2000 ಕೋಟಿ ರೂ. ಆರೋಪ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಬಿಜೆಪಿಯಿಂದ ಲೀಗಲ್ ನೋಟಿಸ್
Team Udayavani, Jul 31, 2020, 12:58 PM IST
ಬೆಂಗಳೂರು: ಕೋವಿಡ್ ಉಪಕರಣಗಳ ಖರೀದಿಯಲ್ಲಿ 2000 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಲೀಗಲ್ ನೋಟಿಸ್ ರವಾನಿಸಿದೆ.
ರಾಜ್ಯ ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್. ರವಿಕುಮಾರ್, ಅಶ್ವತ್ಥ ನಾರಾಯಣ, ಸುಳ್ಳು ಆರೋಪ ಮಾಡುವ ಮೂಲಕ ಸರ್ಕಾರ ಹಾಗೂ ಪಕ್ಷದ ಘನತೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು 15 ದಿನದಲ್ಲಿ ಬಹಿರಂಗವಾಗಿ ರಾಜ್ಯದ ಜನತೆಗೆ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.
ಕೋವಿಡ್ 19 ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರಕಾರ ಅವ್ಯವಹಾರ ನಡೆದಿದೆ. ಒಟ್ಟು ಎರಡು ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಕಾಂಗ್ರೆಸ್ ಕಳೆದ ವಾರ ಆರೋಪಿಸಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.