ದೊಡ್ಡ ಪ್ರಮಾಣದಲ್ಲಿದ್ದಾರೆ. ಅವರೆಲ್ಲ ಸೈಲೆಂಟ್ ಓಟರ್ಸ್. ಅವರು ಯಾವುದೇ ಸಮೀಕ್ಷೆಗಳ ವ್ಯಾಪ್ತಿಗೆ ಬರುವುದಿಲ್ಲ. ಅವರನ್ನು ಹುಡುಕಿ ಅವರಿಗೆ ಬೇರೆ ಏನು ಬೇಕು ಎನ್ನುವುದನ್ನು ಕೇಳಿ ಒದಗಿಸುವ ಕೆಲಸ ಮಾಡಲಾಗುತ್ತಿದೆ. -ಎಂ.ಜಿ. ಮಹೇಶ್, ಬಿಜೆಪಿ ಮುಖ್ಯ ವಕ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.