BJP: ಸಿದ್ದರಾಮಯ್ಯ, ಡಿಕೆಶಿ ಜೊತೆ ಹೊಂದಾಣಿಕೆಗೆ ಅಧ್ಯಕ್ಷ ಮಾಡಿಲ್ಲ, ಹುಷಾರ್: ಲಿಂಬಾವಳಿ
ನಮ್ಮ ಜೊತೆ ಬರಲಾಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ, ಬಿಎಸ್ವೈ, ವಿಜಯೇಂದ್ರ ವಿರುದ್ಧ ಮಾಜಿ ಸಚಿವ ಕಿಡಿ
Team Udayavani, Dec 1, 2024, 10:30 PM IST
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಅಧ್ಯಕ್ಷ ಮಾಡಿಲ್ಲ ಹುಷಾರ್ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ (Aravind Limbavali) ಎಚ್ಚರಿಕೆ ಕೊಟ್ಟಿದ್ದಾರೆ.
ನಗರದ ಗಾಂಧಿ ಭವನದಲ್ಲಿ ವಕ್ಫ್ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ವಾಗ್ದಾಳಿ ನಡೆಸಿದರು. ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಬೀದರ್ದಿಂದ ವಕ್ಫ್ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು ಎಂದು ಪ್ರಶ್ನಿಸಿದರು.
ಪಕ್ಷ ಕಟ್ಟಿದವರು ನಾವು:
ವಕ್ಫ್ ಎನ್ನುವುದು ದೇಶಕ್ಕೆ ಹಿಡಿದಿರುವ ಕ್ಯಾನ್ಸರ್. ಈ ರೋಗಕ್ಕೆ ಮದ್ದು ನೀಡಲು ಶಾಸಕ ಬಸನಗೌಡ ಯತ್ನಾಳ ಹೋರಾಟ ಆರಂಭಿಸಿದ್ದಾರೆ. ಸುಮ್ಮನೆ ಇದ್ದರೆ ನಮ್ಮ ಮನೆಗೂ ಈ ದೆವ್ವ ಸೇರಿಕೊಳ್ಳುತ್ತದೆ. ಪಕ್ಷ ಕಟ್ಟಿದವರು ನಾವು, ಯತ್ನಾಳ್ ಅವರನ್ನ ಉಚ್ಚಾಟನೆ ಮಾಡಿಸುತ್ತೇವೆ ಅಂತಾರೆ. ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಗೊತ್ತಾಗುತ್ತಿಲ್ಲ. ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರು ವಕ್ಫ್ ಬೋರ್ಡ್ ನಿಷೇಧಿಸಿದ್ದಾರೆ ಅವರಿಗೆ ಅಭಿನಂದಿಸಬೇಕು.
ಲೋಕಸಭೆಯಲ್ಲಿ 7 ಸೀಟು ಸೋತರೂ ಯಡಿಯೂರಪ್ಪ ಆತ್ಮಾವಲೋಕನ ಮಾಡಿಕೊಳ್ಳಲಿಲ್ಲ. ಯಾರಿಗೂ ಕರೆ ಮಾಡಲಿಲ್ಲ. ವಾಲ್ಮೀಕಿ ಹಗರಣದ ವಿರುದ್ಧ ನಾವು ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆಗೂ ಅನುಮತಿ ಕೊಡಿಸಲಿಲ್ಲ. ಈಗ ಜನಪರ ಕೆಲಸಕ್ಕಾಗಿ ಹೋರಾಟ ಶುರುವಾಗಿದೆ. ಉಪಚುನಾವಣೆ ಮುಗಿದು ಬಹಳ ದಿನವಾಯಿತು. ವಕ್ಫ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಹಾದಿ ಬೀದಿಯಲ್ಲಿ ಮಾತಾಡುತ್ತಾರೆ ಅಂತಾ ನಮಗೆ ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.