ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ
Team Udayavani, Feb 15, 2019, 12:59 AM IST
ಬೆಂಗಳೂರು: ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿದರು.
ರಾಜಧಾನಿ ಬೆಂಗಳೂರು ಸೇರಿ ಮಂಡ್ಯ, ಮೈಸೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಸೇರಿ ಹಲವೆಡೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾ ಜೆಡಿಎಸ್ ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ಹೋಗುತ್ತಿರುವಾಗಲೇ ಪೊಲೀಸರು ಪ್ರತಿಭಟನಾಕಾರರನ್ನು ಅಡ್ಡಗಟ್ಟಿ ಬಂಧಿಸಿ, ನಂತರ ಬಿಡುಗಡೆ ಮಾಡಿದರು.
ಶಾಸಕರ ಮನೆಗೆ ಎ.ಮಂಜು ಭೇಟಿ: ಈ ನಡುವೆ, ಹಾಸನದಲ್ಲಿರುವ ಶಾಸಕ ಪ್ರೀತಂ ಗೌಡ ನಿವಾಸಕ್ಕೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎ.ಮಂಜು ಅವರು ಗುರುವಾರ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ಎ.ಮಂಜು, ಜೆಡಿಎಸ್ ಕಾರ್ಯಕರ್ತರು ಶಾಸಕರ ನಿವಾಸದ ಬಳಿ ಗಲಾಟೆ ಮಾಡಿ ಕಲ್ಲು ತೂರಿರುವುದು ಸಮ್ಮಿಶ್ರ ಸರ್ಕಾರದ ಪಾಲುದಾರ ಪûಾವಾಗಿರುವ ನಮಗೂ ಮುಜುಗರವನ್ನುಂಟು ಮಾಡಿದೆ. ಶಾಸಕರ ನಿವಾಸದ ಮೇಲೆ ದಾಳಿ ನಡೆಸುವುದು ಮತದಾರರಿಗೆ ಮಾಡಿದ ಅವಮಾನ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.