BJP ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನಾರಾಯಣಸಾ ಬಾಂಡಗೆಗೆ ಅವಕಾಶ
ಯುಪಿಯಿಂದ ಡಾ. ಸುಧಾಂಶು ತ್ರಿವೇದಿ ಸೇರಿ ಏಳು ಮಂದಿಯ ಹೆಸರು ಪ್ರಕಟ
Team Udayavani, Feb 11, 2024, 8:33 PM IST
ಹೊಸದಿಲ್ಲಿ: ವಿವಿಧ ರಾಜ್ಯಗಳಲ್ಲಿ ನಡೆಯುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ರವಿವಾರ ಅಭ್ಯರ್ಥಿಗಳನ್ನು ಘೋಷಿಸಿದ್ದು ಕರ್ನಾಟಕದಿಂದ ಬಿಜೆಪಿ ಕೇಂದ್ರೀಯ ಚುನಾವಣ ಸಮಿತಿ ನಾರಾಯಣಸಾ ಕೃಷ್ಣಸಾ ಬಾಂಡಗೆ ಅವರ ಹೆಸರನ್ನು ಪ್ರಕಟಿಸಿದೆ.
ಬಿಹಾರದ ಎರಡು ಸ್ಥಾನಗಳಿಗೆ ಧರ್ಮಶೀಲಾ ಗುಪ್ತ ಮತ್ತು ಡಾ. ಭೀಮ್ ಸಿಂಗ್ , ಛತ್ತೀಸಗಡಕ್ಕೆ ರಾಜಾ ದೇವೇಂದ್ರ ಪ್ರತಾಪ್ ಸಿಂಗ್, ಹರ್ಯಾಣದಲ್ಲಿ ಪಕ್ಷದ ಮಾಜಿ ಅಧ್ಯಕ್ಷ ಸುಭಾಶ್ ಬರಲಾ ಅವರನ್ನು ಅಭ್ಯರ್ಥಿಗಳನ್ನಾಗಿ ಪ್ರಕಟಿಸಲಾಗಿದೆ.
ಉತ್ತರ ಪ್ರದೇಶದ ಏಳು ಸ್ಥಾನಗಳಿಗೆ ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಆರ್.ಪಿ. ಎನ್ ಸಿಂಗ್, ಡಾ. ಸುಧಾಂಶು ತ್ರಿವೇದಿ, ಚೌಧರಿ ತೇಜವೀರ್ ಸಿಂಗ್, ಸಾಧನಾ ಸಿಂಗ್, ಅಮರಪಾಲ್ ಮೌರ್ಯ, ಡಾ. ಸಂಗೀತಾ ಬಲವಂತ್ ಮತ್ತು ನವೀನ್ ಜೈನ್ ಅಭ್ಯರ್ಥಿಗಳಾಗಿದ್ದಾರೆ. ಉತ್ತರಾಖಂಡ್ ನಲ್ಲಿ ಮಹೇಂದ್ರ ಭಟ್ ಮತ್ತು ಪಶ್ಚಿಮ ಬಂಗಾಳದಿಂದ ಸಮಿಕ್ ಭಟ್ಟಾಚಾರ್ಯ ಅವರು ಕಣಕ್ಕಿಳಿಯಲಿದ್ದಾರೆ.
ಬಾಗಲಕೋಟೆ ಜಿಲ್ಲೆಯವರಾದ ಬಾಂಡಗೆ ಅವರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ, ವಿಧಾನಪರಿಷತ್ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.